ವಾಯುಭಾರ ಕುಸಿತ: ಕೆಲವೆಡೆ ತುಂತುರು ಮಳೆ
Team Udayavani, Nov 23, 2018, 6:20 AM IST
ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೊರೆಯುವ ಚಳಿಯ ಅನುಭವವಾಗುತ್ತಿದೆ.
ತಮಿಳುನಾಡು ಹಾಗೂ ಪುದುಚೇರಿಯ ಮೇಲೆ ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿರುವುದರಿಂದ ಉತ್ತಮ ಮಳೆಯಾಗುತ್ತಿದೆ. ಜತೆಗೆ ರಾಜ್ಯ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿಯೂ ಮಳೆಯಾಗಿದ್ದು, ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದೆ. ಜತೆಗೆ ಚದುರಿದಂತೆ ತುಂತುರು ಮಳೆಯಾಗುತ್ತಿದೆ.
ಮೋಡ ಕವಿದ ವಾತಾವರಣವಿರುವುದರಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಪ್ರಮುಖ ಭಾಗಗಳಲ್ಲಿ ಕೊರೆಯುವ ಚಳಿಯ ಅನುಭವವಾಗುತ್ತಿದೆ. ಸಾಮಾನ್ಯವಾಗಿ ಶುಭ್ರ ಆಕಾಶವಿದ್ದಾಗ ತಾಪಮಾನ ಕೆಳಕ್ಕೆ ಇಳಿಯುತ್ತದೆ. ಆದರೆ, ಮೋಡ ಕವಿದ ವಾತಾವರಣ ಮುಂದುವರಿದ ಪರಿಣಾಮ ಕನಿಷ್ಠ ತಾಪಮಾನ ಶೀಘ್ರ ಕೆಳಕ್ಕಿಳಿದು ಚಳಿ ಶುರುವಾಗಿದೆ.
ವಾಯುಭಾರ ಕುಸಿತದ ಪ್ರಭಾವ ರಾಜ್ಯದ ಮೇಲೆ ಇನ್ನೂ ಎರಡು ಮೂರು ದಿನಗಳು ಇರಲಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಿದೆ. ನ.25ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೋಡ ಕವಿದ ವಾತಾವರಣದಿಂದಾಗಿ ಆಗುಂಬೆಯಲ್ಲಿ ಕನಿಷ್ಠ ಉಷ್ಣಾಂಶ 13.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದರೊಂದಿಗೆ ಮೈಸೂರಿನಲ್ಲಿ 14.1 ಹಾಗೂ ಬೀದರ್‌ನಲ್ಲಿ 14.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.