Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಅಪರಿಚಿತ ವ್ಯಕ್ತಿಗಳ ಜತೆಗೆ ಯಾವುದೇ ಮಾಹಿತಿ ಹಂಚಿಕೊಳ್ಳಬೇಡಿ: ಅನುಚೇತ್‌ ಸಲಹೆ

Team Udayavani, Nov 22, 2024, 3:34 PM IST

15-bng

ಬೆಂಗಳೂರು: ಸಂಚಾರ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಸಂಚಾರ ನಿಯಮ ಉಲ್ಲಂಘನೆಯ ದಂಡ ಪಾವತಿಗೆ ಬೇಡಿಕೆ ಇಡುವ ಅಪರಿಚಿತ ವ್ಯಕ್ತಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಎಂ. ಎನ್‌.ಅನುಚೇತ್‌ ಮನವಿ ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, ಇತ್ತೀಚೆಗೆ ಸೈಬರ್‌ ವಂಚಕರು ಸಂಚಾರ ಪೊಲೀಸರ ಸೋಗಿನಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ಸಂಚಾರ ನಿಯಮ ಉಲ್ಲಂಘನೆಯ ದಂಡದ ಮೊತ್ತ ಪಾವತಿಸುವಂತೆ ಬೇಡಿಕೆ ಇಟ್ಟು ವಂಚನೆ ಮಾಡುತ್ತಿದ್ದಾರೆ. ಈ ಕುರಿತು ಹಲವಾರು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು.

ಸಂಚಾರಿ ಪೊಲೀಸರೆಂದು ಸಾರ್ವಜನಿಕರಿಗೆ ಕರೆ ಮಾಡುತ್ತಿರುವ ವಂಚಕರು, ದಂಡದ ನಕಲಿ ಲಿಂಕ್‌ ಕಳುಹಿಸಿ ಪಾವತಿಗೆ ಒತ್ತಾಯಿಸುವುದು, ವಿಮೆ ನೀಡುವುದಾಗಿ ವಂಚನೆ, ಅಲ್ಲದೆ, ನಿಮ್ಮ ವಾಹನ ಹಿಟ್‌ ಆ್ಯಂಡ್‌ ರನ್‌ ಆಗಿರುವ ಬಗ್ಗೆ ಬೆದರಿಸುತ್ತಾರೆ. ಈ ಮೂಲಕ ವೈಯಕ್ತಿಕ ಮಾಹಿತಿ ದೋಚಲು ಯತ್ನಿಸಿ, ಮೊಬೈಲ್‌ನಲ್ಲಿ 1 ಅಥವಾ 2 ಸಂಖ್ಯೆಯನ್ನು ಒತ್ತಲು ಹೇಳಿ ವಂಚನೆ ಮಾಡುತ್ತಿದ್ದಾರೆ. ಈ ರೀತಿಯ ಕರೆಗಳನ್ನು ‌ ಪೊಲೀಸರು ಮಾಡುವುದಿಲ್ಲ ಎಂದರು.

ಸಾರ್ವಜನಿಕರಿಗೆ ಸಲಹೆ, ಸೂಚನೆಗಳು

 ಅನುಮಾನಾಸ್ಪದ ಲಿಂಕ್‌ಗಳ ಮೇಲೆ ಕ್ಲಿಕ್‌ ಮಾಡಬೇಡಿ ಅಥವಾ ಲಗತ್ತುಗಳನ್ನು ಡೌನ್‌ ಲೋಡ್‌ ಮಾಡಬೇಡಿ.

 ವೈಯಕ್ತಿಕ ಮಾಹಿತಿ ಕೊಡಬೇಡಿ ಅಥವಾ ಹಣ ಪಾವತಿ ಮಾಡದಿರಿ.

 ಸಂಚಾರಿ ಪೊಲೀಸ್‌ ಇಲಾಖೆಯನ್ನು ನೇರವಾಗಿ ಸಂಪರ್ಕಿಸುವ ಮೂಲಕ ಕರೆಗಳು ಅಥವಾ ಸಂದೇಶಗಳ ವಿಶ್ವಾಸಾರ್ಹತೆಯನ್ನು ದೃಢಪಡಿಸಿಕೊಳ್ಳಿ.

 ಸಂಚಾರಿ ಪೊಲೀಸ್‌ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಅಥವಾ ಸಹಾಯವಾಣಿ ಸಂಖ್ಯೆಗೆ (080-22868550 /22868444) ದೂರು ದಾಖಲಿಸಿ.

 ಮಾಹಿತಿ ಒದಗಿಸುವ ಮೊದಲು ಅಧಿಕಾ ರಿಗಳ ಗುರುತುಗಳನ್ನು ಪರಿಶೀಲಿಸಿ. ದಂಡ ಅಥವಾ ಸೇವೆಗಳಿಗಾಗಿ, ದಂಡ ಪಾವತಿಗಾಗಿ ಅಧಿಕೃತ ವೆಬ್‌ಸೈಟ್‌ಗಳನ್ನು ಬಳಸಿ.

 ಸಾಫ್ಟ್ವೇರ್‌ ಮತ್ತು ಆಪರೇಟಿಂಗ್‌ ಸಿಸ್ಟಂಗಳನ್ನು ನವೀಕೃತವಾಗಿರಿಸಿಕೊಳ್ಳಿ.

 ಅನುಮಾನಾಸ್ಪದ ಚಟುವಟಿಕೆಗಳನ್ನು ಪೊಲೀಸರಿಗೆ ವರದಿ ಮಾಡುವ ಮೂಲಕ ಸುರಕ್ಷಿತ ಹಾಗೂ ಜಾಗರೂಕರಾಗಿರಿ.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.