ಹೊಸ ವರ್ಷಾಚರಣೆಗೆ ಕಠಿಣ ನಿಯಮ: ಸಂಜೆ 6ರಿಂದಲೇ ಎಂಜಿ ರಸ್ತೆ , ಬ್ರಿಗೇಡ್‌ ರಸ್ತೆ ಬಂದ್


Team Udayavani, Dec 31, 2021, 12:05 PM IST

ಹೊಸ ವರ್ಷಾಚರಣೆಗೆ ಕಠಿಣ ನಿಯಮ: ಸಂಜೆ 6ರಿಂದಲೇ ಎಂಜಿ ರಸ್ತೆ , ಬ್ರಿಗೇಡ್‌ ರಸ್ತೆ ಬಂದ್

ಬೆಂಗಳೂರು: ಈ ವರ್ಷವೂ ಬೆಂಗಳೂರಿನ ಹೃದಯ ಭಾಗ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮ ಇರುವುದಿಲ್ಲ. ಕಳೆದ ವರ್ಷವೂ ಕೂಡ ಕೊರೊನಾ ಹಿನ್ನೆಲೆ ಎಂ.ಜಿ ರಸ್ತೆ ಹಾಗೂ ಬ್ರಿಗೇಡ್‌ ರಸ್ತೆ ಹಾಗೂ ನಗರದ ಪ್ರಮುಖ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌ ಹಾಕಲಾಗಿತ್ತು. ಈ ವರ್ಷವೂ ಒಮಿಕ್ರಾನ್‌ ಹಿನ್ನೆಲೆ ಸಾಮೂಹಿಕವಾಗಿ ಹೊಸ ವರ್ಷಾಚರಣೆ ನಡೆಸದಂತೆ ಸರ್ಕಾರ ಆದೇಶಿಸಿದೆ.

ಸರ್ಕಾರದ ಸೂಚನೆ ಮೇರೆಗೆ ನೈಟ್‌ ಕರ್ಫ್ಯೂ ಜಾರಿಗೊಳಿಸಿದ್ದು, ರಾತ್ರಿ 10 ಗಂಟೆಯಿಂದ ಬೆಳಗ್ಗೆ ಐದು ಗಂಟೆವರೆಗೆ ಯಾವುದೇ ವ್ಯಾಪಾರ, ವಹಿವಾಟು ನಡೆಯುವಂತಿಲ್ಲ. ಈ ಮಧ್ಯೆ ಶುಕ್ರವಾರ ಸಂಜೆ ಆರು ಗಂಟೆಯಿಂದ ಜ.1ರ ಮುಂಜಾನೆ 6 ಗಂಟೆವರೆಗೆ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಹಾಗೂ ಸಮೀಪದ ರಸ್ತೆಗಳಲ್ಲಿ ನಗರದ ಸಾರ್ವಜನಿಕ ಸ್ಥಳಗಳಲ್ಲಿ ಜನ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ಕರ್ಫ್ಯೂ ಜಾರಿ ಇರಲಿದೆ. ಆದರೆ, ಡಿ.31ರ ಸಂಜೆ 6 ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಗುಂಪು ಗೂಡುವುದನ್ನು ನಿಷೇಧಿಸಲಾಗಿದೆ. ಆದರೆ, ಶುಕ್ರವಾರ ರಾತ್ರಿ 10 ಗಂಟೆವರೆಗೆ ಹೋಟೆಲ್‌, ಪಬ್‌, ಕ್ಲಬ್‌, ರೆಸ್ಟೋರೆಂಟ್‌ ಸೇರಿದಂತೆ ವಾಣಿಜ್ಯ ಚಟುವಟಿಕೆ ನಡೆ ಸಲು ಅವಕಾಶವಿದೆ. ಬಳಿಕ ರಾತ್ರಿ 10ರ ಬಳಿಕ ಕರ್ಫ್ಯೂ ಜಾರಿಯಾಗಿರುವುದರಿಂದ ಈ ಎಲ್ಲ ಚಟುವಟಿಕೆಗಳು ಬಂದ್‌ ಆಗಲಿವೆ ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಭಾರತ: 24ಗಂಟೆಯಲ್ಲಿ 16,764 ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 1,270ಕ್ಕೆ ಏರಿಕೆ

ನಗರದ ಎಲ್ಲಾ ಪ್ರಮುಖ ರಸ್ತೆಗಳಲ್ಲೂ ಪೊಲೀಸರು ಬ್ಯಾರಿಕೇಡ್‌ ಹಾಕಿ ವಾಹನಗಳ ತಪಾಸಣೆ ಮಾಡಲಿದ್ದಾರೆ ಹಾಗೂ ಹೊಯ್ಸಳ, ಚೀತಾ ವಾಹನಗಳು ಗಸ್ತು ಮಾಡಿ, ಧ್ವನಿ ವರ್ಧಕಗಳ ಮೂಲಕ ಗುಂಪುಗೂಡದಂತೆ ಎಚ್ಚರಿಕೆ ನೀಡಲಿದ್ದಾರೆ.

200 ವಾಹನಗಳ ಜಪ್ತಿ: ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಜಾರಿಗೆ ಬಂದಿ ರುವ ನೈಟ್‌ಕರ್ಫ್ಯೂ ಸಂದರ್ಭದಲ್ಲಿ ಅನಗತ್ಯ ವಾಗಿ ಓಡಾಡಿ ನಿಯಮ ಉಲ್ಲಂ ಸಿದ 200ಕ್ಕೂ ಹೆಚ್ಚು ವಾಹನಗಳನ್ನು ನಗರ ಪೊಲೀಸರು ಜಪ್ತಿ ಮಾಡಿದ್ದಾರೆ.

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.