ಸಮವಸ್ತ್ರ ಪೂರೈಕೆಗೆ ಪಾಲಿಕೆ ಹೊಸ ಚಿಂತನೆ

Team Udayavani, Jan 9, 2023, 3:01 PM IST

TDY-18

ಬೆಂಗಳೂರು: ಶೈಕ್ಷಣಿಕ ವರ್ಷ ಆರಂಭವಾದರೂ ಸಮವಸ್ತ್ರ, ಶೂ, ಸಾಕ್ಸ್‌, ಸ್ವೆಟ್ಟರ್‌ ಇಲ್ಲದೆ ಬಿಬಿಎಂಪಿ ಶಾಲೆ, ಕಾಲೇಜಿಗೆ ಬರುತ್ತಿದ್ದ ಮಕ್ಕಳಿಗೆ 2023- 24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ಎಲ್ಲ ಸೌಕರ್ಯ ನೀಡಲು ಬಿಬಿಎಂಪಿ ಶಿಕ್ಷಣ ವಿಭಾಗ ಹೊಸ ಯೋಜನೆ ರೂಪಿಸಿದೆ.

ಬಿಬಿಎಂಪಿ ಅಡಿಯಲ್ಲಿ 93 ನರ್ಸರಿ, 16 ಪ್ರಾಥಮಿಕ ಶಾಲೆಗಳು, 19 ಪದವಿ ಪೂರ್ವ, 4 ಪದವಿ ಹಾಗೂ 2 ಸ್ನಾತಕೋತ್ತರ ಪದವಿ ಕಾಲೇಜುಗಳು ಸೇರಿ 165 ಶಾಲಾ/ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸಕ್ತ ಸಾಲಿನಲ್ಲಿ ಈ ಶಾಲೆ-ಕಾಲೇಜುಗಳಲ್ಲಿ 24 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆ, ಕಾಲೇಜುಗಳ ಪೈಕಿ ಸ್ನಾತಕೋತ್ತರ ಪದವಿ ಕಾಲೇಜು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಗಳನ್ನು ಹೊರತು ಪಡಿಸಿ ಉಳಿದ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಿಬಿಎಂಪಿಯಿಂದ ಸಮವಸ್ತ್ರ, ಸ್ವೆಟರ್‌, ಶೂ, ಸಾಕ್ಸ್‌ಗಳನ್ನು ನೀಡಲಾಗುತ್ತದೆ. ಆದರೆ, ಪ್ರತಿ ವರ್ಷ ಶೈಕ್ಷಣಿಕ ವರ್ಷ ಆರಂಭವಾಗಿ 6 ತಿಂಗಳಾದರೂ ಸಮರ್ಪಕ ಸೌಕರ್ಯಗಳನ್ನು ನೀಡುತ್ತಿಲ್ಲ. ಹೀಗಾಗಿ ಮುಂದಿನ ವರ್ಷ ಶೈಕ್ಷಣಿಕ ವರ್ಷ ಆರಂಭವಾಗುವ 2 ತಿಂಗಳಲ್ಲಿ ಎಲ್ಲ ಸೌಕರ್ಯ ಒದಗಿಸುವಂತೆ ಮಾಡಲು, ಈಗಲೇ ಗುತ್ತಿಗೆ ದಾರರನ್ನು ನೇಮಿಸಲು ನಿರ್ಧರಿಸಲಾಗಿದೆ.

ಅದರ ಜತೆಗೆ ಬಿಬಿಎಂಪಿ ಶಾಲೆ-ಕಾಲೇಜಿಗೆ ಮಕ್ಕಳು ದಾಖಲಾಗುವ ಸಂದರ್ಭದಲ್ಲಿಯೇ ಅವರ ಸಮವಸ್ತ್ರ, ಸ್ವೆಟರ್‌ ಹಾಗೂ ಶೂಗಳ ಅಳತೆಯನ್ನು ಪಡೆಯಲಾಗುತ್ತದೆ. ಅಲ್ಲದೆ, ಈ ವಸ್ತುಗಳನ್ನು ಪೂರೈಸಲು ಗುತ್ತಿಗೆದಾರರನ್ನು ನೇಮಿಸಲು ಫೆಬ್ರವರಿಯಲ್ಲಿ ಟೆಂಡರ್‌ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಬಿಡ್‌ ಸಲ್ಲಿಸಿ ಆಯ್ಕೆಯಾಗುವ ಗುತ್ತಿಗೆದಾರರು ಮುಂದಿನ ಶೈಕ್ಷಣಿಕ ವರ್ಷ ಆರಂಭದ ನಂತರದ ಒಂದು ತಿಂಗಳಲ್ಲಿ ಬಿಬಿಎಂಪಿ ಶಾಲೆ-ಕಾಲೇಜುಗಳಿಗೆ ದಾಖಲಾದ ಮಕ್ಕಳ ಮಾಹಿತಿ ಪಡೆದು, ಮುಂದಿನ ಒಂದು ತಿಂಗಳಲ್ಲಿ ಸಮವಸ್ತ್ರ, ಸ್ವೆಟರ್‌, ಶೂ, ಸಾಕ್ಸ್‌ ಗಳನ್ನು ವಿತರಿಸುವಂತೆ ಸೂಚಿಸಲಾಗುತ್ತದೆ.

ಬಿಬಿಎಂಪಿ ಶಾಲೆ-ಕಾಲೇ ಜುಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷ ಆರಂಭವಾದ ಕೂಡಲೆ ಸಮವಸ್ತ್ರ, ಸ್ವೆಟರ್‌, ಶೂ ಮತ್ತು ಸಾಕ್ಸ್‌ ನೀಡಲು ಈಗಲೇ ಟೆಂಡರ್‌ ಪ್ರಕ್ರಿಯೆ ನಡೆಸಲಾಗು ವುದು. ಶಾಲೆ-ಕಾಲೇಜು ಆರಂಭ ವಾದ ಎರಡು ತಿಂಗಳೊಳಗಾಗಿ ಮಕ್ಕಳಿಗೆ ನಿಗದಿತ ವಸ್ತುಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. -ಡಾ. ರಾಮಪ್ರಸಾತ್‌ ಮನೋಹರ್‌ ಬಿಬಿಎಂಪಿ ವಿಶೇಷ ಆಯುಕ್ತ

-ಗಿರೀಶ್‌ ಗರಗ

ಟಾಪ್ ನ್ಯೂಸ್

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.