ಬಿಬಿಎಂಪಿ ಹೃದಯಾಲಯ ಶೀಘ್ರ ಆರಂಭ
Team Udayavani, Feb 3, 2017, 12:02 PM IST
ಬೆಂಗಳೂರು: ಬಿಬಿಎಂಪಿ ಮತ್ತು ನಾರಾಯಣ ಹೃದಯಾಲಯದ ಸಹಯೋಗದಲ್ಲಿ ಶಿವಾಜಿನಗರದದ ಬ್ರಾಡ್‌ವೇ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ “ಬಿಬಿಎಂಪಿ-ನಾರಾಯಣ ಹೃದಯಾಲಯ’ ಅತಿ ಶೀಘ್ರದಲ್ಲೇ ಕಾರ್ಯಾರಂಭವಾಗಲಿದೆ ಎಂದು ನಗರಾಭಿವೃದ್ಧಿ ಸಚಿವ ಆರ್.ರೋಷನ್ ಬೇಗ್ ತಿಳಿಸಿದ್ದಾರೆ.
ವಸಂತನಗರ ವಾರ್ಡ್‌ನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಂಗಳೂರು ಒನ್ ಪೂರ್ವ ಕೇಂದ್ರವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ಬಡ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ಸಲುವಾಗಿ ಈ ಹೃದಯಾಲಯ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಕಟ್ಟಡ ನಿರ್ಮಾಣ ಕಾಮಗಾರಿ ಮುಕ್ತಾಯದ ಹಂತ ತಲುಪಿದೆ. ಬಿಬಿಎಂಪಿ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡುತ್ತಿದೆ, ಇತರೆ ಸಲಕರಣೆಗಳನ್ನು ನಾರಾಯಣ ಹೃದಯಾಲಯ ಒದಗಿಸಲಿದೆ ಎಂದು ಹೇಳಿದರು.
ಮತ್ತೂಂದು ವೈದ್ಯಕೀಯ ಕಾಲೇಜಿಗೆ ಮನವಿ: ಬೆಂಗಳೂರಿನಲ್ಲಿ ಒಂದೇ ಒಂದು ಸರ್ಕಾರಿ ವೈದ್ಯಕೀಯ ಕಾಲೇಜಿದೆ. ಹಾಗಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಮತ್ತೂಂದು ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿತ್ತು. ಅದಕ್ಕೆ ಅವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಇದೇ ವೇಳೆ ರೋಷನ್ ಬೇಗ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.