Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
ರಕ್ತದ ಮಡುವಿನಲ್ಲಿದ್ದ ಗೋವುಗಳಿಗೆ ಚಿಕಿತ್ಸೆ, ಪೊಲೀಸರ ವರದಿ ಬಂದ ಬಳಿಕ ಕ್ರಮವೆಂದ ಗೃಹ ಸಚಿವ ಪರಮೇಶ್ವರ್
Team Udayavani, Jan 12, 2025, 6:17 PM IST
ಬೆಂಗಳೂರು: ಮನುಷ್ಯರಿಗೆ ಹಾಲು ನೀಡುವ ಕಾಮಧೇನು ಗೋವಿಗೆ ಮಾನವ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದಿದೆ.
ಕರ್ಣ ಎಂಬುವವರಿಗೆ ಸೇರಿದ ಮೂರು ಹಸುಗಳ ಕೆಚ್ಚಲು ಕೊಯ್ದ ಕಿರಾತಕರು ರಕ್ತದ ಕೋಡಿಯನ್ನೇ ಹರಿಸಿ ಪರಾರಿಯಾಗಿದ್ದು, ರವಿವಾರ ಮುಂಜಾನೆ (ಜ.12) ಘಟನೆ ಬೆಳಕಿಗೆ ಬಂದಿದೆ. ಸದ್ಯ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಒಟ್ಟು 8 ಹಸುಗಳ ಸಾಕಿರುವ ಕರ್ಣ ಈ ಪೈಕಿ ಮೂರರಿಂದ ನಾಲ್ಕು ಹಸುಗಳು ಮನೆಯಿಂದ ಕೆಲವೇ ದೂರದಲ್ಲಿರುವ ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ತಡರಾತ್ರಿ ಕಿಡಿಗೇಡಿಗಳು ಕೊಯ್ದಿದ್ದಾರೆ.
ಈ ಬಗ್ಗೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದಿರುವ ಪೊಲೀಸರು, ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸಿದ್ದಾರೆ.
ಭುಗಿಲೆದ್ದ ಆಕ್ರೋಶ, ಸ್ಥಳದಲ್ಲಿ ಬಿಗುವಿನ ವಾತಾವರಣ
ಮೂಕ ಪ್ರಾಣಿಗಳ ಕೆಚ್ಚಲು ಕೊಯ್ದ ಘಟನೆ ವಿರುದ್ಧ ಸ್ಥಳೀಯರು ಆಕ್ರೋಶಗೊಂಡಿದ್ದು, ಸ್ಥಳಕ್ಕೆ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಭೇಟಿ ನೀಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ 20ಕ್ಕೂ ಹೆಚ್ಚು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ರಮೇಶ್ ದೌಡಾಯಿಸಿದ್ದಾರೆ.
ಕಿಡಿಗೇಡಿಗಳ ಬಂಧಿಸುವರೆಗೆ ಹೋರಾಟ ನಿಲ್ಲಲ್ಲ:
ಘಟನಾ ಸ್ಥಳಕ್ಕೆ ಸಂಸದ ಪಿ.ಸಿ. ಮೋಹನ್ ಭೇಟಿ ನೀಡಿ ಮಾಹಿತಿ ಪಡೆದು ಮಾತುಕತೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಇದೊಂದು ಅಮಾನವೀಯ ಕೃತ್ಯ. ಗೋವುಗಳನ್ನು ದೇವರು ಎಂದು ಪೂಜೆ ಮಾಡುತ್ತೇವೆ. ಆದರೆ, ಕಿಡಿಗೇಡಿಗಳು ಗೋವುಗಳ ಕೆಚ್ಚಲು ಕೊಯ್ದು ದುಷ್ಕೃತ್ಯ ಎಸಗಿದ್ದಾರೆ. ಕೂಡಲೇ ಕಿಡಿಗೇಡಿಗಳ ಬಂಧನವಾಗಬೇಕು. ಈ ಸರ್ಕಾರ ಬಂದ ಮೇಲೆ ಇಂತಹ ಕೃತ್ಯಗಳು ಹೆಚ್ಚು ಆಗುತ್ತಿದೆ. ಕಿಡಿಗೇಡಿಗಳ ಬಂಧನವಾಗುವವರೆಗೆ ಹೋರಾಟ ನಿಲುವುದಿಲ್ಲ ಎಂದು ಹೇಳಿದ್ದಾರೆ.
ನೋವು ತೋಡಿಕೊಂಡ ಹಸುಗಳ ಮಾಲೀಕ
ಘಟನೆ ಬಗ್ಗೆ ಹಸುಗಳ ಮಾಲೀಕ ಕರ್ಣ ಪ್ರತಿಕ್ರಿಯಿಸಿದ್ದು, ಕೂಡಲೇ ಕಿಡಿಗೇಡಿಗಳ ಬಂಧಿಸಿಬೇಕು. ಇಲ್ಲ ನಮ್ಮ ಕೈಯಲ್ಲಿ ಕೊಡಿ ನಾವು ಬುದ್ದಿ ಕಲಿಸುತ್ತೇವೆ. ಹಸುವಿನ ಕಾಲಿಗೆ ಮಚ್ಚಿನಲ್ಲಿ ಹೊಡೆದಿದ್ದಾರೆ. ಮೂರು ಹಸುವಿನ ಕೆಚ್ಚಲು ಕತ್ತರಿಸಿದ್ದಾರೆ ಎಂದು ನೋವು ತೋಡಿಕೊಂಡರು.
ವರದಿ ಬಳಿಕ ಕ್ರಮ: ಗೃಹ ಸಚಿವ
ಈ ನಡುವೆ ಘಟನೆಯ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಪೊಲೀಸರಿಂದ ವರದಿ ಕೇಳಲಾಗಿದ್ದು ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಸುವಿನ ಕೆಚ್ಚಲು ಕೊಯ್ದು ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ: ಆರ್.ಅಶೋಕ್
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Mudhol: ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ ಸೆರೆ
Kottigehara: ಸಂಸ್ಕಾರದಿಂದ ಉತ್ತಮ ಶಿಕ್ಷಣ : ಶ್ರೀ ಗುಣನಾಥ ಸ್ವಾಮೀಜಿ ಹೇಳಿಕೆ
Congress: ಇದೇ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ
MUST WATCH
ಹೊಸ ಸೇರ್ಪಡೆ
ಹಸುವಿನ ಕೆಚ್ಚಲು ಕೊಯ್ದು ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ: ಆರ್.ಅಶೋಕ್
Delhi Elections: ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ
Mukund MGM Realty: ಶೀಘ್ರದಲ್ಲೇ ಮತ್ತೆರಡು ಬ್ಯುಸಿನೆಸ್ ಸೆಂಟರ್ಗಳು ಪ್ರಾರಂಭ
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.