ಮೋಜಿಗಾಗಿ ಬೈಕ್‌ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

Team Udayavani, Jan 27, 2019, 7:08 AM IST

bike.jpg

ಬೆಂಗಳೂರು: ಮೋಜಿನ ಜೀವನ ಹಾಗೂ ಸ್ನೇಹಿತರ ಜತೆ ಜಾಲಿರೈಡ್‌ ಮಾಡಲು ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದವರನ್ನು ಮಾರತ್‌ಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುನ್ನೇಕೊಳಲು ನಿವಾಸಿಗಳಾದ ಇಬ್ಬರು ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದರು. ಇತ್ತೀಚೆಗೆ ಮಾರತ್‌ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳು ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಮಾರತ್‌ಹಳ್ಳಿ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದು, ಐದು ಪಲ್ಸರ್‌ ಸೇರಿದಂತೆ ಒಂಭತ್ತು ದ್ವಿಚಕ್ರ ವಾಹನಗಳನ್ನು ವಶಪಡೆದಿದ್ದಾರೆ.

ಸ್ನೇಹಿತರ ಜತೆ ಜಾಲಿ ರೇಡ್‌: ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಇತರೆ ಸ್ನೇಹಿತರ ಜತೆ ನಗರಾದ್ಯಂತ ಜಾಲಿ ರೇಡ್‌ ಮಾಡುತ್ತಿದ್ದರು. ಪೆಟ್ರೋಲ್‌ ಖಾಲಿಯಾಗುತ್ತಿದ್ದಂತೆ ನಿರ್ಜನ ಪ್ರದೇಶದಲ್ಲಿ ಬೈಕ್‌ಗಳನ್ನು ನಿಲ್ಲಿಸಿ ಪರಾರಿಯಾಗುತ್ತಿದ್ದರು. ಪದೇ ಪದೆ ಬೈಕ್‌ ಕಳ್ಳತನ ಪ್ರಕರಣಗಳಿಂದ ಎಚ್ಚೆತ್ತ ಪೊಲೀಸರು, ಘಟನಾ ಸ್ಥಳದಲ್ಲಿ ದೊರೆತ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಿ, ಬೈಕ್‌ಗಳ ನಂಬರ್‌ಗಳು ಹಾಗೂ ಅನುಮಾನಸ್ಪದ ಯುವಕರಿಗಾಗಿ ಶೋಧ ಕಾರ್ಯ ಆರಂಭಿಸಿದ್ದರು.

ಕೆಲ ದಿನಗಳ ಹಿಂದೆ ಕಾಡುಬೀಸನಹಳ್ಳಿಯಲ್ಲಿ ಇಬ್ಬರು ಯುವಕರು ಬೈಕ್‌ನಲ್ಲಿ ಹೋಗುತ್ತಿದ್ದರು. ಅನುಮಾನಗೊಂಡು ತಪಾಸಣೆ ನಡೆಸಿ ವಿಚಾರಣೆ ಒಳಪಡಿಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ವಿಚಾರಣೆ ಸಂದರ್ಭದಲ್ಲಿ ಇತ್ತೀಚೆಗೆ ಕಳವು ಮಾಡಿದ್ದ ಎರಡು ಪಲ್ಸರ್‌ ಬೈಕ್‌ಗಳನ್ನು ತಮ್ಮ ಇತರೆ ಇಬ್ಬರು ಸ್ನೇಹಿತರಿಗೆ ಕೆಲ ದಿನಗಳ ಕಾಲ ಬಳಸುವಂತೆ ಕೊಟ್ಟಿದ್ದರು ಎಂಬುದು ತಿಳಿದು ಬಂದಿದೆ ಎಂದು ಮಾರತ್‌ಹಳ್ಳಿ ಪೊಲೀಸರು ಹೇಳಿದರು. ಪ್ರಕರಣ ಮಾರತ್‌ಹಳ್ಳಿ ಠಾಣೆಯಲ್ಲಿ ದಾಖಲಾಗಿದೆ.

ಟಾಪ್ ನ್ಯೂಸ್

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.