ಬಿಬಿಎಂಪಿ ಆಯುಕ್ತರಿಗೆ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ
Team Udayavani, Jan 20, 2021, 10:49 PM IST
ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕು ಭೀತಿಯ ನಡುವೆಯೂ ಅ.9 ರಿಂದ ನ.10ರವರೆಗೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರು ಯಶಸ್ವಿಯಾಗಿ ನಡೆಸಿರುವ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ 2021ನೇ ಸಾಲಿನ ಉತ್ತಮ ಚುನಾವಣಾಧಿಕಾರಿ ಪ್ರಶಸ್ತಿ ನೀಡಲು ನಿರ್ಧರಿಸಿದೆ.
ಬಿಬಿಎಂಪಿ ಆಯುಕ್ತ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಎನ್. ಮಂಜುನಾಥ ಪ್ರಸಾದ್ ಅವರು ರಾಜ್ಯಮಟ್ಟದ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಾಾರೆ. ರಾಷ್ಟ್ರೀಯ ಮತದಾರರ ದಿನಾಚರಣೆ ಜ.25ಕ್ಕೆ ಟೌನ್‌ಹಾಲ್ನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಹಾಗೂ ಉಪ ಮುಖ್ಯ ಚುನಾವಣಾಧಿಕಾರಿ ಕೆ.ಎಂ. ಪ್ರಾಾಣೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.