ಒತ್ತುವರಿ ಬಗ್ಗೆ ಬಿಬಿಎಂಪಿ ಜಾಣ ಕುರುಡು
Team Udayavani, Sep 9, 2017, 11:28 AM IST
ಬೆಂಗಳೂರು: ಭೂ ಕಬಳಿಕೆದಾರರು ನೂರಾರು ಎಕರೆ ಜಾಗವನ್ನು ಒತ್ತುವರಿ ಮಾಡಿಕೊಳ್ಳುತ್ತಿದ್ದರೂ ಬಿಬಿಎಂಪಿ ಕಣ್ಮುಚ್ಚಿ ಕುಳಿತಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಆಕೋಶವ್ಯಕ್ತಪಡಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆರೆ ಒತ್ತುವರಿದಾರರು ಸರ್ಕಾರಿ ಜಾಗಗಳಲ್ಲಿ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಿ ಬಾಡಿಗೆ ನೀಡುತ್ತಿದ್ದಾರೆ.
ಬಿಬಿಎಂಪಿಯಲ್ಲಿರುವ 198 ವಾರ್ಡ್ ಸದಸ್ಯರೂ ಭ್ರಷ್ಟರೇ ತುಂಬಿಕೊಂಡಿದ್ದಾರೆ. ಹೀಗಾಗಿ ಕೆರೆಒತ್ತುವರಿಯಾಗುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಈ ನಿಟ್ಟಿನಲ್ಲಿ ಕೆರೆಗಳ ಸಂರಕ್ಷಣೆಗೆ ಪ್ರತ್ಯೇಕ ಸಮಿತಿ ರಚನೆಯಾಗಬೇಕಿದೆ. ಇದಲ್ಲದೆ ಬಿಡಿಎಗೆ ಸೇರಿದ ಕೋಟ್ಯಾಂತರ ರೂ ಮೌಲ್ಯದ ಭೂಮಿ ಕಳ್ಳರ ಪಾಲಾಗುತ್ತಿದೆ. ಬಿಡಿಎ ಕೂಡಲೇ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕ ಬಳಕೆಗೆ ಮುಂದಾಗಬೇಕು ಇಲ್ಲವಾದರೇ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ತೆರವು ಮಾಹಿತಿ ಬಹಿರಂಗ ಪಡಿಸಿ: ಭೂಕಬಳಿಕೆದಾರರಿಂದ ವಶಪಡಿಸಿಕೊಂಡಿರುವ ಒತ್ತುವರಿ ಆಸ್ತಿ ,ಒತ್ತುವರಿದಾರರ ಬಗ್ಗೆ ರಾಜ್ಯಸರ್ಕಾರ ಮಾಹಿತಿ ಬಹಿರಂಗ ಪಡಿಸಬೇಕು ಎಂದು ನಮ್ಮ ಬೆಂಗಳೂರು ಪ್ರತಿಷ್ಟಾನ ಒತ್ತಾಯಿಸಿದೆ.ರಾಜ್ಯಸರ್ಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿ 15,833 ಎಕರೆ ಭೂಮಿ ಒತ್ತುವರಿದಾರರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ. ಆದರೆ, ವಶಪಡಿಸಿಕೊಂಡ ಭೂಮಿಯ ಒಟ್ಟು ಮೌಲ್ಯ ಎಷ್ಟು?
ಸಾರ್ವಜನಿಕರಿಗೆ ಈ ಭೂಮಿಯನ್ನು ಯಾವ ರೀತಿ ಹಂಚಲಾಗುತ್ತೆ ಎಂಬುದರ ಬಗ್ಗೆ ಮಾಹಿತಿ ನೀಡದಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಲ್ಲದೆ ವಶಪಡಿಸಿಕೊಂಡಿರುವ ಭೂಮಿಯನ್ನು ಸರ್ಕಾರ ಹರಾಜು ಹಾಕುವುದಾಗಿ ಹೇಳಿದ್ದು, ಇದರಲ್ಲಿ ಮತ್ತೆ ಒತ್ತುವರಿದಾರರು ಹಾಗೂ ಬಿಲ್ಡರ್ಗಳು ಭಾಗವಿಸುವ ಸಾಧ್ಯತೆಯಿದೆ ಎಂದು ಪ್ರತಿಷ್ಠಾನ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.