ಗೆದ್ದು ಬೀಗದಿರಿ, 2018ರಲ್ಲಿ ಗೆಲುವು ನಮ್ಮದೇ: ಬಿಎಸ್‌ವೈ

Team Udayavani, Apr 18, 2017, 3:45 AM IST

BSY-18.jpg

ಗುಂಡ್ಲುಪೇಟೆ: ಕಾಂಗ್ರೆಸ್‌ ಸರ್ಕಾರ ಅಧಿಕಾರವನ್ನು ಸಂಪೂರ್ಣವಾಗಿ ದುರುಪಯೋಗಪಡಿಸಿಕೊಂಡು ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಬೀಗುತ್ತಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪತನಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ
ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಪಟ್ಟಣದ ಸಿಎಂಎಸ್‌ ಕಲಾಮಂದಿರದ ಆವರಣದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಮತದಾರರಿಗೆ ಮತ್ತು ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದರು.

ಚುನಾವಣೆಯ ಎರಡು ದಿನ ಮುಂಚಿತವಾಗಿ ಆಡಳಿತ ಯಂತ್ರವನ್ನು ಸಂಪೂರ್ಣ ದುರುಪಯೋಗಪಡಿಸಿಕೊಂಡ ಕಾಂಗ್ರೆಸ್‌ ಪಕ್ಷ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪ ಚುನಾವಣೆಯಲ್ಲಿ ಭಾರೀ ಪ್ರಮಾಣದಲ್ಲಿ ಹಣ ವೆಚ್ಚ ಮಾಡಿದೆ. ಕಡೆಯ ಎರಡು ದಿನಗಳಲ್ಲಿ ರಾಜ್ಯ ಸರ್ಕಾರ ಅಧಿಕಾರಿಗಳು
ಮತ್ತು ಮಂತ್ರಿಗಳನ್ನು ಬಳಸಿಕೊಂಡು ಹಣ ಚೆಲ್ಲಿ ಎರಡೂ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದೆ ಎಂದು ದೂರಿದರು.

ಇಡೀ ರಾಜ್ಯದ ಜನತೆ ಭೀಕರ ಬರದಿಂದ ತತ್ತರಿಸುತ್ತಿದ್ದರೆ, ರಾಜ್ಯ ಸರ್ಕಾರವು ಉಪಚುನಾವಣೆಯನ್ನು ಹಣ, ಅಧಿಕಾರದ ಬಲದಿಂದ ಮಂತ್ರಿಗಳನ್ನು ಬಳಸಿಕೊಂಡು ಗೆದ್ದರು. ಪ್ರಜಾಪ್ರಭುತ್ವದ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಉಪಚುನಾವಣೆ ಗೆಲ್ಲಲು ನಾಚಿಕೆಯಿಲ್ಲದೆ ಸರ್ಕಾರಿ ಅಧಿಕಾರಿಗಳನ್ನು ಬಳಸಿಕೊಂಡರು. ಅನೇಕ ಕಡೆ ಹಣ ಹಂಚಲು ಹೋಗಿ ಹಲವರು ಸಿಕ್ಕಿ ಬಿದ್ದರು. ಸಾರಿಗೆ ಅಧಿಕಾರಿ ಹಣ ಹಂಚಲು ಹೋಗಿ 20 ಲಕ್ಷ ರೂ. ಸಮೇತ ಸಿಕ್ಕಿಬಿದ್ದರು. ಆ ಅಧಿಕಾರಿಯ ವಿರುದಟಛಿ ಏನು ಕ್ರಮಕೈಗೊಂಡಿರಿ? ಸಸ್ಪೆಂಡ್‌ ಮಾಡಿದ್ದೀರಾ? ಜನತೆ ಮುಂದೆ ಕ್ಷಮೆ ಕೇಳಿದ್ದೀರಾ ಎಂದು ಪ್ರಶ್ನಿಸಿದರು.

ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿದ್ದ ಸಿದ್ದು: ಅಧಿಕಾರದ ಮದದಿಂದ ಹಣಬಲ, ತೋಳ್ಬಳ ಬಳಕೆ ಮಾಡಿ ಸಮಾಜದ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿ ಎರಡು ಉಪಚುನಾವಣೆಯನ್ನು ಗೆದ್ದಿದ್ದೇವೆ ಎಂದು ಬೀಗುತ್ತಿದ್ದಾರೆ. ಆದರೆ ಉತ್ತರ ಪ್ರದೇಶದಲ್ಲಿ ಶೇ.43 ಮತ ಪಡೆದು ಬಿಜೆಪಿ ಪಕ್ಷವು 325 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ, ಗುಂಡ್ಲುಪೇಟೆಯಲ್ಲಿ ಸಿ.ಎಸ್‌.ನಿರಂಜನಕುಮಾರ್‌ ಶೇ.45.22 ಮತ ಪಡೆದು 80 ಸಾವಿರ ಮತ ಪಡೆದಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

Voyager 1 encountered a problem in interstellar space 25 billion km away

25 ಬಿಲಿಯನ್ ಕಿ.ಮೀ ದೂರದ ಅಂತರತಾರಾ ಬಾಹ್ಯಾಕಾಶದಲ್ಲಿ ಸಮಸ್ಯೆಗೆ ಸಿಲುಕಿದ ವೊಯೇಜರ್ 1

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

9–karnataka-50

Kannada Sambrama: ಸುವರ್ಣ ಮಹೋತ್ಸವ ವಿಶೇಷ; 50 ವರ್ಷದ ಹರ್ಷಕ್ಕೆ 50 ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

6-shivaraja

Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

Udupi District Rajyotsava Award for Udupi District Working Journalists Association

Udupi: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Voyager 1 encountered a problem in interstellar space 25 billion km away

25 ಬಿಲಿಯನ್ ಕಿ.ಮೀ ದೂರದ ಅಂತರತಾರಾ ಬಾಹ್ಯಾಕಾಶದಲ್ಲಿ ಸಮಸ್ಯೆಗೆ ಸಿಲುಕಿದ ವೊಯೇಜರ್ 1

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

11-bng

Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.