ಪೊಲೀಸ್ ಸಿಬ್ಬಂದಿಗೆ ಬಿಡಿಎ ಫ್ಲ್ಯಾಟ್
Team Udayavani, Aug 24, 2018, 9:45 AM IST
ಬೆಂಗಳೂರು: ಪೊಲೀಸರ ವಸತಿ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಪೊಲೀಸ್ ಇಲಾಖೆ ಇದೀಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ)ಮೊರೆ ಹೋಗಿದೆ. ಈ ಹಿಂದೆ, ಪೊಲೀಸ್ ಇಲಾಖೆಗೆ ಬೇಕಾದ ವಸತಿಗಳನ್ನು ಪೋಲಿಸ್ ಹೌಸಿಂಗ್ ಬೋರ್ಡ್ ಮೂಲಕ ನಿರ್ಮಾಣ ಮಾಡಲಾಗುತ್ತಿತ್ತು. ಆದರೆ, ಈಗ ಬೆಂಗಳೂರು ಗಾತ್ರದಲ್ಲಿ ದೊಡ್ಡದಾಗಿ ಬೆಳೆಯುತ್ತಿದ್ದು, ಜಾಗದ ಸಮಸ್ಯೆ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳ ಸಮಸ್ಯೆಗಳು ಎದುರಾಗಿವೆ. ಈ ದೃಷ್ಟಿಯಿಂದ ಪೋಲಿಸ್ ಇಲಾಖೆ ತನ್ನ ಸಿಬ್ಬಂದಿಗಳಿಗಾಗಿ ಈಗ ಬಿಡಿಎ ನಿರ್ಮಿಸಿರುವ ವಸತಿ ಸಮುತ್ಛಯಗಳನ್ನು ಖರೀದಿ ಮಾಡುವ ಚಿಂತನೆ ನಡೆಸಿದೆ.
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಈಗಾಗಲೇ ಬಿಡಿಎ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿದೆ. ಪೊಲೀಸ್ ಇಲಾಖೆ ಬಿಡಿಎಯಿಂದ ಸುಮಾರು 2ಸಾವಿರ ಅಪಾರ್ಟ್‌ಮೆಂಟ್‌ಗಳನ್ನು ಖರೀದಿಸಲು ಆಲೋಚನೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಕೂಡ ಈ
ಸಂಬಂಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸಿರುವ ಅಪಾರ್ಟ್‌ಮೆಂಟ್‌ಳಿಗೆ ಭೇಟಿ ನೀಡಿ ವೀಕ್ಷಿಸಿದ್ದಾರೆ. ಬಿಡಿಎ ನಿರ್ಮಿಸಿರುವ ವಸತಿ ಸಮುತ್ಛಯಗಳ ಬಗ್ಗೆಯೂ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜಿ.ಪರಮೇಶ್ವರ್ ಚರ್ಚೆ: ವಸತಿ ಸಮುತ್ಛಯ ಖರೀದಿ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಾತಕತೆ ನಡೆದಿದ್ದು, ಸದ್ಯದಲ್ಲೆ ಖರೀದಿ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಗೃಹ ಇಲಾಖೆ ಸಚಿವರಾಗಿದ್ದು, ಇದೀಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವುದರಿಂದ ಖರೀದಿ ಪ್ರಕ್ರಿಯೆ ಇನ್ನಷ್ಟು ಸುಲಭವಾಗಲಿದೆ.
ಅಪಾರ್ಟ್‌ಮೆಂಟ್ ಖರೀದಿ ಕುರಿತಂತೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಬಿಡಿಎ ಆಯುಕ್ತ ರಾಕೇಶ್ ಸಿಂಗ್, ಹಿರಿಯ ಪೊಲೀಸ್ ಅಧಿಕಾರಿ ಕಿಶೋರ್‌ಚಂದ್ರ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳ ಜತೆ ಕೆಲವು ಸುತ್ತುಗಳ ಮಾತುಕತೆ ನಡೆಸಿದ್ದಾರೆ. ಸದ್ಯದಲ್ಲೆ, ಮತ್ತೂಂದು ಸುತ್ತಿನ ಮಾತುಕತೆ ನಡೆಯಲಿದ್ದು ಅಲಿ, ಎಲ್ಲವೂ ಅಂತಿಮಗೊಳ್ಳಲಿದೆ ಎಂದು ಬಿಡಿಎನ ಹಿರಿಯ ಅಧಿಕಾರಿಗಳು ಉದಯವಾಣಿಗೆ ಮಾಹಿತಿ ನೀಡಿದ್ದಾರೆ.
ಎಲ್ಲೆಲ್ಲಿ ಅಪಾರ್ಟ್‌ಮೆಂಟ್?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಈಗಾಗಲೇ ಕಣಮಿಣಿಕೆ, ಕೋಮಘಟ್ಟ, ದೊಡ್ಡಬನಹಳ್ಳಿ, ವಡೇರಹಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸಿದ್ದು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಕಣಮಿಣಿಕೆ, ಕೋಮಘಟ್ಟ, ದೊಡ್ಡಬನ ಹಳ್ಳಿ ಸೈಟ್‌ಗಳಿಗೆ ಭೇಟಿ ನೀಡಿದ್ದಾರೆ. ಪೊಲೀಸ್ ಇಲಾಖೆ ಒಂದೇ ಕಡೆ ಬ್ಲಾಕ್ ನೀಡಿ ಎಂದು ಕೇಳಿಕೊಂಡಿದೆ.
ಆದರೆ ಸದ್ಯದ ಪರಿಸ್ಥಿತಿಯಲ್ಲಿ ಬಿಡಿಎ ಒಂದೇ ಕಡೆಗೆ 2ಸಾವಿರ ಅಪಾರ್ಟ್‌ಮೆಂಟ್‌ಗಳನ್ನು ನೀಡಲು ಸಾಧ್ಯವಿಲ್ಲ. ಹೀಗಾಗಿ,ಲಭ್ಯವಿರಷ್ಟು ಕಡೆ ಒಂದೇ ಬ್ಲಾಕ್‌ನಲ್ಲಿ ನಿವಾಸವನ್ನು ನೀಡುವ ಆಲೋಚನೆಯಲ್ಲಿದೆ. ಕಣಮಿಣಿಕೆಯಲ್ಲಿ 2ಬಿಎಚ್ ಕೆಯ 1ಸಾವಿರ, ಕೋಮಘಟ್ಟದಲ್ಲಿ 700 ಮತ್ತು ದೊಡ್ಡಬನಹಳ್ಳಿಯಲ್ಲಿ 300 ಅಪಾರ್ಟ್ ಮೆಂಟ್‌ಗಳ ಇದ್ದು ಇವುಗಳನ್ನು ಪೊಲೀಸ್ ಇಲಾಖೆಗೆ ನೀಡುವು ಸಾಧ್ಯತೆ ಹೆಚ್ಚಿದೆ.
ಸೈಟ್‌ಗಳಿಗೆ ಬೆಲೆ ಎಷ್ಟು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸಿ ರುವ ಅಪಾರ್ಟ್‌ಮೆಂಟ್‌ಗಳ ಬೆಲೆ ಒಂದೊಂದು
ಕಡೆ ಒಂದೊಂದು ರೀತಿಯಲ್ಲಿ ಇದೆ. ಹೀಗಾಗಿ ಸಾರ್ವಜನಿಕರಿಂದ ಎಷ್ಟು ಹಣವನ್ನು ಪಡೆಯಲಾ ಗುತ್ತದೆಯೋ,ಅಷ್ಟೇ ಮಟ್ಟದ ಹಣವನ್ನು ಬಿಡಿಎ ಪೊಲೀಸ್ ಇಲಾಖೆಯಿಂದ ಪಡೆಯಲಿದೆ.
ಬಿಡಿಎ ನಿರ್ಮಿಸಿರುವ ಅಪಾರ್ಟ್ ಮೆಂಟ್‌ಗಳನ್ನು ತನ್ನ ಸಿಬ್ಬಂದಿಗಾಗಿ ಪೊಲೀಸ್ ಇಲಾಖೆ ಖರೀದಿಸುವ ಆಲೋಚನೆ ಮಾಡಿದೆ. ಈ ಬಗ್ಗೆ ಗೃಹ ಸಚಿವರು ಹಾಗೂ ಬಿಡಿಎ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.
ರಾಕೇಶ್ ಸಿಂಗ್, ಬಿಡಿಎ ಆಯುಕ್ತ
ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.