ಬಿಬಿಎಂಪಿ ಶಿಕ್ಷಣ ಸಂಸ್ಥೆಗಳನ್ನು ಸರ್ಕಾರಕ್ಕೆ ವಹಿಸಲು ಚಿಂತನೆ
Team Udayavani, May 19, 2017, 11:31 AM IST
ಬೆಂಗಳೂರು: ಫಲಿತಾಂಶ ಕುಸಿತ ಹಾಗೂ ನಿರ್ವಹಣೆ ಕೊರತೆ ಹಿನ್ನೆಲೆಯಲ್ಲಿ ಪಾಲಿಕೆಯ ಶಾಲಾ- ಕಾಲೇಜುಗಳನ್ನು ರಾಜ್ಯ ಸರ್ಕಾರದ ಸುಪರ್ದಿಗೆ ವಹಿಸಲು ಬಿಬಿಎಂಪಿ ಚಿಂತಿಸಿದೆ. ಇತ್ತೀಚೆಗೆ ಪ್ರಕಟವಾದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಪಾಲಿಕೆ ಶಾಲಾ- ಕಾಲೇಜುಗಳ ಫಲಿತಾಂಶ ಕುಸಿದಿತ್ತು.
ಇದರಿಂದ ಬೇಸರಗೊಂಡಿರುವ ಪಾಲಿಕೆ, ಶಿಕ್ಷಣ ಸಂಸ್ಥೆಗಳನ್ನು ಸರ್ಕಾರದ ಸುಪರ್ದಿಗೆ ನೀಡಲು ಚಿಂತಿಸಿದೆ. ಕಳೆದ ವರ್ಷವೇ ಈ ಸಂಬಂಧ ಪ್ರಸ್ತಾವ ಸಲ್ಲಿಕೆಯಾಗಿದ್ದರೂ ಕಾರ್ಯಗತವಾಗಿರಲಿಲ್ಲ. ಹಾಗಾಗಿ ಈ ಬಾರಿಯ ಪಾಲಿಕೆ ಮಾಸಿಕ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲು ಚಿಂತನೆ ನಡೆದಿದೆ.
ಕಳೆದ ಮಾರ್ಚ್ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದ 1696 ವಿದ್ಯಾರ್ಥಿಗಳ ಪೈಕಿ 664 ವಿದ್ಯಾರ್ಥಿಗಳಷ್ಟೇ ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 1996 ವಿದ್ಯಾರ್ಥಿಗಳು ಹಾಜರಾಗಿದ್ದು, 1091 ವಿದ್ಯಾರ್ಥಿಗಳಷ್ಟೇ ತೇರ್ಗಡೆಯಾಗಿದ್ದಾರೆ. ಅಂದರೆ ಎಸ್ಸೆಸ್ಸೆಲ್ಸಿಯಲ್ಲಿ ಶೇ.41 ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.54ರಷ್ಟು ವಿದ್ಯಾರ್ಥಿಗಳಷ್ಟೇ ಪಾಸಾಗಿದ್ದಾರೆ.
ಆ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪಾಲಿಕೆಯಿಂದ ಸರ್ಕಾರದ ಸುಪರ್ದಿಗೆ ನೀಡಲು ಗಂಭೀರ ಚಿಂತನೆ ನಡೆದಿದೆ. ಹಾಗೆಯೇ ಈ ಬಾರಿ ಶಿಕ್ಷಕರಿಗೆ ನೀಡಬೇಕಿದ್ದ ವೇತನ ಬಡ್ತಿ ಕಡಿತಗೊಳಿಸಲು ಚಿಂತಿಸಿದೆ. ಪಾಲಿಕೆಯ 89 ಶಿಶುವಿಹಾರ, 15 ಪ್ರಾಥಮಿಕ ಶಾಲೆ, 32 ಪ್ರೌಢಶಾಲೆ, 13 ಪದವಿ ಪೂರ್ವ ಕಾಲೇಜು ಹಾಗೂ 4 ಪದವಿ ಕಾಲೇಜುಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.