BBMP: ಈ ತಿಂಗಳು ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ ಕುಸಿತ


Team Udayavani, Aug 30, 2023, 3:23 PM IST

tdy-18

ಬೆಂಗಳೂರು: ಸಾರ್ವಜನಿಕರು ಪಾವತಿಸುವ ತೆರಿಗೆಯೇ ಪಾಲಿಕೆಗೆ ಆದಾಯದ ಮೂಲ. ಆದರೆ ಬಿಬಿಎಂಪಿ ತಾನು ಗುರಿಯಿಟ್ಟುಕೊಂಡಷ್ಟು ತೆರಿಗೆ ಸಂಗ್ರಹಿಸಲು ಆಗುತ್ತಿಲ್ಲ. ಪಾಲಿಕೆಯ ಎಂಟೂವಲಯ ವ್ಯಾಪ್ತಿಯಲ್ಲಿ 18 ಲಕ್ಷಕ್ಕೂ ಅಧಿಕ ಸ್ವತ್ತುಗಳಿದ್ದರೂ ಪಾಲಿಕೆ ನಿರೀಕ್ಷೆ ಮಾಡಿದ್ದಷ್ಟು ಬೊಕ್ಕಸದ ಕೈಚೀಲ ತುಂಬುತ್ತಿಲ್ಲ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಈ ವರ್ಷದಲ್ಲಿ ಸುಮಾರು 4,561 ಕೋಟಿ ರೂ.ಆಸ್ತಿ ಸಂಗ್ರಹಿಸುವ ಗುರಿ ಹೊಂದಿದೆ. ಆದರೆ ಆಗಸ್ಟ್‌ ತಿಂಗಳ ಮೊದಲಾರ್ಧದಲ್ಲಿ ಕೇವಲ 73.52 ಕೋಟಿ ರೂ. ಸಂಗ್ರಹವಾಗಿದೆ. ಏಪ್ರಿಲ್‌ನಿಂದ ಆಗಸ್ಟ್‌ 15ರ ವರೆಗಿನ ಅಂಕಿ-ಅಂಶದ ಪ್ರಕಾರ 2,512 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ.

ಏಪ್ರಿಲ್‌, ಜೂನ್‌ನಲ್ಲಿ ಉತ್ತಮವ ರೀತಿಯಲ್ಲಿ ತೆರಿಗೆ ಸಂಗ್ರಹವಾಗಿದೆ. ಈ ಅವಧಿಯಲ್ಲಿ 2,246 ಕೋಟಿ ರೂ. ಸ್ವತ್ತು ತೆರಿಗೆ ಮೂಲಕ ಪಾಲಿಕೆ ಬೊಕ್ಕಸ ಕೈಚೀಲ ಸೇರಿದೆ. ಆದರೆ ಆಗಸ್ಟ್‌ ತಿಂಗಳ ಮೊದಲಾರ್ಧದಲ್ಲಿ ಹೇಳಿಕೊಳ್ಳುವಂತ ತೆರಿಗೆ ಪಾವತಿಯಾಗಿಲ್ಲ. ಸ್ವತ್ತು ತೆರಿಗೆ ಕಟ್ಟುವ ವಿಚಾರದಲ್ಲಿ ಮಹದೇವಪುರ ಮೊದಲ ಸ್ಥಾನದಲ್ಲಿದ್ದು, ಚಾಮರಾಜ ಪೇಟೆ ಕೊನೆ ಸ್ಥಾನದಲ್ಲಿದೆ. ಈಗಾಗಲೇ ಶೇ.55ರಷ್ಟು ತೆರಿಗೆ ಸಂಗ್ರಹವಾಗಿದ್ದು, ಇನ್ನೂ ಶೇ.45 ರಷ್ಟು ತೆರಿಗೆ ಸಂಗ್ರಹಿಸಬೇಕಾಗಿದೆ. ಈ ದೃಷ್ಟಿಯಿಂದಾಗಿ ಈಗಾಗಲೇ ಪಾಲಿಕೆ ಮುಖ್ಯ ಆಯುಕ್ತರು ಕೂಡ ತೆರಿಗೆ ಸಂಗ್ರಹ ಹೆಚ್ಚಳ ಸಂಬಂಧ ಹಿರಿಯ ಅಧಿಕಾರಿಗಳಿಗೆ ಟಾರ್ಗೆಟ್‌ ನೀಡಿದ್ದಾರೆ.

2020 -21ನೇ ಸಾಲಿನಲ್ಲಿ 2,800 ಕೋಟಿ ರೂ., 2021-22ನೇ ಸಾಲಿನಲ್ಲಿ 3,100 ಕೋಟಿ ರೂ. ಸಂಗ್ರಹವಾಗಿತ್ತು. ಈ ವರ್ಷ 4,561 ಕೋಟಿ ರೂ. ಸಂಗ್ರಹದ ಗುರಿ ಹೊಂದಲಾಗಿದೆ.

ಹೊಸದಾಗಿ ಟೆಂಡರ್‌ ನಡೆಸಿಲ್ಲ: ರಾಜಧಾನಿಯ ಕೆಲವು ಪ್ರದೇಶಗಳಲ್ಲಿ ಪಾಲಿಕೆಗೆ ಸೇರಿದ ವಾಣಿಜ್ಯ ಕಟ್ಟಡಗಳ ಒಪ್ಪಂದದ ಅವಧಿ ಪೂರ್ಣಗೊಂಡಿದೆ. ಆದರೂ ಹಲವು ಮಾಲೀಕರು ತೆರಿಗೆ ಕಟ್ಟದೆಯೇ ಹಾಗೆಯೇ ಮುಂದುವರಿದ್ದಾರೆ. ಜತೆಗೆ ಬಿಬಿಎಂಪಿ ಅಧಿಕಾರಿಗಳು ಕೂಡ ಒಪ್ಪಂದ ಪೂರ್ಣಗೊಂಡಿರುವ ಮಾಲೀಕರಿಂದ ತಮ್ಮ ಸ್ವತ್ತನ್ನು ಮರಳಿ ಪಡೆಯುವ ಕೆಲಸಕ್ಕೆ ಮುಂದಾಗಿಲ್ಲ. ಈ ಎಲ್ಲ ಕಾರಣಗಳಿಂದಾಗಿಯೇ ಪಾಲಿಕೆ ಬೊಕ್ಕಸದ ಕೈ ಚೀಲ ತುಂಬುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿವೆ. ಕೆಲವು ಪ್ರದೇಶಗಳಲ್ಲಿ ವಾಣಿಜ್ಯ ಕಟ್ಟಡಗಳ ಮಾಲೀಕರು ತಪ್ಪು ಮಾಹಿತಿ ನೀಡಿ ಆಸ್ತಿ ಘೋಷಣೆ ಮಾಡಿಕೊಂಡಿರುವುದು ಕೂಡ ಬೆಳಕಿಗೆ ಬಂದಿದೆ. ಅದರ ಜತೆಗೆ ಸಾವಿರೂರು ಸಂಖ್ಯೆಯಲ್ಲಿ ಕಟ್ಟಡಗಳ ಮಾಲೀಕರು ಆಸ್ತಿ ತೆರಿಗೆ ಘೋಷಣೆ ಮಾಡಿಕೊಂಡಿಲ್ಲ ಎಂಬ ದೂರುಗಳಿವೆ.

ದೊಡ್ಡ ಮಾಲ್‌ ಮತ್ತು ಪಂಚಾತಾರ ಹೋಟೆಲ್‌ ಮಾಲೀಕರು ಕೂಡ ದೊಡ್ಡ ಮೊತ್ತ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಪಾಲಿಕೆ ಆದಾಯ ಸೋರಿಕೆ ಸಂಬಂಧ ಹಿರಿಯ ಅಧಿಕಾರಿ ಗಳು ಎಚ್ಚರಿಕೆ ವಹಿಸಬೇಕು. ಜತೆಗೆ ಕೆಳಹಂತದ ಅಧಿಕಾರಿಗಳು ಕೂಡ ಕಾಳಜಿವಹಿಸಿ ಕೆಲಸ ಮಾಡಬೇಕು. ಬಿಬಿಎಂಪಿಯ ತೆರಿಗೆ ಬೊಕ್ಕಸದ ಕೈಚೀಲ ತುಂಬಬೇಕಾದರೆ ಪ್ರತಿ ಎರಡು ವರ್ಷಕ್ಕೊಮ್ಮೆ ಪಾಲಿಕೆಯ ತೆರಿಗೆ ಮತ್ತು ಕಂದಾಯ ವಿಭಾಗದ ಅಧಿಕಾರಿಗಳು ವರ್ಗಾವಣೆ ಆಗಬೇಕು. -ಜಿ. ಪದ್ಮಾವತಿ, ಮಾಜಿ ಮೇಯರ್‌

ಕಟ್ಟಡಗಳನು ಪತ್ತೆ ಹಚ್ಚಲು: ಪಾಲಿಕೆ ವಿಫ‌ಲ ತೆರಿಗೆ ಘೋಷಣೆ ಮಾಡದ ಕಟ್ಟಡಗಳನ್ನು ಪತ್ತೆ ಮಾಡುವಲ್ಲಿ ಬಿಬಿಎಂಪಿ ಅಧಿಕಾರಿಗಳು ಕೂಡ ವಿಫ‌ಲರಾಗಿದ್ದಾರೆ. ಜತೆಗೆ ತಪ್ಪು ಮಾಹಿತಿ ನೀಡಿದ ಆಸ್ತಿ ಘೋಷಿಸಿಕೊಂಡಿರದ ಮಾಲೀಕರಿಗೆ ನೋಟಿಸ್‌ ಜಾರಿ ಮಾಡಿ ಸುಮ್ಮನಾಗಿಬಿಟ್ಟಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 18,55,802 ಆಸ್ತಿಗ ಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲಾಗಿದೆ. 2021-22ನೇ ಸಾಲಿನಲ್ಲಿ ಈವರೆಗೂ ಸ್ವಯಂ ಘೋಷಣೆ ಆಸ್ತಿ ತೆರಿಗೆ ಅಡಿಯಲ್ಲಿ 13,56,087 ಸ್ವತ್ತುಗಳಿಂದ ಆಸ್ತಿ ತೆರಿಗೆ ಪಾವತಿ ಆಗಿದೆ. ಇದರಲ್ಲಿ 97,057 ವಾಣಿಜ್ಯ ಕಟ್ಟಡಗಳು, 9112 ಬಹುಮಹಡಿ ವಸತಿ ಸಂಕೀರ್ಣಗಳು ಜತೆಗೆ 12,59,030 ವಸತಿ ಯೋಗ್ಯ ಮನೆಗಳು ಸೇರಿವೆ. ಸುಮಾರು 578 ಬಹುಮಹಡಿ ವಸತಿ ಸಂಕೀರ್ಣಗಳು ಪಾಲಿಕೆಗೆ ತೆರಿಗೆ ಪಾವತಿಸುತ್ತಿವೆ.

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.