ಕೃಷಿ ಪತ್ರಕರ್ತ ಸಾಯಿನಾಥ್‌ಗೆ ಬಸವಶ್ರೀ ಪ್ರಶಸ್ತಿ
Team Udayavani, Oct 14, 2017, 6:50 AM IST
ಬೆಂಗಳೂರು: ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಗೆ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಆಯ್ಕೆಯಾಗಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಮಾಜ ಸುಧಾರಕರಿಗೆ ಪ್ರತಿವರ್ಷ ಚಿತ್ರದುರ್ಗದ ಮುರುಘಾಮಠವು ಬಸವಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸುತ್ತಿದೆ. ಭಾರತೀಯ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು, 1980ರಲ್ಲಿ ಪತ್ರಿಕೋದ್ಯಮಕ್ಕೆ ಸೇರಿದ್ದರು. ತಮ್ಮ ವೃತ್ತಿಯಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ, ಗ್ರಾಮೀಣ ಭಾರತ, ಕೃಷಿ, ಹೆಣ್ಣು ಮಕ್ಕಳ ಶಿಕ್ಷಣ, ಮೂಢನಂಬಿಕೆ ಸೇರಿದಂತೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಹೆಚ್ಚು ಆದ್ಯತೆ ನೀಡಿದ್ದರು.
ಪತ್ರಿಕೋದ್ಯಮದ ಜತೆಗೆ ಓರ್ವ ಅತ್ಯುತ್ತಮ ಛಾಯಾಗ್ರಾಹಕರೂ ಆಗಿರುವ ಸಾಯಿನಾಥ್, ಪೀಪಲ್ ಆರ್ಚಿವ್ ರೂರಲ್ ಇಂಡಿಯಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಅವರು ಗ್ರಾಮೀಣ ಜನರ ಸೇವೆಯಲ್ಲೂ ತೊಡಗಿದ್ದರು. ಅವರ ಸಮಾಜ ಸೇವೆಯನ್ನು ಪರಿಗಣಿಸಿ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಒಲಿದಿದೆ. ಅ.23ರಂದು ಚಿತ್ರದುರ್ಗದ ಮುರುಘಾಮಠದಲ್ಲಿ ಶ್ರೀಗಳು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ. ರಾಜ್ಯದಲ್ಲಿ ಪ್ರತಿಷ್ಠಿತ ಪುರಸ್ಕಾರವೆಂದೇ ಹೇಳಲಾಗುತ್ತಿರುವ ಬಸವಶ್ರೀ ಪ್ರಶಸ್ತಿಯನ್ನು ಈ ಹಿಂದೆ ಖ್ಯಾತ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಸೇರಿದಂತೆ ಹಲವರಿಗೆ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
Alleged: ಇದು 60 ಪರ್ಸೆಂಟ್ ಲಂಚದ ಕಾಂಗ್ರೆಸ್ ಸರಕಾರ: ಎಚ್.ಡಿ.ಕುಮಾರಸ್ವಾಮಿ ಆರೋಪ
Compliant: ಸಿಆರ್‌ಪಿಎಫ್ ಭದ್ರತೆ ಕೊಡಿಸಿ, ನನ್ನ ಜೀವಕ್ಕೆ ಅಪಾಯ ಇದೆ: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
Toxic: ಯಶ್ ಬರ್ತ್ ಡೇಗೆ ʼಟಾಕ್ಸಿಕ್ʼನಿಂದ ಸಿಗಲಿದೆ ಬಿಗ್ ಅಪ್ಡೇಟ್; ಫ್ಯಾನ್ಸ್ ಥ್ರಿಲ್
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.