ಹಿಡಿ ಮಣ್ಣನ್ನೂ ಮುಟ್ಟಲು ಬಿಡೆವು ಮಹಾರಾಷ್ಟ್ರಕ್ಕೆ ಎಚ್ಚರಿಕೆ
Team Udayavani, Jan 1, 2020, 3:06 AM IST
ಬೆಂಗಳೂರು: ಬೆಳಗಾವಿ ಗಡಿಯ ಹಿಡಿ ಮಣ್ಣನ್ನೂ ಮುಟ್ಟಲು ಬಿಡುವುದಿಲ್ಲ. ಇದಕ್ಕಾಗಿ ನಾವು ಪ್ರಾಣತ್ಯಾಗಕ್ಕೂ ಸಿದ್ಧ ಎಂದು ಕರ್ನಾಟಕ ಗಡಿ ಹೋರಾಟ ಸಮಿತಿಯು ಮಹಾರಾಷ್ಟ್ರ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದೆ.
ಬೆಳಗಾವಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ನಡೆಯನ್ನು ಖಂಡಿಸಿರುವ ಸಮಿತಿಯು ಉದ್ಧವ್ ಠಾಕ್ರೆ ನೀಡಿ ಹೇಳಿಕೆಗೆ ವಿರೋಧ ವ್ಯಕ್ತಡಿಸಿದೆ. ಶಿವಸೇನೆಯು ರಾಜಕೀಯಕ್ಕಾಗಿ ಕರ್ನಾಟಕ ಗಡಿ ವಿಚಾರವನ್ನು ಕೆಣಕುತ್ತಿದೆ. ಸದ್ಯ ಮಹಾರಾಷ್ಟ್ರದ ಆರು ಜಿಲ್ಲೆಗಳಷ್ಟು ಪ್ರದೇಶ ಕನ್ನಡಿಗರದ್ದೆ ಆಗಿದ್ದು, ಮರೆತ ಉದ್ಧವ್ ಠಾಕ್ರೆ ಅವಿವೇಕಿ ಹೇಳಿಕೆ ನೀಡಿರುವುದು ಸಮಂಜಸವಲ್ಲ.
ಇನ್ನು ಕರ್ನಾಟಕ ಗಡಿ ಹೋರಾಟ ಸಮಿತಿಯು ಹಿಂದಿನಷ್ಟೇ ತ್ಯಾಗ, ಬಲಿದಾನಕ್ಕೆ ಸಿದ್ಧವಿದ್ದು, ಮಹಾರಾಷ್ಟ್ರ ಆಕ್ರಮಿತ ಕನ್ನಡ ಭಾಷಾ ಪ್ರದೇಶವಾಗಿರುವ ಸೊಲ್ಲಾಪುರ, ಕೊಲ್ಲಾಪುರ, ಪಂಡರಾಪುರ, ಘಡಹಿಂಡ್ಲಜ, ಚಂದಘಟ, ಈಚಲಕರಂಜಿ ಪ್ರದೇಶವನ್ನು ಕಾನೂನಾತ್ಮಕವಾಗಿ, ಹೋರಾಟಾತ್ಮಕವಾಗಿ ಪಡೆಯುತ್ತವೆ. ಮಹಾರಾಷ್ಟ್ರ ಸರ್ಕಾರವಾಗಲಿ, ಅಲ್ಲಿನ ಸಂಘ ಸಂಸ್ಥೆಗಳಾಗಲಿ ಅನಗತ್ಯ ಕರ್ನಾಟಕದ ಪ್ರದೇಶಗಳಲ್ಲಿ ಕಿಚ್ಚು ಹಚ್ಚುವ ಕೆಲಸವನ್ನು ಮಾಡಂತೆ ಎಚ್ಚರಿಸಿ ಪತ್ರಿಕಾ ಪ್ರಕಟಣೆ ನೀಡಿದೆ.
ಮಹಾ ಸಿಎಂ ನಿಲುವಿಗೆ ಚಿ.ಮೂ. ಖಂಡನೆ
ಬೆಂಗಳೂರು: ಬೆಳಗಾವಿ ಗಡಿಪ್ರದೇಶದ ವಿಚಾರದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿಲುವನ್ನು ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಅವರು ಖಂಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಳಗಾವಿ ಸುತ್ತಮುತ್ತಲಿನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿರುವ ಮಹಾರಾಷ್ಟ್ರ ಸಿಎಂ ಉದ್ಧವ್‌ಠಾಕ್ರೆ ಅವರ ಮಾತು ಉದ್ಧಟತನದಿಂದ ಕೂಡಿದೆ ಎಂದು ದೂರಿದ್ದಾರೆ.
ರಾಜಕೀಯ ಪೂರಿತ: ಬೆಳಗಾವಿ, ನಿಪ್ಪಾಣಿ ಪ್ರದೇಶಗಳು ಕರ್ನಾಟಕಕ್ಕೆ ಈಗಾಗಲೇ ಸೇರಿವೆ. ಈ ಸಂಬಂಧ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟಿನ ಮೆಟ್ಟಿಲೇರಿದ್ದು, ಆ ಹಿನ್ನೆಲೆಯಲ್ಲಿ ಈ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಬೆಳಗಾವಿ ಪ್ರದೇಶದ ಕುರಿತ ಉದ್ಧವ್ ಠಾಕ್ರೆ ಅವರ ಹೇಳಿಕೆ ರಾಜಕೀಯ ಪೂರಿತವಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.