ಬೆಳ್ಳಂದೂರು, ವರ್ತೂರು ಕೆರೆ ಪರಿಶೀಲಿಸಿದ ಲೋಕಾಯುಕ್ತ
Team Udayavani, Jun 21, 2017, 12:36 PM IST
ಮಹದೇವಪುರ: ಬೆಳ್ಳಂದೂರು ಕೆರೆ ಸ್ವಚ್ಚಗೊಳಿಸುವಂತೆ ಎನ್ಜಿಟಿ ಆದೇಶ ನೀಡಿದ್ದರೂ, ಸರ್ಕಾರ ಸೂಕ್ತ ರೀತಿಯಲ್ಲಿ ಕಾರ್ಯಾಚರಣೆ ಕೈಗೊಂಡಿಲ್ಲ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ಮಂಗಳವಾರ ಅಧಿಕಾರಿಗಳ ಜತೆ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳನ್ನು ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಅವರು, “ಕೆರೆ ಸ್ವಚ್ಚತೆಗೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಈ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸಬೇಕು. ಆದರೆ ಇಲ್ಲಿಯ ಸ್ಥಿತಿ ಭಿನ್ನವಾಗಿದೆ. ವಸತಿ ಸಮುಚ್ಚಯಗಳು, ಕೈಗಾರಿಕೆಗಳು, ಸಣ್ಣ ಕಾರ್ಖಾನೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ಸಂಸ್ಕರಿಸದೆ ಕೆರೆ, ಕಾಲುವೆಗಳಿಗೆ ಬಿಡಲಾಗುತ್ತಿದೆ. ಹೀಗಾಗಿ ಕೆರೆ ಸಂಪೂರ್ಣ ಕಲುಷಿತಗೊಂಡಿದೆ.
ಬೆಳ್ಳಂದೂರು, ವರ್ತೂರು, ರಾಂಪುರ ಕೆರೆಗಳಲ್ಲದೆ ನಗರದ ಇತರೆ ಕೆರೆಗಳು ಕಲುಷಿತಗೊಂಡು ಅಂತರ್ಜಲ ಸೇರಿ ಕೃಷಿ ಭೂಮಿಗೆ, ಜಾನುವಾರುಗಳಿಗೆ ವಿಷವುಣಿಸುತ್ತಿವೆ. ಕೆರೆ ಸ್ವಚ್ಚತೆಗೆ ಸರ್ಕಾರ ಶಾಶ್ವತ ಕ್ರಮಗಳನ್ನು ಅನುಸರಿಸಿ ಸ್ವಚ್ಚತೆಗೆ ಮುಂದಾಗಬೇಕು. ಸಾರ್ವಜನಿಕರೂ ಸಹ ಕೆರೆಯ ಸ್ವಚ್ಚತೆಗೆ ಕೈಜೋಡಿಸಬೇಕು,’ ಎಂದು ಸೂಚಿಸಿದರು.
ಕೆರೆ ಶುದ್ಧೀಕರಿಸಲು ಬಿಡಿಎ, ಬಿಬಿಎಂಪಿ ಕೈಗೊಂಡಿರುವ ಕ್ರಮಗಳನ್ನು ಅಧಿಕಾರಗಳ ತಂಡದೊಂದಿಗೆ ತೆರಳಿ ಲೋಕಾಯುಕ್ತರು ಪರಿಶೀಲಿಸಿದರು. ಬಿಡಿಎ ಮುಖ್ಯ ಅಭಿಯಂತರ ಪಿ.ನಾಯಕ್, ಮಹದೇವಪುರ ವಲಯ ಜಂಟಿ ಆಯುಕ್ತೆ ವಾಸಂತಿ ಅಮರ್, ಪರಿಸರ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.