ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕಾರ
Team Udayavani, Feb 11, 2018, 6:40 AM IST
ಬೆಂಗಳೂರು : ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ನಾಯಕತ್ವ ವಹಿಸಿಕೊಂಡು ಅಖೀಲ ಭಾರತ ವೀರಶೈವ ಮಹಾಸಭೆಯ ಮಹಾದಾನಿ ಸದಸ್ಯತ್ವಕ್ಕೆ ಹಿರಿಯ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ.
ಅ.ಭಾ.ವೀರಶ್ವವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರು ಹೊರಟ್ಟಿಯವರ ರಾಜೀನಾಮೆ ಅಂಗೀಕರಿಸಿದ್ದಾರೆ. ಈ ಸಂಬಂಧ ಹೊರಡಿಸಲಾದ ಪತ್ರದಲ್ಲಿ ಅವರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಲು ತಮಗೆ ವಿಷಾಧವಾಗುತ್ತದೆ ಎಂದು ತಿಳಿಸಿದ್ದಾರೆ. ಜತೆಗೆ “ನಿಮ್ಮ ಮುಂದಿನ ಕೆಲಸ ಕಾರ್ಯಗಳಿಗೆ ಬಸವಾದಿಶರಣರು ತಮ್ಮ ಕೈ ಹಿಡಿದು ನಡೆಸಲಿ ಎಂದು ಮಹಾಸಭೆಯು ಪ್ರಾರ್ಥಿಸುತ್ತದೆ ‘ ಎಂದು ತಿಳಿಸುವ ಮೂಲಕ ಹೊರಟ್ಟಿಯವರು ನಡೆಸುತ್ತಿರುವ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟವನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಹೋರಾಟವನ್ನು ತೀವ್ರಗೊಳಿಸಲು ವೀರಶೈವ ಮಹಾಸಭೆಗೆ ಪರ್ಯಾಯವಾಗಿ ಲಿಂಗಾಯತ ಮಹಾಸಭೆ ಸ್ಥಾಪಿಸುವ ನಿರ್ಣಯ ಕೈಗೊಂಡು ಬಸವರಾಜ ಹೊರಟ್ಟಿ ಹಾಗು ಲಿಂಗಾಯತ ಧರ್ಮ ಚಳುವಳಿಗಾರರು ವೀರಶೈವ ಮಹಾಸಭೆಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
ಸಂಗೀತ ವಿವಿಯಲ್ಲಿ ಕೋರ್ಸ್ ಆರಂಭ: ಕುಲಪತಿ ನಾಗೇಶ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.