ಬಿಬಿಎಂಪಿ ಸದಸ್ಯರ ದರ್ಬಾರ್‌ ಮುಕ್ತಾಯ

ಮುಂದೆ ಶಾಸಕರಿಗೆ ಅಧಿಕಾರ ಚಲಾಯಿಸುವ ಅಧಿಕಾರ

Team Udayavani, Sep 11, 2020, 11:45 AM IST

ಬಿಬಿಎಂಪಿ ಸದಸ್ಯರ ದರ್ಬಾರ್‌ ಮುಕ್ತಾಯ

ಬೆಂಗಳೂರು: ಪಾಲಿಕೆಯ 2015-20ನೇಸಾಲಿನ ಪಾಲಿಕೆ ಸದಸ್ಯರ ದರ್ಬಾರ್‌ ಸೆ.10ಕ್ಕೆ ಮುಕ್ತಾಯವಾಗಿದೆ. ಇದೀಗ ಪಾಲಿಕೆಯಲ್ಲಿ ಶಾಸಕರು ಹೆಚ್ಚು ಅಧಿಕಾರ ಚಲಾಯಿಸುವ ಸಾಧ್ಯತೆ ಇದೆ.

ಇಷ್ಟು ದಿನ ಪಾಲಿಕೆಯ ಮೇಯರ್‌ ಅವರ ಕಚೇರಿ, ಆಡಳಿತಾಧಿಕಾರಿ ಹಾಗೂ ವಿರೋಧ ಪಕ್ಷದ ನಾಯಕರು ಕಚೇರಿಗಳು ಹಾಗೂ ಪಾಲಿಕೆಯ 12 ಸ್ಥಾಯಿ ಸಮಿತಿಯ ಕಚೇರಿಗಳು ಜನಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಅಧಿಕಾರಿಗಳಿಂದ ತುಂಬಿಕೊಂಡಿರುತ್ತಿತ್ತು. ಶುಕ್ರವಾರದಿಂದ ಈ ಕಚೇರಿಗಳು ಸಹಜ ಕಳೆ ಕಳೆದುಕೊಳ್ಳಲಿವೆ. ಅವರ ಕಾರುಗಳು ಹಾಗೂ ಬೆಂಬಲಿಗರಿಲ್ಲದೆ. ಸಂಭ್ರಮದ ಕಾರ್ಯಕ್ರಮವಾದ ಮೇಲೆ ಕಾಣಿಸುವ ಮನೆಯಂತಹ ವಾತಾವರಣ ಸೃಷ್ಟಿಯಾಗಲಿದೆ.

ಖುಷಿ ನೀಡಿದೆ: ಕಳೆದ ಐದು ವರ್ಷಗಳ ಕಾರ್ಯವೈಖರಿ ಖುಷಿ ನೀಡಿದೆ. ಗೆದ್ದು ಬಂದಾಗ ಇದ್ದಷ್ಟೇ ಖುಷಿ ಹೋಗುವಾಗಲುಆಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌ ಹೇಳಿದರು. ಜನ ನಮ್ಮ ಮೇಲೆ ಇಷ್ಟ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಯತ್ನ ಮಾಡಿದ್ದೇವೆ. ಅಧಿಕಾರದಲ್ಲಿ ಇದ್ದಷ್ಟೂ ದಿನ ಜನ ಸೇವೆ ಮಾಡಿದ್ದೇವೆ ಎಂದರು.

ಮಾಜಿ ಮೇಯರ್‌ ಪದ್ಮಾವತಿ ಮಾತನಾಡಿ, ಪಾಲಿಕೆ ಸದಸ್ಯರಾಗಿ ಹಲವರಿಗೆಅಧಿಕಾರ ಸಿಗುತ್ತದೆ. ಆದರೆ, ಮೇಯರ್‌ ಆಗಿ ಕೆಲವೇ ಕೆಲವರಿಗೆ ಮಾತ್ರ ಸುವರ್ಣ ಅವಕಾಶ ಸಿಗುತ್ತದೆ. ಮೇಯರ್‌ ಆಗುವ ಅವಕಾಶ ನನಗೆ ಸಿಕ್ಕಿದ್ದು, ನನ್ನ ಅದೃಷ್ಟ ಎಂದು ಖುಷಿ ಹಂಚಿಕೊಂಡರು.

ಸೇವೆ ತೃಪ್ತಿ ಇದೆ: ಆಡಳಿತ ಪಕ್ಷದ ಮಾಜಿ ನಾಯಕ ಪದ್ಮನಾಭರೆಡ್ಡಿ ಅವರು ಮಾತನಾಡಿಕಳೆದ ಐದು ವರ್ಷದ ಸೇವೆ ನನಗೆ ತೃಪ್ತಿ ನೀಡಿದೆ. ನನ್ನ ವಾರ್ಡ್‌ನಲ್ಲಿ ಯಾವುದೇ ಕಾಮಗಾರಿಗಳು ಅರ್ಧಕ್ಕೆ ನಿಂತಿಲ್ಲ. ಒಂದೇ ಒಂದು ರಸ್ತೆಗುಂಡಿ ಇಲ್ಲ ಇದಕ್ಕೆಲ್ಲ ಬಿಜೆಪಿನಾಯಕರ ಸಹಕಾರವೇ ಕಾರಣ.ಪಾಲಿಕೆಯಲ್ಲಿ ನಾಲ್ಕು ವರ್ಷ ವಿರೋಧ ಪಕ್ಷದ ನಾಯಕನಾಗಿ ಹಲವು ಹಗರಣಗಳನ್ನು ಬಯಲಿಗೆಳೆದ ಬಗ್ಗೆಯೂ ತೃಪ್ತಿ ಇದೆ ಎಂದು ಹೇಳಿದರು.

ನಿಗದಿತ ಸಮಯದಲ್ಲಿ ಬಿಬಿಎಂಪಿ ಚುನಾವಣೆ ನಡೆಸಲಿ :  ರಾಜ್ಯ ಸರ್ಕಾರ ಕೋವಿಡ್ ಹಾಗೂ ಕಾನೂನು ತಿದ್ದುಪಡಿಯ ನೆಪ ಹೇಳಿ ಬಿಬಿಎಂಪಿ ಚುನಾವಣೆ ಮುಂದೂಡದೆನಿಗದಿತ ಸಮಯದಲ್ಲಿ ಚುನಾವಣೆ ನಡೆಸಬೇಕು ಎಂದು ವಿಧಾನಪರಿಷತ್‌ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಬಿಎಂಪಿ ಚುನಾವಣೆ ನಡೆಸಲು ಯಾವುದೇ ಅಡ್ಡಿಯಿಲ್ಲ. ಈಗಾಗಲೇ ಕೇಂದ್ರ ಚುನಾವಣಾ ಆಯೋಗದ ತಿಳಿಸಿದೆ. ರಾಜ್ಯ ಚುನಾವಣಾ ಆಯೋಗ ಚುನಾವಣೆಗೆ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದೆ. ಆದರೆ ಸರ್ಕಾರ ಇದಕ್ಕೆ ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ವಾರ್ಡ್‌ ವಿಂಗಡಣೆ, ಮೀಸಲಾತಿ ಬದಲಾವಣೆ ಮುಂದೂಡಿದೆ. ರಾಜ್ಯದಲ್ಲಿ ಕೊರೊನಾ ಹಾಗೂ ಅತಿವೃಷ್ಟಿ ಹೆಚ್ಚಾಗಿದೆ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹಿಂದೇಟು ಹಾಕುತ್ತಿದೆ. ರಾಜ್ಯ ಚುನಾವಣಾ ಆಯೋಗ ಸಂವಿಧಾನಕ್ಕನ್ನುಗುಣವಾಗಿ ಚುನಾವಣೆ ನಡೆಸಬೇಕು. ಬೆಂಗಳೂರಿನ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಆಡಳಿತ ವಿಕೇಂದ್ರಿಕರಣ ದೃಷ್ಠಿಯಿಂದ ಚುನಾವಣೆ ನಡೆಸಬೇಕು. ಪಾಲಿಕೆ ಸದಸ್ಯರಿಂದ ಅಭಿವೃದ್ಧಿ ಸಾಧ್ಯ. ಇಲ್ಲದಿದ್ದರೆ ಸಮಸ್ಯೆಗಳಿಗೆ ಪರಿಹಾರ ಕಷ್ಟವಾಗಲಿದೆ. ಹೀಗಾಗಿ ಸರ್ಕಾರ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಕಾಲಮಿತಿಯಲ್ಲಿ ಬಿಬಿಎಂಪಿ ಚುನಾವಣೆ: ಅಶ್ವತ್ಥ ನಾರಾಯಣ : ಪಾಲಿಕೆಯ ಚುನಾವಣೆ ಕಾಲಮಿತಿಯ ಒಳಗಾಗಿ ಚುನಾವಣೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ಬೆಂಗಳೂರಿನ ಜನರ ಹಿತದೃಷ್ಟಿಯಿಂದ ಸರ್ಕಾರ ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆ ರಚನೆ ಮಾಡುತ್ತಿದ್ದು, ಕಳೆದ ಅಧಿವೇಶನದಲ್ಲಿ ವರದಿ ಮಂಡಿಸಲಾಗಿದೆ. ಜಂಟಿ ಸದನ ಸಮಿತಿಯಲ್ಲಿ ಈ ಕುರಿತು ಚರ್ಚೆಗಳು ನಡೆಯುತ್ತಿದ್ದು, ಶೀಘ್ರ ಜಾರಿ ಮಾಡಲಾಗುವುದು ಎಂದರು. ಕೆಎಂಸಿ ಕಾಯ್ದೆ ಪ್ರಕಾರ ಮುಂದಿನ ಚುನಾವಣೆ 198 ವಾರ್ಡ್‌ ಗಳಿಗೆ ನಡೆಯಲಿದೆ. ಆದರೆ, ಹೊಸ ಕಾಯ್ದೆ ಜಾರಿಯಾದರೆ ಅದರಲ್ಲಿ ಸೂಚಿಸಿದಂತೆ ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆಎಂದು ಮಾಹಿತಿ ನೀಡಿದರು. ಇನ್ನು ನಗರದಲ್ಲಿ ಮಳೆ ಅನಾಹುತಕ್ಕೆಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಳೆಗಾಲದಲ್ಲಿನಗರದಲ್ಲಿ ಸೃಷ್ಟಿಯಾಗುವ ಅನಾಹುತವನ್ನು ತಪ್ಪಿಸುವ ನಿಟ್ಟಿನಲ್ಲಿಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು. ಇಂಗು ಗುಂಡಿಗಳನ್ನು ರಚನೆಗೆ ಒತ್ತು ನೀಡಿ ರಾಜಕಾಲುವೆಯಲ್ಲಿ ನೀರು ಹರಿಯುವ ಸಾಮರ್ಥ್ಯ ಹೆಚ್ಚಿಸುತ್ತೇವೆ. ರಾಜಕಾಲುವೆ ಒತ್ತುವರಿ ತೆರವು ಮಾಡಲಾಗುತ್ತಿದ್ದು, ಬಾಕಿ ಉಳಿದಿರುವ ಭಾಗದಲ್ಲೂ ಒತ್ತುವರಿ ತೆರವು ಮಾಡುತ್ತೇವೆ ಎಂದರು

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-cm

Waqf: ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.