ಹಿಜಾಬ್‌ಗಾಗಿ ಪರೀಕ್ಷೆ ಬಹಿಷ್ಕರಿಸಿದರೆ ಮತ್ತೆ ಬರೆಯಲು ಅವಕಾಶವಿಲ್ಲ : ಬಿ.ಸಿ.ನಾಗೇಶ್ ಸೂಚನೆ
ಕಿರಿಕಿರಿ ಮಾಡಿದರೆ ಎದುರಿಸಲು ಪೊಲೀಸ್ ಇಲಾಖೆ ಸನ್ನದ್ಧ
Team Udayavani, Mar 27, 2022, 9:00 PM IST
8.74 ಲಕ್ಷ ವಿದ್ಯಾರ್ಥಿಗಳಿಗೆ 3444 ಪರೀಕ್ಷೆ ಕೇಂದ್ರ ಸ್ಥಾಪನೆ
ಬಾಗಲಕೋಟೆ : ರಾಜ್ಯಾದ್ಯಂತ ಮಾ.28ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಸುಮಾರು 8.74 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿಯೊಬ್ಬರಿಗೂ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಹೈಕೋರ್ಟ್ ನಿರ್ದೇಶನದಂತೆ ಎಲ್ಲರೂ ಸಮವಸ್ತ್ರದೊಂದಿಗೆ ಆಗಮಿಸಿ ಪರೀಕ್ಷೆ ಬರೆಯಬೇಕು. ಒಂದು ವೇಳೆ ಯಾರಾದರೂ ಬಹಿಷ್ಕಾರ ಮಾಡಿದರೆ ಅಂತವರಿಗಾಗಿ ಪ್ರತ್ಯೇಕ ಪರೀಕ್ಷೆ ನಡೆಸಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮವಸ್ತ್ರ ವಿಷಯದಲ್ಲಿ ಹೈಕೋರ್ಟ್ ಮೂರು ವಿಷಯ ಸ್ಪಷ್ಟವಾಗಿ ಹೇಳಿದೆ. ಇದನ್ನು ಯಾರೂ ಉಲ್ಲಂಘಿಸುವಂತಿಲ್ಲ. ಅಲ್ಲದೇ ಮಕ್ಕಳ ಶೈಕ್ಷಣಿಕ ಭವಿಷ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಒಂದು ಮುಖ್ಯ ಘಟ್ಟ. ಎಲ್ಲ ವಿದ್ಯಾರ್ಥಿಗಳೂ ಸಮವಸ್ತ್ರದೊಂದಿಗೆ ಪರೀಕ್ಷೆ ಎದುರಿಸಲಿದ್ದಾರೆ. ಎಲ್ಲೋ 100 ವಿದ್ಯಾರ್ಥಿಗಳು ಮಾತ್ರ ವಿರೋಧಿಸಿದ್ದು, ಅವರೂ ಪರೀಕ್ಷೆ ವಿಷಯದಲ್ಲಿ ವಿರೋಧ ಮಾಡಲ್ಲ ಎಂಬ ವಿಶ್ವಾಸವಿದೆ. ರಾಜ್ಯದಲ್ಲಿ 8.74 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅವರಿಗಾಗಿ 3444 ಪರೀಕ್ಷೆ ಕೇಂದ್ರ ಸ್ಥಾಪಿಸಲಾಗಿದೆ. 48 ಸಾವಿರ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಎರಡು ವರ್ಷ ಕೋವಿಡ್ ಸಮಸ್ಯೆ ಎದುರಿಸಿದ್ದು, ಈ ಬಾರಿಯೂ ಮುಂಜಾಗ್ರತಾ ಕ್ರಮವಾಗಿ ಕೊಠಡಿಗಳನ್ನು ಸಾನಿಟೈಜೇಶನ್ ಮಾಡಲಾಗಿದೆ. ಎಲ್ಲ ಸುರಕ್ಷತೆಗಳೊಂದಿಗೆ ಪರೀಕ್ಷೆ ಶಿಸ್ತುಬದ್ಧವಾಗಿ ನಡೆಯಲಿವೆ. ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದರು.
ಹಿಜಾಬ್ ವಿಷಯದಲ್ಲಿ ಶಿಕ್ಷಕರು, ಪರೀಕ್ಷೆ ಅಧೀಕ್ಷಕರು ಸಹಿತ ಅಧಿಕಾರಿಗಳಿಗೆ ಯಾವುದೇ ರೀತಿಯ ಕಿರಿಕಿರಿ ಮಾಡಿದರೆ ಅದನ್ನು ಎದುರಿಸಲು ಪೊಲೀಸ್ ಇಲಾಖೆ ಸಿದ್ಧವಿದೆ. ಪರೀಕ್ಷೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಇರಲಿದೆ. ಹಿಜಾಬ್ ಧರಿಸುವವರು, ಶಾಲಾ ಆವರಣದವರೆಗೆ ಮಾತ್ರ ಹಾಕಿಕೊಂಡು ಬರಬಹುದು. ಪರೀಕ್ಷೆ ಕೊಠಡಿಯೊಳಗೆ ಸಮವಸ್ತ್ರದಲ್ಲೇ ಇರಬೇಕು. ಎಸ್ಸೆಸ್ಸೆಲ್ಸಿ ಮಕ್ಕಳು ಯಾವುದೇ ಭಯವಿಲ್ಲದೇ ಪರೀಕ್ಷೆ ಎದುರಿಸಬೇಕು.
ಇದನ್ನೂ ಓದಿ : ತಂದೆ ಮಕ್ಕಳ ನಡುವಿನ ಜಗಳ, ತಂದೆ ಸಾವಿನಲ್ಲಿ ಅಂತ್ಯ : ಕಿರಿಯ ಮಗಳು ಪೋಲೀಸರ ವಶಕ್ಕೆ
ಕೊರೊನಾ ಹಿನ್ನೆಲೆಯಲ್ಲಿ ಶೇ.80 ಪಠ್ಯಕ್ರಮ ಪೂರ್ಣಗೊಂಡಿದ್ದು, ಅದೇ ಪಠ್ಯಕ್ರಮ ಅನುಸಾರವಾಗಿ ಪ್ರಶ್ನೆ ಪತ್ರಿಕೆ ಇರಲಿವೆ. ಈ ಬಾರಿ ಆಯ್ಕೆ ಪ್ರಶ್ನೆಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಹೀಗಾಗಿ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಸಮವಸ್ತ್ರ ನಿಗದಿಯಾಗಿದೆ. ಆಯಾ ಖಾಸಗಿ ಶಾಲೆಗಳಲ್ಲಿ ನಿಗದಿಪಡಿಸಿದ ಸಮವಸ್ತ್ರ ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆಗೆ ಬರಬೇಕು. ಬಾಹ್ಯ ಮತ್ತು ರಿಪಿಟರ್ ವಿದ್ಯಾರ್ಥಿಗಳಿಗೆ ಇದು ಅನ್ವಯಿಸಲ್ಲ. ರೆಗ್ಯೂಲರ್ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಂಹಿತೆ ಅನ್ವಯಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.