ಬಸವರಾಜ್ ಹೊರಟ್ಟಿ ಸಮಿತಿ ವರದಿ ಸಲ್ಲಿಕೆ
Team Udayavani, Jan 25, 2018, 6:25 AM IST
ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಅನುದಾನರಹಿತ ಸೇವೆಯನ್ನು ಪರಿಗಣಿಸಿ ವೇತನ ಬಡ್ತಿ ಮತ್ತು ಪಿಂಚಣಿ ಸೇವಾ ಸೌಲಭ್ಯ ನೀಡಲು (ಕಾಲ್ಪನಿಕ ವೇತನ) ಒಟ್ಟು 395 ಕೋಟಿ ರೂ. ಅನುದಾನದ ಅವಶ್ಯಕತೆಯಿದೆ ಎಂದು ವಿಧಾನಪರಿಷತ್ತಿನ ವಿಶೇಷ ಸದನ ಸಮಿತಿ ಶಿಫಾರಸು ಮಾಡಿದೆ.
ಜೆಡಿಎಸ್‌ನ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅಧ್ಯಕ್ಷತೆಯ ವಿಶೇಷ ಸದನ ಸಮಿತಿಯ ಸದಸ್ಯರು ಬುಧವಾರ ವಿಧಾನಪರಿಷತ್ತಿನ ಸಭಾಪತಿ ಡಿ.ಎಚ್. ಶಂಕರಮೂರ್ತಿಯವರನ್ನು ವಿಧಾನಸೌಧದ ಅವರ ಕಚೇರಿಯಲ್ಲಿ ಭೇಟಿಯಾಗಿ ವರದಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯ ಎಸ್.ವಿ. ಸಂಕನೂರು ಹಾಗೂ ಜೆಡಿಎಸ್ ಸದಸ್ಯ ರಮೇಶ್‌ಬಾಬು ಉಪಸ್ಥಿತರಿದ್ದರು.
ವರದಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಹೊರಟ್ಟಿ, ವಾಸ್ತವ ಅಂಶಗಳನ್ನು ಪರಾಮರ್ಶಿಸಿ ವರದಿ ನೀಡಲಾಗಿದ್ದು, 395 ಕೋಟಿ ರೂ. ಅನುದಾನದ ಅವಶ್ಯಕತೆಯಿದೆ. ಇದರಿಂದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಸುಮಾರು 25 ಸಾವಿರ ಸಿಬ್ಬಂದಿಗೆ ಅನುಕೂಲವಾಗಲಿದೆ. ಮುಂದಿನ ಅಧಿವೇಶನದಲ್ಲಿ ವರದಿ ಮಂಡಿಸಿ, ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್ ರಗಳೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.