ಪಾಲಿಕೆ ಚುನಾವಣೆ ಮುಂದೂಡುವುದೇ ಉದ್ದೇಶ

ಸಿಟಿ ಪಾಲಿಟಿಕ್ಸ್‌-4ನಲ್ಲಿಬಿಬಿಎಂಪಿ ಹೊಸ ವಿಧೇಯಕದ ವಿರುದ್ಧ ಪ್ರಶ್ನೆ ಗಳ ಸುರಿಮಳೆ

Team Udayavani, Nov 6, 2020, 4:27 PM IST

ಪಾಲಿಕೆ ಚುನಾವಣೆ ಮುಂದೂಡುವುದೇ ಉದ್ದೇಶ

ಬೆಂಗಳೂರು: ಬಿಬಿಎಂಪಿಯ 2020ನೇ ಸಾಲಿನ ಚುನಾಚವಣೆ ಮುಂದೂಡಲು ಉದ್ದೇಶಪೂರ್ವಕವಾಗಿ ಸರ್ಕಾರ “ಬಿಬಿಎಂಪಿ – 2020’ಹೊಸ ವಿಧೇಯಕ ಮಂಡನೆ ಮಾಡುತ್ತಿದೆ. ಈ ಮೂಲಕ ಚುನಾವಣೆ ಮುಂದೂಡಿ ನಗರದ ಶಾಸಕರು ಹಾಗೂ ಸಂಸದರಿಗೆ ಹೆಚ್ಚು ಅನುಕೂಲ ಮಾಡಿಕೊಡುವುದು ಸರ್ಕಾರದ ಉದ್ದೇಶ ಎಂದು ಕಾಂಗ್ರೆಸ್‌, ಜೆಡಿಎಸ್‌, ಆಮ್‌ ಆದ್ಮಿ, ಬೆಂಗಳೂರು ನವ ನಿರ್ಮಾಣ ಪಕ್ಷ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿಯ ನಾಯಕರು ಆರೋಪಿಸಿದರು.

ಜನಾಗ್ರಹ ಸಂಸ್ಥೆ ವೆಬಿನಾರ್‌ನ ಮೂಲಕ ಆಯೋಜಿಸಿದ್ದ ಸಿಟಿ ಪಾಲಿಟಿಕ್ಸ್‌ -4 ನಲ್ಲಿ ಬಿಜೆಪಿಯ ನಾಯಕರು ಸೇರಿದಂತೆ ಎಲ್ಲ ಪಕ್ಷದ ಸದಸ್ಯರು ಬಿಬಿಎಂಪಿ – 2020ಹೊಸ ವಿಧೇಯಕದ ಬಗ್ಗೆ ತಮ್ಮ ಅಭಿಪ್ರಾಯಹಾಗೂ ವಿಧೇಯಕದಲ್ಲಿನ ಲೋಪಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಬಿಜೆಪಿ ಹೊರತು ಪಡಿಸಿ ಎಲ್ಲ ರಾಜಕೀಯ ಪಕ್ಷಗಳು ಸರ್ಕಾರ ನೂತನ ವಿಧೇಯಕ ಮಂಡನೆಕುರಿತು ಪ್ರಶ್ನೆ ಮಾಡಿದವು. ಬೆಂಗಳೂರು ನಗರ ಜೆಡಿಎಸ್‌ ಅಧ್ಯಕ್ಷ ಆರ್‌. ಪ್ರಕಾಶ್‌ ಮಾತನಾಡಿ, ನಗರದ ಅಭಿವೃದ್ಧಿಯ ಉದ್ದೇಶದಿಂದ ವಿಧೇಯಕ ಮಂಡನೆ ಮಾಡುವುದೇ ಆಗಿದ್ದರೆ, ಚುನಾವಣಾ ವರ್ಷಕ್ಕೆ ಮುನ್ನವೇ ಮಂಡನೆ ಮಾಡಬೇಕಾಗಿತ್ತು. ಸರ್ಕಾರಕ್ಕೆ ಸ್ಥಳೀಯ ಸಂಸ್ಥೆಯ ಆಡಳಿತ ಬೇಕಾಗಿಲ್ಲ ಎಂದು ದೂರಿದರು.

ಆದ್ಮಿ ಪಕ್ಷದ ರಾಜ್ಯ ಸಹ-ಸಂಚಾಲಕಿ ಎಂ.ಎಸ್‌. ಶಾಂತಲಾ ದಾಮ್ಲೆ ಆಮ್‌ ಅವರು, ಸರ್ಕಾರ ಕೋವಿಡ್ ತಡೆಯುವಲ್ಲಿ ವಿಫ‌ಲವಾಗಿದೆ. ಚುನಾವಣೆ ಮುಂದೂಡಲುಈ ರೀತಿ ವಿಧೇಯಕ ಮಂಡನೆ ಮಾಡಲಾಗಿದೆ. ಪಾಲಿಕೆಯ ಕೆಎಂಸಿ ಕಾಯ್ದೆಯಲ್ಲೇಪರಿಹಾರ ಕಂಡುಕೊಳ್ಳಬಹುದಾಗಿತ್ತು ಎಂದರು. ಬಿಬಿಎಂಪಿಯ ವಿರೋಧ ಪಕ್ಷದ ಮಾಜಿ ಅಧ್ಯಕ್ಷ ಅಬ್ದುಲ್‌ ವಾಜಿದ್‌ ಮಾತನಾಡಿ, ನಗರಕ್ಕೆ ಪ್ರತ್ಯೇಕ ಕಾಯ್ದೆಯ ಅವಶ್ಯಕತೆ ಇತ್ತು. ಆದರೆ, ಚುನಾವಣಾ ಸಂದರ್ಭದಲ್ಲೇ ವಿಧೇಯಕ ಮಂಡನೆ ಮಾಡಿರುವುದು ಸಮಂಜಸವಲ್ಲ. ಅಲ್ಲದೆ,ಈವಿಧೇಯಕವನ್ನು ಭವಿಷ್ಯದ ದೃಷ್ಟಿಯಿಂದ ರೂಪಿಸಿಲ್ಲ ಎಂದರು. ಕರ್ನಾಟಕ ರಾಷ್ಟ್ರ ಸಮಿತಿಯ ಸಿ.ಎನ್‌ ದೀಪಕ್‌ ಮಾತನಾಡಿ, ಪಾಲಿಕೆಯ ಚುನಾವಣಾ ವೇಳೆ ವಿಧೇಯಕ ಮಂಡನೆ, ಹೊಸ ಪ್ರದೇಶ ಸೇರಿ ಸುವ ಚರ್ಚೆಗಳೇಕೆ ಮುನ್ನೆಲೆಗೆ ಬರುತ್ತವೆ ಎಂದು ಪ್ರಶ್ನಿಸಿದರು.

ಚುನಾಯಿತ ಪ್ರತಿನಿಧಿಗಳಿಗೆ ಅಧಿಕಾರ ನೀಡಿ :  ಬಿಬಿಎಂಪಿಯ ವಿರೋಧ ಪಕ್ಷದ ಮಾಜಿ ನಾಯಕ ಪದ್ಮನಾಭ ‌ ರೆಡ್ಡಿ ಮಾತನಾಡಿ, ನಗರದ ಜನ ಸಂಖ್ಯೆಗೆ ಅನುಗುಣವಾಗಿ ಕೆಎಂಸಿ ಕಾಯ್ದೆಯಲ್ಲಿ ಬದಲಾವಣೆಗಳು ಆಗಬೇಕಿತ್ತು. ಹೀಗಾಗಿ, ಹೊಸ ವಿಧೇಯಕ ಅವಶ್ಯಕ. ಆದರೆ, ಇದರಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಹೆಚ್ಚಿನ ಅಧಿಕಾರ ನೀಡಬೇಕು. ವಲಯ ಸಮಿತಿಗಳಲ್ಲಿ ಜಂಟಿ ಆಯುಕ್ತರಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಇದನ್ನು ಹಿಂಪಡೆಯಬೇಕು. ಈ ಸಂಬಂಧಕಮಿಟಿಯ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಚರ್ಚೆ ಮಾಡಲಾಗುವುದು.ಕೌನ್ಸಿಲ್‌ನ ಸದಸ್ಯರಿಗೆ ಹೆಚ್ಚಿನ ಅಧಿಕಾರ ಇರಬೇಕು ಎಂದರು. ಈ ವೇಳೆ ಬೆಂಗಳೂರು ನವ ನಿರ್ಮಾಣಪಕ್ಷದ ಪ್ರಧಾನಕಾರ್ಯದರ್ಶಿ ಶ್ರೀಕಾಂತ್‌ ನರಸಿಂಹನ್‌,ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸ್‌ ಅಲವಿಲ್ಲಿ ಹಾಗೂ ಸಪ್ನಾಕರೀಮ್‌ ಇತರರಿದ್ದರು.

ಟಾಪ್ ನ್ಯೂಸ್

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.