Bengaluru; ಟಚ್ ಮಾಡಿದವನ ಬೈಕ್ ಬೆನ್ನಟ್ಟಿ ಗುದ್ದಿದ ಕಾರು: ಸವಾರ ಮೃತ್ಯು
ನಗರದಲ್ಲಿ ಆತಂಕಕ್ಕೆ ಕಾರಣವಾಗುತ್ತಿರುವ ರೋಡ್ ರೇಜ್ ಪ್ರಕರಣಗಳು!!
Team Udayavani, Aug 22, 2024, 7:59 PM IST
ಬೆಂಗಳೂರು: ನಗರದ ವಿದ್ಯಾರಣ್ಯಪುರದ ರಸ್ತೆಯಲ್ಲಿ ಬುಧವಾರ ರಾತ್ರಿ(ಆ 21) ಕಾರಿಗೆ ಬೈಕ್ ಟಚ್ ಮಾಡಿದ ಬಳಿಕ ಆದ ವಾಗ್ವಾದ ಓರ್ವನ ಸಾವಿನಲ್ಲಿ ಅಂತ್ಯವಾಗಿದೆ. ಬೈಕ್ ಸವಾರನನ್ನು ಹಿಂಬಾಲಿಸಿದ ಕಾರು ಚಾಲಕ ಬೈಕ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾನೆ.
ಇಬ್ಬರ ನಡುವಿನ ವಾಗ್ವಾದ ವಿಕೋಪಕ್ಕೆ ತಿರುಗಿದ ನಂತರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಿಸಿಟಿವಿ ದೃಶ್ಯಾವಳಿಗಳು ಬೈಕನ್ನು ಕಾರು ಹಿಂಬಾಲಿಸುತ್ತಿರುವುದು ಕಂಡು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಕಾರಿನಲ್ಲಿದ್ದ ಚಾಲಕ ಅರವಿಂದ್ ಮತ್ತು ಕೇಶವ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕ ಡೆಲಿವರಿ ಬಾಯ್ ಮಹೇಶ್ ಎಂಬಾತನಾಗಿದ್ದಾರೆ. ಈತನೊಂದಿಗೆ ಬೈಕ್ ನಲ್ಲಿದ್ದ ಇಬ್ಬರು ಪಾರಾಗಿದ್ದಾರೆ. ಮುಖ್ಯ ರಸ್ತೆಯಿಂದ ತಿರುಗಿಸಿದ ವೇಳೆ ಬೈಕ್‌ನ ಹಿಂಬದಿ ಕೂತಿದ್ದ ಇಬ್ಬರು ಕೆಳಗೆ ಬಿದ್ದಿದ್ದಾರೆ. ಜಿಕೆವಿಕೆ ಲೇಔಟ್‌ಗೆ ನುಗ್ಗಿದ ಮಹೇಶ್ ನ ಬೈಕ್‌ಗೆ ಕಾರು ಚಾಲಕ ಡಿಕ್ಕಿ ಹೊಡೆದಿದ್ದು ಮನೆಯೊಂದರ ಕಾಂಪೌಂಡ್‌ಗೆ ಮಹೇಶ್ ತಲೆ ಬಡಿದು ಗಂಭೀರ ಗಾಯವಾಗಿದೆ. ಗಾಯಗೊಂಡಿದ್ದ ಮಹೇಶ್‌ನನ್ನ ಹೊತ್ತೊಯ್ಯಲು ಕಾರು ಚಾಲಕ ಮುಂದಾಗಿದ್ಧನಾದರೂ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಬಚಾವ್ ಆದ ಬಾಲಾಜಿ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.