ವಾತ್ಸಲ್ಯ ತೋರಿದ ಬಂಟರ ಸಂಘ ಅಮ್ಮನ ಮನೆಯಂತೆ
Team Udayavani, Mar 10, 2019, 6:22 AM IST
ಬೆಂಗಳೂರು: ಬಂಟರ ಸಂಘ ನನಗೆ ಮಾತೃ ವಾತ್ಸಲ್ಯ ತೋರಿದ್ದು, ನಾನು ಸಂಘಕ್ಕೆ ಸದಾ ಚಿರಋಣಿಯಾಗಿರುತ್ತೇನೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್ ಹೇಳಿದರು.
ಬೆಂಗಳೂರು ಬಂಟರ ಸಂಘದ ಮಹಿಳಾ ವಿಭಾಗದಿಂದ ವಿಜಯನಗರದ ಬಂಟರ ಸಂಘದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, “ನಾನು ಸುಮಾರು 25 ವರ್ಷಗಳಿಂದ ಸಂಘದ ಜತೆ ನಂಟು ಹೊಂದಿದ್ದು, ಸಂಘ ನನಗೆ ತಾಯಿಯ ವಾತ್ಸಲ್ಯ ತೋರಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದರು.
“ಬಂಟರ ಸಂಘಕ್ಕೆ ಬಂದರೆ ನನಗೆ ತಾಯಿಯ ಮನೆಗೆ ಬಂದಂತೆ ಅನಿಸುತ್ತದೆ. ನಾನು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನ ಪಡೆಯಬೇಕಾದರೆ ಸಂಘ ನೀಡಿದ ಪ್ರೋತ್ಸಾಹವೇ ಕಾರಣ. ಹಿಂದೆ ಸಂಘದ “ಸ್ನೇಹ ಚಿಂತನೆ’ ಪತ್ರಿಕೆಗೆ ಕವಿತೆಗಳನ್ನು ಬರೆಯುತ್ತಿದ್ದೆ,’ ಎಂದು ಸಂಘದೊಂದಿಗಿನ ಒಡನಾಟ ಮೆಲುಕು ಹಾಕಿದರು.
ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್.ಉಪೇಂದ್ರ ಶೆಟ್ಟಿ ಮಾತನಾಡಿ, ನಮ್ಮದು ಮಾತೃಪ್ರಧಾನ ದೇಶವಾಗಿದೆ. ಹೀಗಾಗಿಯೇ ಬಂಟರ ಸಮಿತಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
ಸಿಟಿ ಸಿವಿಲ್ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿನೀತಾ ಪಿ. ಶೆಟ್ಟಿ ಮಾತನಾಡಿ, ಸ್ತ್ರೀಯರನ್ನು ವಕ್ರ ದೃಷ್ಟಿಯಿಂದ ನೋಡುವ ಮನಸ್ಥಿತಿ ಬದಲಾಗಬೇಕು. ಮಹಿಳೆಯರು ಕೂಡ ತಮ್ಮ ರಕ್ಷಣೆಗಾಗಿ ಸ್ವತಃ ವ್ಯಕ್ತಿತ್ವ ಹಾಗೂ ಆತ್ಮ ರಕ್ಷಣೆ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಹಿಳಾ ದಿನಾಚರಣೆ ಅಂಗವಾಗಿ ಬೆಳಗ್ಗೆಯಿಂದ ಸಂಜೆವರೆಗೂ ಮಹಿಳೆಯರಿಗೆ ಸಂಬಂಧಿಸಿದ ವಿಚಾರಗೋಷ್ಠಿಗಳು ಮತ್ತು ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಉದಯೋನ್ಮುಖ ಪ್ರತಿಭೆಗಳನ್ನು ಸನ್ಮಾನಿಸಲಾಯಿತು.
ಈ ವೇಳೆ ರಾಷ್ಟ್ರೀಯ ಗ್ರಾಮೀಣ ಜೀವನಾಧಾರ ಮಿಷನ್ ನಿರ್ದೇಶಕಿ ಡಾ.ಮಮತಾ, ದೇಹದಾಡ್ಯì ತಜ್ಞೆ ವನಿತಾ ಅಶೋಕ್, ಬಂಟರ ಸಂಘದ ಮಹಿಳಾ ವಿಭಾಗದ ಸಂಚಾಲಕಿ ಯೋಗ್ಯಾ ಎಲ್. ರೈ, ಜಯಶ್ರೀ ರೈ ಸೇರಿ ಪ್ರಮುಖರು ಹಾಜರಿದ್ದರು.
ಮೋಹಕ ಬೆಡಗು ಅನಾವರಣ: ಮಹಿಳಾ ದಿನಾಚರಣೆ ಅಂಗವಾಗಿ ಬಂಟರ ಸಂಘದ ಆವರಣದಲ್ಲಿ ಮಾನಿನಿಯರ ಮೋಹಕ ಬೆಡಗು ಮೈದೆಳೆದ್ದಿತ್ತು. ಬಣ್ಣ ಬಣ್ಣದ ಸೀರೆಯಲ್ಲಿ ಮಹಿಳೆಯರು ಕಂಗೊಳಿಸಿ ಸಮಾರಂಭಕ್ಕೆ ಮೆರುಗು ನೀಡಿದರು. ಮಹಿಳಾ ದಿನಾಚರಣೆ ಅಂಗವಾಗಿ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ರಂಜಿಸಿದವು. ಪ್ರತಿ ಗಂಟೆಗೆ ಒಂದು ಲಕ್ಕಿ ಲೇಡಿ ಹಾಗೂ ವಿಶೇಷ ಬಹುಮಾನ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.