Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು
Team Udayavani, Apr 30, 2024, 10:26 AM IST
ಬೆಂಗಳೂರು: ರಾಜಧಾನಿಯಲ್ಲಿ ದಿನೇ ದಿನೆ ಬಿಸಿಲಿನ ಹೊಡೆತ ಜೋರಾಗುತ್ತಿದ್ದು, ಜನರು ಬಿಸಿಲ ಧಗೆಯಿಂದ ಬಳಲುವಂತಾಗಿದೆ.
ಬಿಸಿಲಿನ ಝಳಕ್ಕೆ ಹೆದರಿ ಕೆಲವರು ಮನೆಯಿಂದ ಹೊರಬರುವುದಕ್ಕೆ ಹೆದರುತ್ತಿದ್ದಾರೆ. ಹೀಗಾಗಿಯೇ ಸಿಲಿಕಾನ್ ಸಿಟಿ ಬೆಂಗಳೂರು ಈಗ ಬಿಸಿಲೂರು ಆಗಿದೆ. ಈ ಮಧ್ಯೆ, ಸೋಮವಾರ ಬೆಂಗಳೂರು ಸಿಟಿಯಲ್ಲಿ 38.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಮಧ್ಯಾಹ್ನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಬೆಂಗಳೂರು ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ತಾಪಮಾನವಿತ್ತು. ಜತೆಗೆ ಹೆಬ್ಟಾಳದ ಜಿಕೆವಿಕೆಯಲ್ಲಿ 37.0 ತಾಪಮಾನ ದಾಖಲಾಗಿತ್ತು ಎಂದು ರಾಜ್ಯ ಹವಾಮಾನ ಇಲಾಖೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆದರೆ, ಸಂಜೆ ಹೊತ್ತಿಗೆ ತಾಪಮಾನ ತುಸು ಕಡಿಮೆ ಆಯಿತು. ಸಂಜೆ 5.30ರ ಹೊತ್ತಿಗೆ ಬೆಂಗಳೂರು ಸಿಟಿ ಪ್ರದೇಶದಲ್ಲಿ 37.8 ಡಿಗ್ರಿ ಸೆಲ್ಸಿಯಸ್ ತಾಪಮಾನವಿತ್ತು. ಬೆಂಗಳೂರು ಅಂತಾರಾಷ್ಟ್ರಿಯ ವಿಮಾನ ವಿಲ್ದಾಣದಲ್ಲಿ 38.0, ಎಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಉಷ್ಟಾಂಶ ದಾಖಲಾಗಿತ್ತು. ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಮುನ್ಸೂಚನೆಯಂಂತೆ ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಯಿಂದ 23 ಡಿಗ್ರಿ ಸೆಲ್ಸಿಯಸ್ ವರೆಗೆ ಇರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ಶುಭ್ರ ಆಕಾಶವಿರಲಿದೆ ಎಂದು ವಿಜ್ಞಾನಿ ಹಾಗೂ ಬೆಂಗಳೂರು ಹವಾಮಾನ ಕೇಂದ್ರದ ಮುಖ್ಯಸ್ಥ ಡಾ.ಎಂ.ರಾಜವೇಲ್ ತಿಳಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಬಿಸಿಲಿನ ಬೇಗೆಯಿಂದ ಮಧ್ಯಾಹ್ನದ ವೇಳೆ ಮನೆಯಿಂದ ಹೊರಬರಲು ಅಂಜುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಮಧ್ಯಾಹ್ನದ ವೇಳೆ ಬಸ್ ಸಂಚಾರ ಕೂಡ ಕಡಿಮೆ ಆಗಿದೆ. ವಿಪರೀತ ಬಿಸಿಲಿನಿಂದಾಗಿ ಮಾರುಕಟ್ಟೆ ಸೇರಿದಂತೆ ಮತ್ತಿತರರ ಪ್ರದೇಶದಲ್ಲಿ ಜನರು ಕಡಿಮೆಯಿರಲಿದೆ.
ಬಿಸಿಲ ಬೇಗೆಯಿಂದ ದೂರವಿರಲು ಸಲಹೆ:
ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.
ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.
ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.
ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಿ.
ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ, ಕಾರ್ಬೋ ನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಿ.
ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಬಳಸಿ
ಸನ್‌ಸ್ಟ್ರೋಕ್‌ನಿಂದ ಪೀಡಿತ ವ್ಯಕ್ತಿಯನ್ನು ಒದ್ದೆ ಬಟ್ಟೆಯಿಂದ ಒರೆಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.