ಕಾಂಪೌಂಡ್ಗೆ ಬೈಕ್ ಡಿಕ್ಕಿ: ನಿರ್ಮಾಪಕ ಸಾವು
Team Udayavani, Jul 15, 2019, 3:04 AM IST
ಬೆಂಗಳೂರು: ಅಪಾರ್ಟ್ಮೆಂಟ್ ಕಾಂಪೌಂಡ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಕನ್ನಡ ಸಿನಿಮಾ ನಿರ್ಮಾಪಕ ಹಾಗೂ ವಿತರಕ ಅಜಯ್ ಚಂದಾನಿ (48) ಮೃತಪಟ್ಟಿದ್ದಾರೆ.
ಭಾನುವಾರ ಸಂಜೆ 6.20ರ ಸುಮಾರಿಗೆ ಕಲ್ಪನಾ ಜಂಕ್ಷನ್ನಿಂದ ಕನ್ನಿಂಗ್ಹ್ಯಾಮ್ ರಸ್ತೆ ಕಡೆ ವೇಗವಾಗಿ ಹೋಗುವಾಗ ನಿಯಂತ್ರಣ ತಪ್ಪಿ ಹುಡ್ ಅಪಾರ್ಟ್ಮೆಂಟ್ ಕಾಂಪೌಂಡ್ಗೆ ಡಿಕ್ಕಿ ಹೊಡೆದಿದ್ದು, ಅಜಯ್ ಅವರು ಕೆಳಗಡೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ಅವರನ್ನು ಸ್ಥಳೀಯರು ಜೈನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ವೇಗವಾಗಿ ಹೋಗುವಾಗ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿರುವ ಸಾಧ್ಯತೆಯಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಉತ್ತರ ಭಾರತ ಮೂಲದ ಅಜಯ್ ಚಂದಾನಿ ಅವರು ಕ್ರಸೆಂಟ್ ರಸ್ತೆಯಲ್ಲಿ ಕುಟುಂಬದ ಜತೆ ವಾಸವಿದ್ದರು.
ಪಾಲ್ ಎಂಟರ್ಪ್ರೈಸಸ್ ಹಾಗೂ ಅಜಯ್ ಫಿಲಂಸ್ನ ಮಾಲೀಕರಾಗಿದ್ದ ಅಜಯ್ ಎಸ್. ಚಂದಾನಿ ಅವರು ಹಿರಿಯ ನಿರ್ಮಾಪಕ ಪಾಲ್ ಚಂದಾನಿ ಅವರ ಪುತ್ರರಾಗಿದ್ದು, ಕನ್ನಡ ಸಿನಿಮಾಗಳ ನಿರ್ಮಾಣದ ಜತೆಗೆ ಹಿಂದಿ ಸಿನಿಮಾಗಳ ವಿತರಣೆಯನ್ನೂ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.