ಧರಂ, ರಾವ್‌ ಅಗಲಿಕೆಗೆ ಬಿಬಿಎಂಪಿ ಸಾಮಾನ್ಯ ಸಭೆ ಮೌನ

Team Udayavani, Jul 29, 2017, 11:51 AM IST

bbmp-daramsing.jpg

ಬೆಂಗಳೂರು: ಬಿಬಿಎಂಪಿ ಸಾಮಾನ್ಯಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಧರಂಸಿಂಗ್‌ ಹಾಗೂ ಹಿರಿಯ ವಿಜ್ಞಾನಿ ಯು.ಆರ್‌. ರಾವ್‌ ಅವರಿಗೆ ಸಂತಾಪ ಸೂಚಿಸಿ ಅವರ ಗೌರವಾರ್ಥ ಸೋಮವಾರಕ್ಕೆ ಸಭೆ ಮುಂದೂಡಲಾಯಿತು.

ಪೌರಸಭಾಂಗಣದಲ್ಲಿ ಶುಕ್ರವಾರ ಬೆಳಿಗ್ಗೆ ಸಭೆ ಆರಂಭವಾಗುತ್ತಿದ್ದಂತೆ ಆಡಳಿತ ಪಕ್ಷದ ನಾಯಕ ಮಹಮ್ಮದ್‌ ರಿಜ್ವಾನ್‌ ನವಾಬ್‌ ಸಂತಾಪ ಸೂಚನೆ ಮಂಡಿಸಿದರು. ಸೂಚನೆ ಮೇರೆಗೆ ಮೇಯರ್‌ ಜಿ. ಪದ್ಮಾವತಿ ಸೇರಿದಂತೆ ಎಲ್ಲ ಸದಸ್ಯರು ಅಗಲಿದ ಗಣ್ಯರಿಬ್ಬರಿಗೂ ಶ್ರದ್ಧಾಂಜಲಿ ಸಲ್ಲಿಸಿದರು. 

ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ, ಜೆಡಿಎಸ್‌ ನಾಯಕಿ ರಮಿಳಾ ಉಮಾಶಂಕರ್‌, ಮಾಜಿ ಮೇಯರ್‌ಗಳಾದ ಬಿ.ಎಸ್‌. ಸತ್ಯನಾರಾಯಣ, ಮಂಜುನಾಥರೆಡ್ಡಿ, ಸದಸ್ಯರಾದ ಆರ್‌.ಎಸ್‌. ಸತ್ಯನಾರಾಯಣ, ಎಂ.ಕೆ. ಗುಣಶೇಖರ್‌, ಡಾ.ಎಸ್‌.ರಾಜು, ಉಮೇಶ್‌ ಶೆಟ್ಟಿ, ಸಂಪತ್‌ರಾಜ್‌, ಮೋಹನ್‌ ಕುಮಾರ್‌, ನಾಗರಾಜ್‌, ಪಾರ್ಥಿಬನ್‌, ಲಲಿತಾ ತಿಮ್ಮನಂಜಯ್ಯ, ಸಂಪತ್‌ಕುಮಾರ್‌, ಕೋಕಿಲಾ ಚಂದ್ರಶೇಖರ್‌, ನರಸಿಂಹ ನಾಯಕ್‌ ಅವರುಗಳ ಧರಂಸಿಂಗ್‌ ಹಾಗೂ ಯು.ಆರ್‌. ರಾವ್‌ ಅವರ ಸೇವೆಯನ್ನು ಸ್ಮರಿಸಿದರು.

ರಾಜ್ಯದ ಸಮಗ್ರ ಅಭಿವೃದ್ಧಿಯ ಕನಸನ್ನು ಕಂಡು ವಿವಿಧ ಇಲಾಖೆಗಳ ಸಚಿವರಾಗಿದ್ದ ಸಂದರ್ಭದಲ್ಲಿ ಹಲವಾರು ಯೋಜನೆಗಳಿಗೆ ಸಾಕಾರ ರೂಪ ಕೊಟ್ಟಿರುವ ಅವರ ಹೆಸರನ್ನು ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ಬೆಂಗಳೂರಿನ ಯಾವುದಾದರೂ ರಸ್ತೆ, ವೃತ್ತ ಅಥವಾ ಪ್ರಮುಖ ಸ್ಥಳವೊಂದಕ್ಕೆ ಧರಂಸಿಂಗ್‌ ಅವರ ಹೆಸರನ್ನು ನಾಮಕರಣ ಮಾಡುವುದು ಸೂಕ್ತ ಎಂದು ಕೆಲವು ಸದಸ್ಯರು ಸಲಹೆ ನೀಡಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಇದ್ದರೂ ಎಲ್ಲ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರನ್ನು ಪ್ರೀತಿಯಿಂದ ಮಾತನಾಡಿಸುವ ಮೂಲಕ ಜನಾನುರಾಗಿಯಾಗಿದ್ದ ಧರಂಸಿಂಗ್‌ ಎಲ್ಲ ಇಲಾಖೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಮುಖ್ಯಮಂತ್ರಿಗಳಾಗಿ ನಾಡಿನ ಅಭಿವೃದ್ಧಿಗಾಗಿ ಶ್ರಮಿಸಿದವರು. ಯುವ ಜನಾಂಗ ರಾಜಕೀಯಕ್ಕೆ ಬಂದು ಜನಪರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಯುವ ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿದ್ದರು. ತಾಳ್ಮೆಗೆ ಮತ್ತೂಂದು ಹೆಸರೇ ಧರಂಸಿಂಗ್‌. ಜನಾನುರಾಗಿಯಾಗಿದ್ದ ಅವರು ಮುಖ್ಯಮಂತ್ರಿಯಾಗಿದ್ದರೂ ಎಂದಿಗೂ ದರ್ಪ ತೋರಿಸಲಿಲ್ಲ. ಅವರೊಬ್ಬ ಧೀಮಂತ ರಾಜಕಾರಣಿ ಎಂದು ಬಣ್ಣಿಸಿದರು.

ಇಸ್ರೋ ಮಾಜಿ ಅಧ್ಯಕ್ಷ ಡಾ. ಯು.ಆರ್‌. ರಾವ್‌ ಅವರ ನಿಧನಕ್ಕೂ ಸಂತಾಪ ಸೂಚಿಸಿದ ಪಾಲಿಕೆ ಸದಸ್ಯರು ದೇಶದ ಬಾಹ್ಯಾಕಾಶ ಸಂಸ್ಥೆ ವಿದೇಶಕ್ಕೂ ಪೈಪೋಟಿ ನೀಡಬಲ್ಲದು, ಸ್ವಾವಲಂಬಿಯಾಗಿ ತನ್ನ ಉಪಗ್ರಹಗಳನ್ನು ಇಲ್ಲಿಂದಲೇ ಉಡಾವಣೆ ಮಾಡಬಲ್ಲದು ಎಂಬುದನ್ನು ಸಾಬೀತು ಮಾಡಿದ ಕೀರ್ತಿ ಯು.ಆರ್‌. ರಾವ್‌ ಅವರಿಗೆ ಸಲ್ಲುತ್ತದೆ. ಅವರ ಸೇವೆ ಅನನ್ಯವಾದುದು ಎಂದು ಸದಸ್ಯರು ಬಣ್ಣಿಸಿದರು. ನಂತರ ಸಭೆ ಮುಂದೂಡಲಾಯಿತು.

ಟಾಪ್ ನ್ಯೂಸ್

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

12-uv-fusion

UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.