ಮಲ್ಯ ಆಸ್ಪತ್ರೆಯಿಂದ ವಿದ್ವತ್ ಡಿಸ್ಚಾರ್ಜ್
Team Udayavani, Mar 6, 2018, 9:00 AM IST
ಬೆಂಗಳೂರು: ಮೊಹಮ್ಮದ್ ನಲಪಾಡ್‌ನಿಂದ ಹಲ್ಲೆಗೊಳಗಾಗಿ ಮಲ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ರವಿವಾರ ತಡರಾತ್ರಿ ಆಸ್ಪತ್ರೆಯಿಂದ ಡಿಸಾcರ್ಜ್ ಆಗಿದ್ದಾರೆ.
ಕಳೆದ 17 ದಿನಗಳಿಂದ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ವತ್ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಫೆ. 28ರಂದು ಬಿಡುಗಡೆಗೆ ಸೂಚಿಸಲಾಗಿತ್ತು. ಆದರೆ, ವಿದ್ವತ್ ಕುಟುಂಬಸ್ಥರು ಗಂಭೀರ ಗಾಯವಾದ ಕಾರಣ ಇನ್ನಷ್ಟು ಚಿಕಿತ್ಸೆ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಅನಂತರ ಮಾ.3ರಂದು ಬಿಡುಗಡೆ ಮಾಡಲು ಸೂಚಿಸಲಾಗಿತ್ತು. ಆದರೆ, ವೈದ್ಯಕೀಯ ಚಿಕಿತ್ಸಾ ವೆಚ್ಚ ಭರಿಸಲು ವಿಮೆ ಪ್ರಕ್ರಿಯೆ ತಡವಾದ ಕಾರಣ ವಿಳಂಬವಾಯಿತು. ಈ ಪ್ರಕ್ರಿಯೆ ರವಿವಾರ ಪೂರ್ಣಗೊಂಡ ಹಿನ್ನೆಲೆಯಲ್ಲಿ ತಡರಾತ್ರಿ 12.45ರ ಸುಮಾರಿಗೆ ಆಸ್ಪತ್ರೆಯಿಂದ ತೆರಳಿದ್ದಾರೆ ಎಂದು ತಿಳಿಸಿವೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದ್ವತ್ ಕುಟುಂಬಸ್ಥರು, ಮನೆಯಲ್ಲಿ ಸಂಬಂಧಿಕರು, ಸ್ನೇಹಿತರು ಸೇರಿದಂತೆ ಬರುವ, ಹೋಗುವವರ ಸಂಖ್ಯೆ ಹೆಚ್ಚಿರುವ ಕಾರಣ ವಿಶ್ರಾಂತಿ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಫೆ.17ರಂದು ರಾತ್ರಿ ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ಕಾಲು ತಗುಲಿದ ವಿಚಾರಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ನಲಪಾಡ್ ಮತ್ತು ಸಹಚರರು ವಿದ್ವತ್ ಮೇಲೆ ಹಲ್ಲೆ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ವಿದ್ವತ್ ಮಲ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.