ತಿಂಗಳಲ್ಲಿ ಬೆಳಂದೂರು ಕೆರೆ ಜೊಂಡು ತೆರವು
Team Udayavani, Mar 2, 2018, 12:00 PM IST
ಬೆಂಗಳೂರು: ಮುಂದಿನ ಎರಡು ತಿಂಗಳಲ್ಲಿ ಬೆಳಂದೂರು ಕೆರೆಯಲ್ಲಿ ಜೊಂಡು ತೆರವುಗೊಳಿಸುವ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಗುರುವಾರ ಗೃಹ ಸಚಿವ ರಾಮಲಿಂಗಾರೆಡ್ಡಿ ಹಾಗೂ ಬಿಡಿಎ ಆಯುಕ್ತ ರಾಕೇಶ್ ಸಿಂಗ್ ಅವರೊಂದಿಗೆ ಬೆಳಂದೂರು ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಕೆರೆಯಲ್ಲಿನ ಜೊಂಡು ಹಾಗೂ ಹುಲ್ಲು ತೆರವುಗೊಳಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದರಂತೆ ಎರಡು ತಿಂಗಳಲ್ಲಿ ಕೆರೆಯ ಸ್ವತ್ಛತೆಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.
ಜೊಂಡು ತೆರವಿನ ಬಳಿಕ ಕೆರೆಗೆ ಸೇರುವ ಕಲುಷಿತ ನೀರಿನ ಪ್ರಮಾಣ ಕಡಿಮೆ ಮಾಡಲು ಕ್ರಮವಹಿಸಲಾಗುವುದು. ಅದರಂತೆ ಹಂತ ಹಂತವಾಗಿ ಕೆರೆಗೆ ಮಳೆ ನೀರು ಹಾಗೂ ತ್ಯಾಜ್ಯ ನೀರು ಸಂಸ್ಕರಿಸಿ ಕೆರೆಗೆ ಹರಿಸಲು ಕ್ರಮಕೈಗೊಳ್ಳಲಾಗುವುದು. ಕೆರೆಯಲ್ಲಿನ ನೊರೆಗೆ ಪರಿಹಾರ ಕಂಡುಕೊಳ್ಳಲಾಗಿದೆ.
ಆದರೆ, ಕಿಡಿಗೇಡಿಗಳು ಕೆರೆ ಅಂಗಳದಲ್ಲಿ ಬೆಂಕಿ ಹಚ್ಚುವ ಮೂಲಕ ಸುತ್ತಮುತ್ತಲಿನ ಪರಿಸರ ಹಾಳು ಮಾಡುತ್ತಿದ್ದಾರೆ ಎಂದು ದೂರಿದರು. ಆ ಹಿನ್ನೆಲೆಯಲ್ಲಿ ಕೆರೆಯ ನಾನಾ ಭಾಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗಿದ್ದು, ಕಾಲಮಿತಿಯೊಳಗೆ ಕೆರೆ ಸ್ವತ್ಛಗೊಳಿಸುವ ಕಾರ್ಯ ಮಾಡುವಂತೆ ಗಡುವು ನೀಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.