ರೈಲ್ವೆ ಅಧಿಕಾರಿಗಳೊಂದಿಗೆ ಬಿಬಿಎಂಪಿ ಸಭೆ
Team Udayavani, Dec 4, 2017, 12:37 PM IST
ಬೆಂಗಳೂರು: ಮಲ್ಲೇಶ್ವರದ ಮಂತ್ರಿಮಾಲ್ ಹಿಂಭಾಗದಿಂದ ಶ್ರೀರಾಮಪುರಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಅಂಡರ್ ಪಾಸ್ ನಿರ್ಮಾಣಕ್ಕೆ ಎದುರಾಗಿರುವ ಭೂ ಸ್ವಾಧೀನ ವಿವಾದ ಬಗೆಹರಿಸಲು ಬುಧವಾರ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಬಿಬಿಎಂಪಿ ನಿರ್ಧರಿಸಿದೆ. ಜಾಗದ ಒಡೆತನದ ವಿಚಾರದಲ್ಲಿ ರೈಲ್ವೆ ಇಲಾಖೆ ಹಾಗೂ ಮಂತ್ರಿಮಾಲ್ ನಡುವೆ ವಿವಾದ ಏರ್ಪಟ್ಟು ಪ್ರಕರಣ ನ್ಯಾಯಾಲಯದಲ್ಲಿದೆ.
ಇದರಿಂದಾಗಿ ಅಂಡರ್ಪಾಸ್ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಸುತ್ತಿಕೊಂಡು ಶ್ರೀರಾಮಪುರಕ್ಕೆ ಬರಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್, ಬುಧವಾರ ರೈಲ್ವೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಪಾಲಿಕೆಯ ಆಯುಕ್ತ ಎನ್.ಮಂಜುನಾಥ ಪ್ರಸಾದ್, ಮಂತ್ರಿಮಾಲ್ಗೆ ಕಟ್ಟಡ ನಕ್ಷೆ ನೀಡುವ ವೇಳೆ ಅಂಡರ್ಪಾಸ್ ನಿರ್ಮಿಸಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಆದರೆ, ರೈಲ್ವೆ ಇಲಾಖೆ ಜಾಗ ತಮಗೆ ಸೇರಿದೆಯೆಂದು ನ್ಯಾಯಾಲಯದ ಮೊರೆ ಹೋದ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿದೆ. ಹೀಗಾಗಿ ರೈಲ್ವೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.
ನ್ಯಾಯಾಲಯದಲ್ಲಿ ತೀರ್ಪು ರೈಲ್ವೆ ಇಲಾಖೆ ಪರವಾಗಿ ಬಂದರೆ ರೈಲ್ವೆ ಇಲಾಖೆಯೊಂದಿಗೆ ಪಾಲಿಕೆ ಒಪ್ಪಂದ ಮಾಡಿಕೊಳ್ಳಲಿದೆ. ಇನ್ನು ಮಂತ್ರಿಮಾಲ್ ಪರವಾಗಿ ಬಂದರೆ ಪೂರ್ವ ನಿಗದಿಯಂತೆ ಅವರು ಕಾಮಗಾರಿ ಕೈಗೊಳ್ಳಲಿದ್ದಾರೆ. ಹೀಗಾಗಿ ಕಾಮಗಾರಿ ಪೂರ್ಣಗೊಳಿಸಲು ಅವಕಾಶ ನೀಡುವಂತೆ ಕೋರಲಾಗುವುದು ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್ಅಪ್
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.