Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
ಪ್ರಕರಣ ರದ್ದು ಕೋರಿ ಕೋರ್ಟ್ ಮೊರೆ ಹೋಗಿದ್ದ ಆರೋಪಿ; ತನಿಖೆ ಎದುರಿಸಲಿ: ಹೈಕೋರ್ಟ್ ನಿರ್ದೇಶನ
Team Udayavani, Nov 22, 2024, 3:48 PM IST
ಬೆಂಗಳೂರು: ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರಿಗೆ ಕೊಲೆ ಬೆದರಿ ಕೆ ಹಾಕಿದ್ದ ಆರೋಪದಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಒಂದನೇ ಆರೋಪಿ ಎಂ.ಎನ್.ಗೋಪಾಲಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಹೆಸರಘಟ್ಟ ಹೋಬಳಿಯ ಗೋಪಾಲಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ.ಎಂ.ಜಿ. ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ನ್ಯಾಯಾಲಯದ ಆದೇಶದಿಂದಾಗಿ ತನಿಖೆಗೆ ಹಾದಿ ಸುಗಮವಾಗಿದ್ದು, ಆರೋಪಿಗಳು ತನಿಖೆಯನ್ನು ಎದುರಿಸಲೇಬೇಕಾಗಿದೆ.
ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ನ್ಯಾಯಪೀಠ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖಾಧಿಕಾರಿ ಪೆನ್‌ಡ್ರೈವ್, ಪತ್ರ ಸೇರಿದಂತೆ ಸಾಕಷ್ಟು ಸಾಕ್ಷ್ಯವನ್ನು ಸಂಗ್ರಹಿಸಿದ್ದಾರೆ. ಮೇಲ್ನೋಟಕ್ಕೆ ದೂರಿನಲ್ಲಿ ಆರೋಪಿಯ ವಿರುದ್ಧ ದೂರುದಾರರು ಮಾಡಿರುವ ಆರೋಪಗಳಲ್ಲಿ ಸಾಕಷ್ಟು ಸಾಕ್ಷ್ಯಗಳಿರುವುದು ಕಂಡು ಬರುತ್ತಿದೆ ಎಂದು ಹೇಳಿದೆ.
ಅಲ್ಲದೆ, ವಿಸ್ತೃತ ತನಿಖೆಯಿಂದ ಅರ್ಜಿದಾರರ ವಿರುದ್ಧ ದೂರುದಾರ ವಿಶ್ವನಾಥ್ ಮಾಡಿರುವ ಆರೋಪಗಳ ಸತ್ಯಾಂಶ ಹೊರಬರಲು ಸಾಧ್ಯ. ಹೀಗಾಗಿ ಈ ಹಂತದಲ್ಲಿ ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಅರ್ಜಿದಾರರ ವಾದದಲ್ಲಿ ಯಾವುದೇ ಹುರುಳಿಲ್ಲವೆಂದು ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಹಿಂದೆ ನ್ಯಾಯಾಲಯ ತಾಂತ್ರಿಕ ಕಾರಣ ಗಳಿಂದಾಗಿ ಪ್ರಕರಣವನ್ನು ರದ್ದುಗೊಳಿಸಿತ್ತು. ಅದೇ ಆಧಾರದಲ್ಲಿ ಶಾಸಕರು ಮಾಡಿರುವ ಆರೋಪದಲ್ಲಿ ಹುರುಳಿಲ್ಲ, ಹಾಗಾಗಿ ಪ್ರಕರಣ ರದ್ದುಗೊಳಿಸ ಬೇಕೆಂದು ಅರ್ಜಿದಾರರು ಕೋರಿದ್ದಾರೆ. ಆದರೆ ಆ ವಾದವನ್ನು ಒಪ್ಪಲಾಗದು ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಶಾಸಕ ವಿಶ್ವನಾಥ್ ಅವರನ್ನು ಮುಗಿಸು ವುದಾಗಿ ಆರೋಪಿ ಎಂ.ಎನ್. ಗೋಪಾಲಕೃಷ್ಣ ಹಾಗೂ ಮತ್ತೋರ್ವ ವ್ಯಕ್ತಿ ಮಾತನಾಡಿದ್ದ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದನ್ನು ಆಧರಿಸಿ ವಿಶ್ವನಾಥ್ 2021ರ ಡಿ.1ರಂದು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಸಲ್ಲಿಸಿದ ದಿನವೇ ಶಾಸಕರ ಕಚೇರಿಗೆ ಒಂದು ಲಕೋಟೆ ಬಂದಿತ್ತು. ಅದರಲ್ಲಿ ಪೆನ್‌ಡ್ರೈವ್ ಹಾಗೂ ಬೆದರಿಕೆ ಪತ್ರ ಇತ್ತು. ಪೊಲೀಸರು ತನಿಖೆಗಾಗಿ ಅದನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಮಧ್ಯೆ, ಆ ದೂರನ್ನು ರದ್ದುಗೊಳಿಸುವಂತೆ ಕೋರಿ ಗೋಪಾಲಕೃಷ್ಣ ಹೈಕೋರ್ಟ್ ಮೊರೆ ಹೋಗಿದ್ದರು. ಆಗ ನ್ಯಾಯಾಲಯ 2022ರ ಸೆ.27ರಂದು ಅರ್ಜಿಯನ್ನು ಮಾನ್ಯ ಮಾಡಿ ತಾಂತ್ರಿಕ ಕಾರಣಗಳಿಂದಾಗಿ ದೂರು ಸಲ್ಲಿಸಿರುವ ಪ್ರಕ್ರಿಯೆ ಸರಿಯಾಗಿಲ್ಲ. ಹಾಗಾಗಿ ಪ್ರಕರಣವನ್ನು ರದ್ದುಗೊಳಿಸಲಾಗುತ್ತಿದೆ. ಆದರೆ ಅರ್ಜಿದಾರರು ಹೊಸದಾಗಿ ದೂರು ಸಲ್ಲಿಸಲು ಸ್ವತಂತ್ರರು ಎಂದು ಆದೇಶ ನೀಡಿತ್ತು.
ಆನಂತರ ವಿಶ್ವನಾಥ್ ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು. ಆದರೆ ಪೊಲೀಸರು ಆ ದೂರು ಸ್ವೀಕರಿಸಲು ನಿರಾಕರಿಸಿದರು. ಹಾಗಾಗಿ ಸಾಕ್ಷÂಗಳನ್ನು ಆಧರಿಸಿ ವಿಶ್ವನಾಥ್, ಗೋಪಾಲಕೃಷ್ಣ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ, ಮೇಲ್ನೋಟಕ್ಕೆ ಆರೋಪದಲ್ಲಿ ಹುರುಳಿದೆ ಎಂದು ಅಭಿಪ್ರಾಯಪಟ್ಟು ಆರೋಪಿ ವಿರುದ್ಧ ತನಿಖೆ ನಡೆಸುವಂತೆ ರಾಜಾನುಕುಂಟೆ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಹಾಗಾಗಿ ಗೋಪಾಲಕೃಷ್ಣ ತನಿಖೆಗೆ ತಡೆ ನೀಡಬೇಕು ಮತ್ತು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.