Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ


Team Udayavani, Dec 18, 2024, 10:53 AM IST

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

ಬೆಂಗಳೂರು: ಹೊಸ ವರ್ಷದ ಸಂದರ್ಭದಲ್ಲಿ ಮಾರಾಟಕ್ಕೆ ಸಂಗ್ರಹಿಸಿಟ್ಟಿದ್ದ 26.21 ಕೋಟಿ ರೂ. ಮೌಲ್ಯದ 202 ಕೇಜಿ ಎಂಡಿಎಂಎ ಕ್ರಿಸ್ಟಲ್‌ ಸೇರಿ ಮಾದಕ ವಸ್ತುಗಳನ್ನು ಸಿಸಿಬಿ ಹಾಗೂ ನಗರದ ವಿವಿಧ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರು ಬಿಹಾರ, ಆಂಧ್ರ, ಒಡಿಶಾ ದಿಂದ ಡ್ರಗ್ಸ್‌ ತಂದು ಟೆಕ್ಕಿಗೆ , ವಿದ್ಯಾರ್ಥಿಗಳು, ಇತರರಿಗೆ ಮಾರಾಟ ಮಾಡುತ್ತಿದ್ದರು. ಈ ಕುರಿತು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಕೆ.ಆರ್‌.ಪುರದಲ್ಲಿ ದಿನಸಿ ಅಂಗಡಿ ಇಟ್ಟುಕೊಂಡು ಪೊಟ್ಟಣಗಳಲ್ಲಿ ಮಾದಕ ವಸ್ತು ಎಂಡಿಎಂಎ ಕ್ರಿಸ್ಟಲ್‌ಗ‌ಳ ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆ ಯನ್ನು ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ನೈಜಿರಿಯಾದ ರೋಸೆಲೈಮ್‌ (40) ಬಂಧಿತ ವಿದೇಶಿ ಮಹಿಳೆ ಎಂದು ಹೇಳಿದರು.

ಆರೋಪಿಯಿಂದ 25 ಕೋಟಿ ರೂ. ಮೌಲ್ಯದ 12 ಕೆ.ಜಿ. ತೂಕದ ಬಿಳಿ ಹಾಗೂ ಹಳದಿ ಬಣ್ಣದ ಎಂಡಿಎಂಎ ಕ್ರಿಸ್ಟಲ್‌, ಒಂದು ಮೊಬೈಲ್‌, 70 ಸಿಮ್‌ ಕಾರ್ಡ್‌ ಜಪ್ತಿ ಮಾಡಿಕೊಳ್ಳಲಾಗಿದೆ. ಈಕೆಗೆ ಮುಂಬೈನಿಂದ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜಿರಿಯಾ ಮೂಲದ ಜ್ಯೂಲಿಯೆಟ್‌ ಎಂಬಾಕೆಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು. 5 ವರ್ಷಗಳ ಹಿಂದೆ ವ್ಯವಹಾರಿಕ ವೀಸಾ ಪಡೆದು ಬೆಂಗಳೂರಿಗೆ ಬಂದಿರುವ ಆರೋಪಿತೆ, ವೀಸಾ ಅವಧಿ ಮುಗಿದರೂ ಅಕ್ರಮವಾಗಿ ಇಲ್ಲಿಯೇ ವಾಸವಾಗಿದ್ದಾಳೆ. ಸ್ಥಳೀಯವಾಗಿ ವಿದೇಶಿ ಪ್ರಜೆಗಳಿಗೆ ಬೇಕಾಗುವ ಆಹಾರ ವಸ್ತುಗಳ ಮಾರಾಟ ಅಂಗಡಿ ಇಟ್ಟುಕೊಂಡಿದ್ದಾಳೆ. ಜತೆಗೆ ಜ್ಯೂಲಿಯೆಟ್‌ ಮುಂಬೈನಿಂದ ಸ್ಯಾಕ್ಸ್‌, ಸೊಪ್ಪು, ಪೇಸ್ಟ್‌ ಪೊಟ್ಟಣ ಹಾಗೂ ಇತರೆ ಆಹಾರ ಪೊಟ್ಟಣಗಳಲ್ಲಿ ಕಳುಹಿಸುವ ಡ್ರಗ್ಸ್‌ ಎಂಡಿಎಂಎ ಕ್ರಿಸ್ಟಲ್‌ಗ‌ಳನ್ನು ಮಾರಾಟ ಮಾಡುತ್ತಿದ್ದಳು. ಈ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ವಿದೇಶಿ ಪ್ರಜೆಗಳು, ಪರಿಚಿತ ಗಿರಾಕಿಗಳು, ಕಾಲೇಜು ವಿದ್ಯಾರ್ಥಿಗಳು, ಸಾಫ್ಟ್‌ ವೇರ್ ಎಂಜಿನಿಯರ್‌ಗಳಿಗೆ ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದರು. ‌

70 ಸಿಮ್‌ ಕಾರ್ಡ್‌ಗಳ ಬಳಕೆ: ಆರೋಪಿ ಬಳಿ ಪತ್ತೆಯಾಗಿರುವ 70 ಏರ್‌ಟೇಲ್‌ ಸಿಮ್‌ ಕಾರ್ಡ್‌ಗಳು ಬಗ್ಗೆ ತನಿಖೆ ನಡೆಯುತ್ತಿದೆ. ಯಾರ ಹೆಸರಿನಲ್ಲಿ ಇಷ್ಟೊಂದು ಸಿಮ್‌ ಕಾರ್ಡ್‌ ಗಳನ್ನು ಪಡೆಯಲಾಗಿದೆ ಎಂಬ ಬಗ್ಗೆ ಏರ್‌ ಟೆಲ್‌ ಕಂಪನಿಗೆ ಪತ್ರದ ಮೂಲಕ ಕೋರಲಾಗುತ್ತದೆ. ಬಂಧಿತೆ ಹಾಗೂ ತಲೆಮರೆಸಿಕೊಂಡಿರುವ ಮಹಿಳೆ ವಿರುದ್ಧ ಕೆ. ಆರ್‌.ಪುರ ಠಾಣೆಯಲ್ಲಿ ಎನ್‌ಡಿಪಿಎಸ್‌ ಹಾಗೂ ವಿದೇಶಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಆಯುಕ್ತರು ತಿಳಿಸಿದರು.

ವಿಶಾಖಪಟ್ಟಣದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ: 4 ಮಂದಿ ಸೆರೆ:

ಬೆಂಗಳೂರು: ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ತಂದು ನಗರದಲ್ಲಿ ಮಾರಾಟಕ್ಕೆ ಮುಂದಾಗಿದ್ದ ನಾಲ್ವರು ಆರೋಪಿಗಳನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವೀರೇಶ್‌ ನಗರ ನಿವಾಸಿ ಶ್ರೀಕಾಂತ್‌(24), ಆರ್‌ .ಟಿ.ನಗರ ನಿವಾಸಿ ಮುನಿರಾಜ್‌(27), ಚಾಮುಂಡೇಶ್ವರಿ ನಗರದ ಚಂದ್ರಕಾಂತ್‌ (24) ಹಾಗೂ ಆನೇಕಲ್‌ ತಾಲೂಕಿನ ಬಾಲಕೃಷ್ಣ(35) ಬಂಧಿತರು.

ಆರೋಪಿಗಳ ಪೈಕಿ ಬಾಲಕೃಷ್ಣ ಈಗಾಗಲೇ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾನೆ. ಈತನ ಸೂಚನೆ ಮೇರೆಗೆ ಇತರೆ ಆರೋಪಿಗಳು ಆಂಧ್ರ ಪ್ರದೇಶದಿಂದ ಬರುತ್ತಿದ್ದ ಮಾದಕ ವಸ್ತುಗಳನ್ನು ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 30.68 ಲಕ್ಷ ರೂ. ಮೌಲ್ಯದ 76 ಕೆ.ಜಿ. ಗಾಂಜಾ, 3 ಮೊಬೈಲ್‌, 1 ಬುಲೆರೋ ವಶಕ್ಕೆ ಪಡೆದುಕೊಳ್ಳಲಾಗಿದೆ. ಬನ್ನೇರುಘಟ್ಟದಿಂದ ಹೊಸೂರು ಕಡೆಗೆ ಹೋಗುವ ಕ್ರಿಶ್ಚಿಯನ್‌ ಸ್ಮಶಾನದ ಬಳಿ ಆರೋಪಿಗಳು ಡ್ರಗ್ಸ್‌ ಮಾರಾಟ ಮಾಡುವಾಗ ಸಿಕ್ಕಿಬಿದ್ದಿದ್ದಾರೆ ಎಂದು ವಿವರಿಸಿದರು.

ಕಾಲೇಜು ಬಳಿ ಗಾಂಜಾ ಮಾರುತ್ತಿದ್ದ 4 ಮಂದಿ ಬಂಧಿಸಿದ ಪೊಲೀಸರು:

ಬೆಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ತಂದು ನಗರದಲ್ಲಿ ಮಾರಾಟಕ್ಕೆ ಮುಂದಾಗಿದ್ದ ನಾಲ್ವರು ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.

ಆಜಾದ್‌ನಗರ ನಿವಾಸಿಗಳಾದ ಮುಬಾರಕ್‌, ಚಾಂದ್‌, ಮೊಹಮ್ಮದ್‌ ಅಲಿ ಮತ್ತು ಕಬೀರ್‌ ಬಂಧಿತರು.

ಆರೋಪಿಗಳಿಂದ 74.53 ಲಕ್ಷ ರೂ. ಮೌಲ್ಯದ 93 ಕೆ.ಜಿ. ಗಾಂಜಾ, 1 ಟ್ರಕ್‌, 1 ಕಾರು ಮತ್ತು ನಾಲ್ಕು ಮೊಬೈಲ್‌ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ಠಾಣಾ ವ್ಯಾಪ್ತಿಯ ಕಾಲೇಜೊಂದರ ಬಳಿ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದರು. ಬಾತ್ಮೀದಾರರ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದರು.

ಇಬ್ಬರು ಡ್ರಗ್ಸ್‌ ಪೆಡ್ಲರ್‌ಗಳ ಬಂಧನ:

ಬೆಂಗಳೂರು: ಬಿಹಾರ ಮತ್ತು ಒಡಿಶಾದಿಂದ ಮಾದಕ ವಸ್ತು ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಸನಾರುಲ್ಲಾ(36) ಮತ್ತು ಹಿಲೀಮ್‌ ಮಂಡಲ್‌(33) ಬಂಧಿತರು. ಆರೋಪಿಗಳಿಂದ 1.50 ಲಕ್ಷ ರೂ. ಮೌಲ್ಯದ 5 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಬಿಹಾರ ಮತ್ತು ಒಡಿಶಾದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದರು.

ಮನೆಯಲ್ಲಿ ಗಾಂಜಾ ಸಂಗ್ರಹ: 3 ಬಂಧನ

ಬೆಂಗಳೂರು: ಗಾಂಜಾ ಮಾರಾಟ ಮಾಡು ತ್ತಿದ್ದ ಆರೋಪದ ಮೇರೆಗೆ ಜೋನ್ಸ್‌, ಸ್ಟಾಲಿನ್‌, ಮರಿಯಾ ಸೆಲ್ವಾ ಎಂಬುವರನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 15 ಲಕ್ಷ ರೂ. ಮೌಲ್ಯದ 15 ಕೆ.ಜಿ ಗಾಂಜಾ ಹಾಗೂ ಮೂರು ಮೊಬೈಲ್‌ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು, ಕನಕದಾಸ ಲೇಔಟ್‌ ಆರ್‌.ಎಸ್‌.ಪಾಳ್ಯದ ಮನೆಯೊಂದರಲ್ಲಿ ಆರೋಪಿಗಳು ಗಾಂಜಾ ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದರು.

Bengaluru: ಬಸ್‌ನಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಮಹಿಳೆ ಬಂಧನ

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣ, ನಗದು ಕಳವು ಮಾಡುತ್ತಿದ್ದ ಮಹಿಳೆಯನ್ನು ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಜಿಲ್ಲೆ ಕುಪ್ಪಂ ಮೂಲದ ಜ್ಯೋತಿ(30) ಬಂಧಿತೆ. ಆರೋಪಿಯಿಂದ 50 ಸಾವಿರ ರೂ. ನಗದು ಸೇರಿ 11.55 ಲಕ್ಷ ರೂ. ಮೌಲ್ಯದ 153 ಗ್ರಾಂ ಚಿನ್ನಾಭರಣ, 21 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆಯ ಲಾಗಿದೆ. ಸೊಣ್ಣೇನಹಳ್ಳಿಯ ನಿವಾಸಿಯೊಬ್ಬರು ತಮ್ಮ ಊರಾದ ಕೃಷ್ಣಗಿರಿಗೆ ಹೋಗಿ ವಾಪಸ್‌ ನಗರಕ್ಕೆ ಬಸ್‌ನಲ್ಲಿ ಬರುತ್ತಿದ್ದರು. ಹೆಬ್ಬಗೋಡಿಯ ನಾರಾಯಣ ಆಸ್ಪತ್ರೆ ಬಸ್‌ ನಿಲ್ದಾಣದ ಬಳಿ ಇಬ್ಬರು ಮಹಿಳೆಯರುಪರ್ಸ್‌ ಕದ್ದು ಮುಂದಿನ ನಿಲ್ದಾಣದಲ್ಲಿ ಇಳಿದು ಪರಾರಿಯಾಗಿದ್ದರು.

ಟಾಪ್ ನ್ಯೂಸ್

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

1-e4qeewqewq

Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.