ಬೆಂಗಳೂರು: ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ, ಸುಶಾಸನ ದಿನಾಚರಣೆ
Team Udayavani, Dec 25, 2020, 6:41 PM IST
ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಡಿಸೆಂಬರ್ 25ರಂದು ಬೆಳಿಗ್ಗೆ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣೆ, ಸುಶಾಸನ ದಿನಾಚರಣೆ ಮತ್ತು ಕಿಸಾನ್ ಸಮ್ಮಾನ್ ದಿನಾಚರಣೆ ನೆರವೇರಿತು. ಈ ವೇಳೆ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್‌ಕುಮಾರ್ ಸುರಾಣಾ ಅವರು ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿ ಅವರು ರಾಷ್ಟ್ರವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದರು. ನಮ್ಮ ನೆಚ್ಚಿನ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಅವರ ಸುಶಾಸನದ ಹಾದಿಯನ್ನು ತಮ್ಮದಾಗಿಸಿ ರಾಷ್ಟ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ ಎಂದು ವಿವರಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು ಅವರು ಮಾತನಾಡಿ, ಅಜಾತಶತ್ರು ವಾಜಪೇಯಿ ಅವರನ್ನು ದೇಶ ಮರೆಯಲು ಸಾಧ್ಯವಿಲ್ಲ. ಪ್ರಗತಿಪಥದಲ್ಲಿ ದೇಶವನ್ನು ಮುನ್ನಡೆಸಿದ ಮಹಾನ್ ವ್ಯಕ್ತಿ ಅವರು ಎಂದು ತಿಳಿಸಿದರು.
ಅಲ್ಪಸಂಖ್ಯಾತರ ಅಭಿವೃದ್ಧಿ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಂ, ರಾಜ್ಯ ಎಸ್.ಸಿ. ಮೋರ್ಚಾದ ಅಧ್ಯಕ್ಷರಾದ ಚಲವಾದಿ ನಾರಾಯಣಸ್ವಾಮಿ, ಪಕ್ಷದ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಲೋಕೇಶ್ ಅಂಬೆಕಲ್ಲು ಮತ್ತು ಮಾಧ್ಯಮ ವಿಭಾಗದ ರಾಜ್ಯ ಸಂಚಾಲಕರಾದ ಕರುಣಾಕರ್ ಖಾಸಲೆ, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.