Arrested: ನಿಷೇಧಿತ ಇ-ಸಿಗರೆಟ್ ಮಾರಾಟ: ನಾಲ್ವರ ಸೆರೆ
Team Udayavani, Sep 14, 2024, 9:03 PM IST
ಬೆಂಗಳೂರು: ನಿಷೇಧಿತ ಇ-ಸಿಗರೆಟ್ಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಜೆ.ಜೆ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಲ್ಸನ್ ಗಾರ್ಡನ್ ನಿವಾಸಿ ಮೊಹಮ್ಮದ್ ಜವಾದುಲ್ಲಾ (53), ಮೈಸೂರು ರಸ್ತೆಯ ಶಾಮಣ್ಣ ಗಾರ್ಡನ್ ನಿವಾಸಿ ಮುಜೀಬ್ ಉರ್ ರೆಹಮಾನ್ (21), ಉಮೇಜ್ ಖಾನ್ (20) ಹಾಗೂ ಜೆ.ಜೆ.ನಗರದ ವಿನಾಯಕನಗರ ನಿವಾಸಿ ಮೊಹಮ್ಮದ್ ಮಜರ್ (38) ಬಂಧಿತರು. ಆರೋಪಿಗಳಿಂದ 1.50 ಲಕ್ಷ ರೂ. ಮೌಲ್ಯದ 106 ನಿಷೇಧಿತ ಎಲೆಕ್ಟ್ರಾನಿಕ್ ಇ ಸಿಗರೆಟ್, ಎರಡು ಚಾರ್ಜರ್, 12 ರೀಫಿಲ್ಗಳನ್ನು ಜಪ್ತಿ ಮಾಡಲಾಗಿದೆ.
ಆರೋಪಿಗಳು ಪಾದರಾಯನಪುರ ಬಳಿಯ ಅರ್ಬನ್ ಕ್ಲಾತಿಂಗ್ ಕಟ್ಟಡದ ಪಕ್ಕದ ಅಂಗಡಿಯಲ್ಲಿ ಇ-ಸಿಗರೆಟ್ ಇರಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅಂಗಡಿ ಮೇಲೆ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.