15ರಂದು ಬಿಬಿಎಂಪಿ ಬಜೆಟ್
Team Udayavani, Feb 1, 2019, 6:12 AM IST
ಬೆಂಗಳೂರು: ಫೆಬ್ರವರಿ ಎರಡನೇ ವಾರದಲ್ಲಿ ಬಜೆಟ್ ಮಂಡಿಸಲು ಬಿಬಿಎಂಪಿ ಸಿದ್ಧತೆ ನಡೆಸುತ್ತಿದ್ದು, ಈ ಬಾರಿಯ ಬಜೆಟ್ ಮೊತ್ತ 15 ಸಾವಿರ ಕೋಟಿ ರೂ. ತಲುಪುವ ಸಾಧ್ಯತೆಯಿದೆ.
ರಾಜ್ಯ ಸರ್ಕಾರದ ಬಜೆಟ್ ಫೆಬ್ರವರಿ 8ರಂದು ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಪಾಲಿಕೆಯ ಬಜೆಟ್ ಅನ್ನು ಫೆ.15 ಅಥವಾ 18ರಂದು ಮಂಡಿಸಲು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ತೀರ್ಮಾನಿಸಿದೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಬಜೆಟ್‌ಗೆ ಸರ್ಕಾರದಿಂದ ಅನುಮತಿ ಪಡೆಯಲು ನಿರ್ಧರಿಸಲಾಗಿದೆ.
ಪಾಲಿಕೆಯ ಅಧಿಕಾರಿಗಳು ಈಗಾಗಲೇ ಕರಡು ಆಯವ್ಯಯ ಸಿದ್ಧಪಡಿಸಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಗೆ ಸಲ್ಲಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ರಾಜಧಾನಿಯ ನಾಗರಿಕರನ್ನು ಸೆಳೆಯಲು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಆಡಳಿತ ಮುಂದಾಗಿದೆ.
ಪಾಲಿಕೆಗೆ ಮುಂದಿನ ಮೂರು ವರ್ಷಗಳಿಗೆ ಸರ್ಕಾರ 8 ಸಾವಿರ ಕೋಟಿ ರೂ. ನೀಡಲು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ದಾಖಲೆಯ 15 ಸಾವಿರ ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.
ಸರ್ಕಾರದಿಂದ 8 ಸಾವಿರ ಕೋಟಿ ರೂ. ನೀಡಲು ಅನುಮೋದಿಸಿದ್ದರೂ, ಅದು ಮೂರು ವರ್ಷಗಳಿಗೆ ಸೇರಿ ಬಿಡುಗಡೆಯಾಗಲಿದೆ. ಆ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಜಾರಿಗೊಳಿಸಬಹುದಾದ ಯೋಜನೆಗಳನ್ನು ಮಾತ್ರ ಬಜೆಟ್‌ನಲ್ಲಿ ಸೇರ್ಪಡೆಗೊಳ್ಳಲಿವೆ. ಅದನ್ನು ಹೊರತುಪಡಿಸಿ ಪಾಲಿಕೆಯಿಂದಲೂ ಈ ಬಾರಿ ಕೆಲವು ಯೋಜನೆಗಳನ್ನು ಜಾರಿಗೊಳಿಸಲು ನಿರ್ಧರಿಸಿದ್ದು, ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುವುದು ಎಂದು ಆಡಳಿತ ಪಕ್ಷದ ನಾಯಕ ಶಿವರಾಜ್ ತಿಳಿಸಿದ್ದಾರೆ.
ಸಚಿವರು, ಮೇಯರ್, ಉಪಮೇಯರ್‌ಗೆ ಬಂಪರ್: ಬಜೆಟ್‌ನಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರ ನಿಧಿ 250 ಕೋಟಿ ರೂ. ಮೀಸಲಿಡಲು ತೀರ್ಮಾನಿಸಲಾಗಿದೆ. ಜತೆಗೆ ಮೇಯರ್‌ಗೆ 150 ಕೋಟಿ ರೂ., ಉಪಮೇಯರ್‌ಗೆ 100 ಕೋಟಿ ರೂ. ಮೀಸಲಿಡಲು ನಿರ್ಧರಿಸಲಾಗಿದೆ. ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಆಡಳಿತ ಪಕ್ಷ ನಾಯಕರ ವಾರ್ಡ್‌ಗಳಿಗೆ 25 ಕೋಟಿ ರೂ., ವಿರೋಧ ಪಕ್ಷ ನಾಯಕರ ವಾರ್ಡ್ 10 ಕೋಟಿ ರೂ. ಹಾಗೂ ಪಾಲಿಕೆಯ ಜೆಡಿಎಸ್ ಪಕ್ಷದ ನಾಯಕರ ವಾರ್ಡ್‌ಗೆ 5 ಕೋಟಿ ರೂ. ಹೆಚ್ಚುವರಿಯಾಗಿ ಮೀಸಲಿಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.
ಅಬ್ದುಲ್ ವಾಜೀದ್ ಆಡಳಿತ ಪಕ್ಷದ ನಾಯಕ: ಬಿಬಿಎಂಪಿಯ ಆಡಳಿತ ಪಕ್ಷದ ನಾಯಕರಾಗಿ ಮನೋರಾಯನಪಾಳ್ಯ ವಾರ್ಡ್ ಸದಸ್ಯ ಅಬ್ದುಲ್ ವಾಜೀದ್ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಆದೇಶ ಹೊರಡಿಸಿದೆ. ಈ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೇಯರ್ ಗಂಗಾಂಬಿಕೆ ಅವರಿಗೆ ಪತ್ರ ಬರೆದಿದ್ದು, ಆಡಳಿತ ಪಕ್ಷದ ನಾಯಕರಿಗೆ ಸಿಗುವ ಸವಲತ್ತುಗಳನ್ನು ಒದಗಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಗುರುವಾರ ವಾಜೀದ್ ಅವರ ವಾರ್ಡ್‌ನಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಈ ಹಿಂದೆ ದತ್ತಾತ್ರೇಯ ದೇವಾಸ್ಥಾನ ವಾರ್ಡ್‌ನ ಆರ್.ಎಸ್.ಸತ್ಯನಾರಾಯಣ, ಗುರಪ್ಪನಪಾಳ್ಯ ವಾರ್ಡ್‌ನ ಮಹಮ್ಮದ್ ರಿಜ್ವಾನ್ ಹಾಗೂ ಕಳೆದ ಅವಧಿಗೆ ಶಂಕರಮಠ ವಾರ್ಡ್‌ನ ಎಂ.ಶಿವರಾಜು ಆಡಳಿತ ಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಆಡಳಿತ ಪಕ್ಷ ನಾಯಕರಾಗಿ ಆಯ್ಕೆಯಾದ ಬಳಿಕ ಪ್ರತಿಕ್ರಿಯಿಸಿದ ಅಬ್ದುಲ್ ವಾಜೀದ್, ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಪಕ್ಷ ನನಗೆ ಮಹತ್ವ ಜವಾಬ್ದಾರಿ ವಹಿಸಿದೆ. ಆ ಹಿನ್ನೆಲೆಯಲ್ಲಿ ಯಾವುದೇ ಆರೋಪಗಳಿಗೆ ಅವಕಾಶವಿಲ್ಲದಂತೆ ಉತ್ತಮ ಆಡಳಿತ ನೀಡಲಾಗುವುದು. ನಗರದಲ್ಲಿ ಮೂಲ ಸೌಕರ್ಯಕ್ಕೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳಿದ್ದು, ಅವುಗಳನ್ನು ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.
ಬಿಜೆಪಿಯಲ್ಲಿ ಅಸಮಧಾನ: ಆಡಳಿತ ಪಕ್ಷದ ನಾಯಕರನ್ನು ಬದಲಿಸಿ ಕಾಂಗ್ರೆಸ್ ಆದೇಶ ಹೊರಡಿಸಿದ ಬೆನ್ನಲ್ಲೇ, ಬಿಜೆಪಿಯ ಕೆಲ ಪಾಲಿಕೆ ಸದಸ್ಯರು ಅಸಮಧಾನಗೊಂಡಿದ್ದಾರೆ. ಪ್ರತಿ ವರ್ಷ ಕಾಂಗ್ರೆಸ್ ಆಡಳಿತ ಪಕ್ಷ ನಾಯಕ ಹಾಗೂ ಜೆಡಿಎಸ್ ಪಕ್ಷ ನಾಯಕ ಸ್ಥಾನವನ್ನು ಬೇರೆಯವರಿಗೆ ನೀಡುವ ಮೂಲಕ ಎಲ್ಲ ಸದಸ್ಯರಿಗೆ ಅವಕಾಶ ನೀಡಲಾಗುತ್ತಿದೆ. ಆದರೆ, ಬಿಜೆಪಿಯಲ್ಲಿ ಮೂರು ವರ್ಷಗಳಿಂದ ಒಬ್ಬರೇ ವಿರೋಧ ಪಕ್ಷದ ನಾಯಕರಾಗಿದ್ದು, 100 ಜನ ಸದಸ್ಯರಿದ್ದರೂ ಸ್ಥಾನಮಾನ ಹಂಚಿಕೆಯಾಗುತ್ತಿಲ್ಲ ಎಂದು ಅಕಾಂಕ್ಷಿಯೊಬ್ಬರು ಬೇಸರ ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.