ಪಾಲಿಕೆ ಜನ್ಮ ಜಾಲಾಡಿದ ಜಾಲತಾಣಿಗರು


Team Udayavani, Sep 4, 2018, 12:19 PM IST

palike-janma.jpg

ಬೆಂಗಳೂರು: ಯಾವುದೇ ಮಾನದಂಡಗಳಿಲ್ಲದೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ 550ಕ್ಕೂ ಹೆಚ್ಚು ಜನರನ್ನು ಆಯ್ಕೆ ಮಾಡಿದ ಪಾಲಿಕೆ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಪ್ರಶಸ್ತಿ ಪುರಸ್ಕೃತರ ಬಹುಮಾನ ಮೊತ್ತವನ್ನು ಕೊಡಗು ನಿರಾಶ್ರಿತರಿಗೆ ನೀಡಲು ಪಾಲಿಕೆ ನಿರ್ಧರಿಸಿದೆ.

ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಸಾಮಾನ್ಯವಾಗಿ ಯಾವುದೇ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರು ಕಡಿಮೆಯಿದ್ದು, ಸಭಿಕರು ಹೆಚ್ಚಿನ ಸಂಖ್ಯೆಯಲ್ಲಿರುತ್ತಾರೆ. ಆದರೆ, ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಭಿಕರಿಗಿಂತ ಪುರಸ್ಕೃತರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು.

ಸಮಾರಂಭದ ದಿನವೇ ಪುರಸ್ಕೃತರ ಪಟ್ಟಿಗೆ 200ಕ್ಕೂ ಹೆಚ್ಚು ಹೆಸರು ನುಸುಳಿದ ಪರಿಣಾಮ, ಕಾರ್ಯಕ್ರಮ ಅವ್ಯವಸ್ಥೆಯ ಗೂಡಾಗಿತ್ತು. ಪ್ರಶಸ್ತಿ ಪಡೆಯಲು ನೂಕು-ನುಗ್ಗಲು ಉಂಟಾದ ಕಾರಣ, ಪುರಸ್ಕೃತರು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಪಾಲಿಕೆ ನಡೆಗೆ ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ವ್ಯಕ್ತವಾಗಿದೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಬಗ್ಗೆ ವ್ಯಾಪಾಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೆಲ ಪುರಸ್ಕೃತರು ತಮಗೆ ಬಂದಿರುವ ಪ್ರಶಸ್ತಿ ಮೊತ್ತವನ್ನು ಕೊಡಗು ನೆರೆ ಸಂತ್ರಸ್ತರಿಗೆ ನೀಡುವಂತೆ ಪಾಲಿಕೆಗೆ ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿ 500 ಪ್ರಶಸ್ತಿ ಪುರಸ್ಕೃತರಿಗಾಗಿ ಮೀಸಲಿರಿಸಿದ್ದ 75 ಲಕ್ಷ ರೂ. ನಗದು ಪುರಸ್ಕಾರ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ಪ್ರಶಸ್ತಿ ಆಯ್ಕೆ ಸಮಿತಿ ನಿರ್ಧರಿಸಿದೆ.

ಜಾಲತಾಣಿಗರು ಹೇಳಿದ್ದೇನು?: “ಕೆಂಪೇಗೌಡರಿಗೆ ಅವಮಾನ ಮಾಡುವ ಉದ್ದೇಶದಿಂದಲೇ ಇಂತಹ ಕಾರ್ಯಕ್ರಮವನ್ನು ಮೇಯರ್‌ ಆಯೋಜಿಸಿದ್ದಾರೆ’. “ಅವ್ಯವಸ್ಥಿತಿವಾಗಿ ಕಾರ್ಯಕ್ರಮ ನಡೆಸುವ ಮೂಲಕ ಪಾಲಿಕೆ ಒಕ್ಕಲಿಗರಿಗೆ ಅವಮಾನ ಮಾಡಿದೆ’. “ಕೆಂಪೇಗೌಡ ಪ್ರಶಸ್ತಿಯ ಮೌಲ್ಯ ಏನು ಎಂಬುದನ್ನು ಮೇಯರ್‌ ಮೊದಲು ತಿಳಿದುಕೊಳ್ಳಲಿ’ ಎಂಬುದೂ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಒಬ್ಬೊಬ್ಬರು ಒಂದೊಂದು ರೀತಿ ವ್ಯಂಗ್ಯ, ಟೀಕೆ ಮಾಡಿದ್ದಾರೆ.

ಪ್ರಶಸ್ತಿ ಸಾಯಲು ಬಿಡಬೇಡಿ: “ಇದು ಹೀಗೇ ಮುಂದುವರಿದರೆ ಕೆಂಪೇಗೌಡ ಪ್ರಶಸ್ತಿ ಮೌಲ್ಯ ಕಳೆದುಕೊಳ್ಳುವುದಂತೂ ಸತ್ಯ. ಪ್ರಶಸ್ತಿಗೆ ಯಾರ್ಯಾರೋ ಬಂದು ಕೊರಳೊಡ್ಡಿದ್ದು, ಪ್ರಶಸ್ತಿ ಪುರಸ್ಕೃತರೇ ಮುಜುಗರ ಪಟ್ಟುಕೊಳ್ಳುವಂತೆ ಮಾಡಿದೆ. ನನ್ನ ಕಳಕಳಿ ಇಷ್ಟೇ, ಪ್ರಶಸ್ತಿ ಮೌಲ್ಯ ಉಳಿಯಬೇಕಾದರೆ, ಎಲ್ಲ ಕ್ಷೇತ್ರಗಳಿಂದಲೂ ತಲಾ ಇಬ್ಬರನ್ನು ಗುರುತಿಸಿ ಗೌರವಿಸುವ ಕಾರ್ಯಕ್ಕೆ ಪಾಲಿಕೆ ಮುಂದಾಗಲಿ. ಪ್ರಶಸ್ತಿಯ ಗೌರವ, ಮೌಲ್ಯವನ್ನು ದಯವಿಟ್ಟು ಸಾಯಲು ಬಿಡಬೇಡಿ’ ಎಂದು ಶ್ರೀನಿಧಿ ಒದಿಲಾ°ಳ ಎಂಬುವವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಸಂತೆಯಲ್ಲಿ ಪ್ರಸಾದ ಹಂಚಿದಂತೆ: “ಯಾವುದೇ ಅರ್ಹತೆ ಇಲ್ಲದವರಿಗೂ ಕೆಂಪೇಗೌಡ ಪ್ರಶಸ್ತಿ ಕೊಟ್ಟಿದ್ದಾರೆ. ಪ್ರಶಸ್ತಿ ನೀಡಲು ಯಾವೊಂದು ಮಾನದಂಡ ಕೂಡ ಇಲ್ಲವೇ? ಸಂತೆಯಲ್ಲಿ ಪ್ರಸಾದ ಹಂಚಿದ ಆಗಿತ್ತು ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ’ ಎಂದು ಅರುಣ್‌ ಕುಮಾರ್‌ ಎಂಬುವವರು ಎಫ್ಬಿ ವಾಲ್‌ನಲ್ಲಿ ಬರೆದುಕೊಂಡಿದ್ದಾರೆ. 

ಬೂತ್‌ಗೆ 100 ಮಂದಿ ಆಯ್ಕೆ!: “2018ರಲ್ಲಿ 507 ಜನರಿಗೆ ಕೆಂಪೇಗೌಡ ಪ್ರಶಸ್ತಿ ಹಂಚಿಕೆ. ಮುಂದಿನ ಬಾರಿಯಿಂದ ಮತದಾರರ ಪಟ್ಟಿಯಿಂದ ಪ್ರತಿ ಬೂತ್‌ನ 100 ಜನರನ್ನು ಆಯ್ಕೆ ಮಾಡಲು ನಿರ್ಧಾರ. ವರ್ಷಕ್ಕೆ ಎರಡು ಬಾರಿ ಪ್ರಶಸ್ತಿ ನೀಡಲು ನಿರ್ಧರಿಸಿದ್ದಾರಂತೆ’ ಎಂದು ಬಿಜೆಪಿ ಸಹ ವಕ್ತಾರ ಎಸ್‌.ಪ್ರಕಾಶ್‌ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಸ್ಮರಣಿಕೆ, ಪ್ರಮಾಣ ಪತ್ರಕ್ಕಾಗಿ ದುಂಬಾಲು: ಶನಿವಾರದ ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚು ಪುರಸ್ಕೃತರಿಗೆ ಸ್ಮರಣಿಕೆ ಹಾಗೂ ಪ್ರಮಾಣ ಪತ್ರ ಕೊರತೆಯಾಗಿತ್ತು. ಆ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀಡುವುದಾಗಿ ಘೋಷಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ಹತ್ತಾರು ಪುರಸ್ಕೃತರು ಪಾಲಿಕೆಗೆ ಬರಲಾರಂಭಿಸಿದ್ದು, ತಮಗೆ ಕೇವಲ ಶಾಲು, ಹಾರ ಮಾತ್ರ ಸಿಕ್ಕಿದೆ. ಸ್ಮರಣಿಕೆ ಕೊಡಿ ಎಂದು ಸಾರ್ವಜನಿಕ ಸಂಪರ್ಕಾಧಿಕಾರಿಗಳಿಗೆ ದುಂಬಾಲು ಬಿದ್ದಿದ್ದಾರೆ. ಸ್ಮರಣಿಕೆ ಹಾಗೂ ಪ್ರಮಾಣಪತ್ರ ಬಂದ ಕೂಡಲೇ ಕರೆ ಮಾಡಿ ತಿಳಿಸುವುದಾಗಿ ಪಿಆರ್‌ಒ ಹೇಳಿ ಕಳುಹಿಸುತ್ತಿದ್ದಾರೆ. ಇನ್ನು ಕೆಲವರು ಕರೆ ಮಾಡಿ, “ನಗದು ಬಹುಮಾನ ಯಾವಾಗ ಕೊಡ್ತೀರಾ?’ ಎಂದು ಕೇಳುತ್ತಿದ್ದಾರೆ.

ಮೇಯರ್‌ ವಿರುದ್ಧ ಕಾಂಗ್ರೆಸ್‌ ಗರಂ: ಏಕಾಏಕಿ ಪ್ರಶಸ್ತಿ ಪುರಸ್ಕೃತರ ಪಟ್ಟಿಗೆ 200 ಜನರ ಹೆಸರು ಸೇರಿಸಿದ ಮೇಯರ್‌ ಆರ್‌.ಸಂಪತ್‌ರಾಜ್‌ ಅವರ ಏಕಪಕ್ಷೀಯ ನಿರ್ಧಾರದಿಂದ ಕಾಂಗ್ರೆಸ್‌ ತೀವ್ರ ಟೀಕೆಗೆ ಗುರಿಯಾಗಿದೆ. ಸಂಪತ್‌ ಅವರ ಈ ನಡೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಜತೆಗೆ ಮೂರು ವರ್ಷಗಳಿಂದ ಕಾಪಾಡಿಕೊಂಡು ಬಂದ ಗೌರವವನ್ನು ಹಾಳು ಮಾಡಿದ್ದು, ಮೇಯರ್‌ ನಿರ್ಧಾರದಿಂದ ಕಾಂಗ್ರೆಸ್‌ ಮುಜುಗರಕ್ಕೆ ಒಳಗಾಗಿದೆ ಎಂದು ಕಾಂಗ್ರೆಸ್‌ ಪಾಲಿಕೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಕೆಪಿಸಿಸಿಯಲ್ಲೂ ಮೇಯರ್‌ ಕ್ರಮಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ ಎನ್ನಲಾಗಿದೆ.
 
ಇದು ಅತ್ಯಂತ ಗೌರವಯುತ ಪ್ರಶಸ್ತಿ. ಯಾವ ಕಾರಣಕ್ಕೆ ಇಷ್ಟೊಂದು ಮಂದಿಗೆ ಪ್ರಶಸ್ತಿ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ, ಮುಂದಿನ ಬಾರಿ ಬಿಬಿಎಂಪಿ ಜತೆಗೆ ಚರ್ಚಿಸಿ ಎಷ್ಟು ಜನರಿಗೆ ಪ್ರಶಸ್ತಿ ನೀಡಬೇಕು ಎಂಬುದನ್ನು ನಿಗದಿಪಡಿಸಲಾಗುವುದು.
ಡಾ.ಜಿ.ಪರಮೇಶ್ವರ್‌, ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.