Bengaluru: ಅಪಘಾತದಲ್ಲಿ ಬೈಕ್ ಸವಾರ ಸಾವು; ಬಸ್ ಚಾಲಕನಿಗೆ 15 ತಿಂಗಳು ಜೈಲು
Team Udayavani, Nov 19, 2024, 10:30 AM IST
ಬೆಂಗಳೂರು: ಕಳೆದ 2021ರಲ್ಲಿ ದ್ವಿಚಕ್ರವಾಹನಕ್ಕೆ ಮಿನಿಬಸ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಪ್ರಕರಣದಲ್ಲಿ ಬಸ್ ಚಾಲಕನಿಗೆ 1 ವರ್ಷ 3 ತಿಂಗಳು ಜೈಲು ಶಿಕ್ಷೆ ವಿಧಿಸಿ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.
ಮಿನಿಬಸ್ ಚಾಲಕ ಸುನೀಲ್ ಕುಮಾರ್ (37) ಅಪರಾಧಿ. ದ್ವಿಚಕ್ರವಾಹನ ಸವಾರ ಕಲ್ಯಾಣ್ ಕುಮಾರ್ (25) ಮೃತಪಟ್ಟವ.
ಸಂಚಾರ ಪೂರ್ವ ವಿಭಾಗದ ವೈಟ್ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರ ಸೆ.14ರಂದು ತಡರಾತ್ರಿ 1.10ರಲ್ಲಿ ವರ್ತೂರು ಗುಂಜೂರು ಮುಖ್ಯರಸ್ತೆಯಲ್ಲಿ ಮಿನಿಬಸ್ ಚಾಲಕ ತನ್ನ ವಾಹನವನ್ನು ವರ್ತೂರು ಕಡೆಯಿಂದ ಗುಂಜೂರು ಕಡೆಗೆ ರಸ್ತೆಯಲ್ಲಿ ತೀರಾ ಬಲ ಭಾಗಕ್ಕೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬರುತ್ತಿದ್ದ. ಅದೇ ರಸ್ತೆಯಲ್ಲಿ ಗುಂಜೂರು ಕಡೆಯಿಂದ ವರ್ತೂರು ಕಡೆಗೆ ವಿನಾಯಕ ನಗರ ಬಳಿ ರಸ್ತೆಯ ಎಡ ಭಾಗದಲ್ಲಿ ಚಾಲನೆ ಮಾಡಿಕೊಂಡು ಬರುತ್ತಿದ್ದ ದ್ವಿಚಕ್ರವಾಹನಕ್ಕೆ ಮಿನಿ ಬಸ್ ಡಿಕ್ಕಿ ಹೊಡೆದಿತ್ತು. ರಸ್ತೆಯ ಮೇಲೆ ಬಿದ್ದು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ.
ವೈಟ್ಫೀಲ್ಡ್ ಸಂಚಾರ ಠಾಣಾ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದರು.
ಪ್ರಕರಣದಲ್ಲಿ ಎಸಿಜೆಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಮಿನಿಬಸ್ ಚಾಲಕ ಸುನೀಲ್ ಕುಮಾರ್ಗೆ 1 ವರ್ಷ 3 ತಿಂಗಳು ಜೈಲು ಶಿಕ್ಷೆ ಹಾಗೂ 9 ಸಾವಿರ ರೂ.ಗಳ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ 2 ತಿಂಗಳು 10 ದಿನದ ಸಜೆ ವಿಧಿಸಿ ಆದೇಶ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.