ಸಣ್ಣ ನೀರಾವರಿ ವ್ಯಾಪ್ತಿಗೆ ಬೆಳ್ಳಂದೂರು ಕೆರೆ

Team Udayavani, Jan 24, 2018, 11:58 AM IST

sanna-niravari.jpg

ಬೆಂಗಳೂರು: ಬೆಂಕಿ ಕಾಣಿಸಿಕೊಂಡು ವಿವಾದಕ್ಕೆ ಕಾರಣವಾಗಿದ್ದ ಬೆಳ್ಳಂದೂರು ಕೆರೆಯನ್ನು ಬಿಡಿಎ ವ್ಯಾಪ್ತಿಯಿಂದ ಸಣ್ಣ ನೀರಾವರಿ ಇಲಾಖೆಯ ಕೆರೆ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ ಎಂದು ಸಣ್ಣ ನೀರಾವರಿ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ಎಲ್ಲಾ ಕೆರೆಗಳನ್ನು ಒಂದೇ ಇಲಾಖೆಯಿಂದ ಸಂರಕ್ಷಣೆ ಮಾಡುವ ಉದ್ದೇಶದಿಂದ ಬಿಡಿಎ, ಬಿಬಿಎಂಪಿ, ಅರಣ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ತರಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಬೆಳ್ಳಂದೂರು ಕೆರೆಯೂ ಸೇರಲಿದೆ.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಇಲಾಖೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ತರಲು ಕಾನೂನು ತೊಡಕಿದೆ. ಆದ್ದರಿಂದ ಅರಣ್ಯ, ಗ್ರಾಮೀಣಾಭಿವೃದ್ಧಿ ಹಾಗೂ ಬಿಡಿಎ ಸೇರಿದಂತೆ ಎಲ್ಲ ಕೆರೆಗಳಿಗೆ ಅನ್ವಯವಾಗುವ ಕಾನೂನು ರೂಪಿಸಿ ನಂತರ ಈ ಕೆರೆಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗುವುದು ಎಂದರು.

 ಸಣ್ಣ ನೀರಾವರಿ ವ್ಯಾಪ್ತಿಗೆ ಬರುವ ಕೆರೆ ಸಂಜೀವಿನಿ ಮತ್ತು ಜಲ ಸಂವರ್ಧನಾ ಸಂಘಗಳನ್ನು ಕೆರೆ ಅಭಿವೃದ್ಧಿ ಪ್ರಾಧಿಕಾರದೊಂದಿಗೆ ವಿಲೀನಗೊಳಿಸಿ 60 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 36 ಸಾವಿರ ಕೆರೆಗಳಲ್ಲಿ ಹೂಳು ತೆಗೆಯುವ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಬಹುತೇಕ ಕೆರೆಗಳಲ್ಲಿ ಶೇ. 20ರಿಂದ 30ರಷ್ಟು ಹೂಳು ತುಂಬಿ ನೀರಿನ ಕೊರತೆ ಎದುರಾಗಿರುವುದರಿಂದ ಈ ಕಾಮಗಾರಿ ನಡೆದಿದೆ ಎಂದರು.

2017ರ ಸಮೀಕ್ಷೆ ಪ್ರಕಾರ 43 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ಸ್ಥಿತಿಗೆ ಕುಸಿದಿದ್ದು, ಬೋರ್‌ವೆಲ್‌ ಕೊರೆಯಿಸಿದರೂ ನೀರು ಸಿಗುವುದು ಸಾಧ್ಯವಿಲ್ಲ. 36 ತಾಲೂಕುಗಳಲ್ಲಿ ಮಾತ್ರ ನೀರು ಸಿಗುವ ಸಾಧ್ಯತೆಗಳಿವೆ. ಬೋರ್‌ವೆಲ್‌ ನಿಷೇಧಿಸಲು ಮುಂದಾದರೆ ವಿರೋಧಿಸುತ್ತಾರೆ. ಹೀಗಾಗಿ ಜಾಗೃತಿ ಅಗತ್ಯ ಎಂದರು.

ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಆರೋಪ
ಬೆಳ್ಳಂದೂರು ಕೆರೆಯಲ್ಲಿ ಆಗ್ಗಾಗೆ ಕಾಣಿಸಿಕೊಳ್ಳುವ ಬೆಂಕಿಗೆ ಸರ್ಕಾರದ ನಿರ್ಲಕ್ಷ್ಯವೇ ನೇರ ಕಾರಣ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ವಕ್ತಾರ ಶಿವಕುಮಾರ್‌ಚೆಂಗಲರಾಯ ಆರೋಪಿಸಿದ್ದಾರೆ. ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಅವರ ಬೇಜವಾಬ್ದಾರಿ ತನವೇ ಇದಕ್ಕೆಲ್ಲಾ ಮೂಲ ಕಾರಣವಾಗಿದ್ದು, ಈ ಸಂಬಂಧ ಅವರು ಬೆಂಗಳೂರಿಗರಲ್ಲಿ ಕ್ಷಮೆಯಾಚಿಸಲಿ ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ನಗರದಲ್ಲಿ ಕೆರೆಯ ಒತ್ತುವರಿ ಅವ್ಯಾಹತವಾಗಿ ನಡೆದಿದೆ. ಕೈಗಾರಿಕೆಯಿಂದಾಗಿ ಕೆರೆಗೆ ವಿಷಕಾರಿ ರಾಸಾಯನಿಕ ಸೇರ್ಪಡೆಯಾಗುತ್ತಿದೆ. ಸರ್ಕಾರದ ಕಳಪೆ ನಿರ್ವಹಣೆಯಿಂದಾಗಿ ಬೆಂಗಳೂರು ನಗರ ಜಾಗತಿಕ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ ಎಂದು ದೂರಿದರು. ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ಶಾಪಿಂಗ್‌ ಮಾಲ್‌ ನಿರ್ಮಿಸಲಾಗಿದೆ. ಸರ್ಕಾರ ಕೂಡಲೇ ಮಾಲ್‌ ಸೇರಿದಂತೆ ಇನ್ನಿತರ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿ ಕಠಿಣ ಕ್ರಮ ಜರುಗಿಸಲಿ ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.