ಕೋವಿಡ್ ಮೂರನೇ ಅಲೆ ಬಗ್ಗೆ ಎಚ್ಚರ ವಹಿಸಿ: ಅಬಕಾರಿ ಸಚಿವ ಕೆ.ಗೋಪಾಲಯ್ಯ
Team Udayavani, Jan 2, 2022, 3:02 PM IST
ಬೆಂಗಳೂರು; ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಆರಂಭವಾಗಿದ್ದು, ಎಲ್ಲರೂ ಮುಂಜಾಗ್ರತೆ ವಹಿಸಬೇಕು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮಹಾಲಕ್ಷೀ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಂಕರ ಮಠ ವಾರ್ಡಿನ ಕುರುಬರ ಹಳ್ಳಿ ಮುಖ್ಯರಸ್ತೆಯ ಶ್ರೀ ಬಾಲಸುಬ್ರಮಣ್ಯ ದೇವಾಲಯದ ಬಳಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಒಕ್ಕೂಟ, ಸುವರ್ಣ ಕರ್ನಾಟಕ ಕಟ್ಟಡ ನಿರ್ಮಾಣ ಅಸಂಘಟಿತ ಕಾರ್ಮಿಕರ ಟ್ರೇಡ್ ಯೂನಿಯನ್, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಕೆ, ಶ್ರೀ ಮಹಾಲಕ್ಷ್ಮಿ ಎಜುಕೇಷನಲ್ ಟ್ರಸ್ಟ್ ವತಿಯಿಂದ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವ್ಯಾಕ್ಸಿನ್ ಪಡೆಯದೇ ಇರುವ ಹಿರಿಯರು ಮತ್ತು ವಯಸ್ಕರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ನಾಳೆಯಿಂದ ರಾಜ್ಯದಲ್ಲಿ 15 ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಶಾಲೆಗಳಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಲಿದ್ದು, ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಕೊಡಿಸಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ:ಪರೋಕ್ಷವಾಗಿ ಲಾಕ್ ಡೌನ್ ಬಗ್ಗೆ ಸುಳಿವು ನೀಡಿದ ಸಚಿವ ಆರ್.ಅಶೋಕ್
ಕಾರ್ಮಿಕರ ಕಾರ್ಡ್ ಮಾಡಿಸಿಕೊಂಡರೆ ಕಾರ್ಮಿಕ ಇಲಾಖೆಯಿಂದ ಕುಟುಂಬದ 20 ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಮತ್ತು ಮಕ್ಕಳ ವಿಧ್ಯಾಭ್ಯಾಸಕ್ಕೆ ಕಾರ್ಮಿಕ ಇಲಾಖೆ ಆರ್ಥಿಕ ನೆರವು ನೀಡಲಿದೆ. ಆದ್ದರಿಂದ ಪ್ರತಿಯೊಬ್ಬರೂ ಕಾರ್ಮಿಕರ ಕಾರ್ಡ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ 5 ಮಂದಿ ಕಾರ್ಮಿಕರಿಗೆ ಆರೋಗ್ಯ ಕಾರ್ಡುಗಳನ್ನು ಸಚಿವರು ವಿತರಿಸಿದರು. ಮಹಾಲಕ್ಷ್ಮಿ ಎಜುಕೇಶನಲ್ ಟ್ರಸ್ಟಿನ ಅಧ್ಯಕ್ಷ ಜಯರಾಮಯ್ಯ, ನಿಸರ್ಗ ಜಗದೀಶ್, ಬಿಜೆಪಿ ವಾರ್ಡ್ ಅಧ್ಯಕ್ಷ ಮಂಜುನಾಥ್ ಹಾಗೂ ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.