ಒಗ್ಗಟ್ಟಿಗಾಗಿ ಕೋರ್‌ ಕಮಿಟಿಯಿಂದ ಸರಣಿ ಸಭೆ


Team Udayavani, Aug 28, 2017, 12:30 PM IST

BJP-Flag 600.jpg

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಖಡಕ್‌ ಸೂಚನೆಯಿಂದಾಗಿ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿರುವ ಪಕ್ಷದ ರಾಜ್ಯ ನಾಯಕರು ಇದೀಗ ಜಿಲ್ಲಾ ಮಟ್ಟದಲ್ಲಿ ಒಗ್ಗಟ್ಟು ಮೂಡಿಸುವ ಕೆಲಸಕ್ಕೆ ಚಾಲನೆ ನೀಡಿದ್ದಾರೆ. ಆ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಗೆ ತಳಮಟ್ಟದಿಂದ ಪಕ್ಷ ಸಜ್ಜುಗೊಳಿಸುವ ಕೆಲಸ ಆರಂಭಿಸಿದ್ದಾರೆ.

ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ಶಾ ಅವರಿಂದ ಒಮ್ಮೆ ಬಿಸಿ ಮುಟ್ಟಿಸಿಕೊಂಡಿದ್ದ ಬಿಜೆಪಿಯ ರಾಜ್ಯ ನಾಯಕರಿಗೆ ಶನಿವಾರ ಕೋರ್‌ ಕಮಿಟಿ ಸಭೆಯಲ್ಲಿ ಮತ್ತೂಂದು ಸುತ್ತಿನ ಚುರುಕು ಮುಟ್ಟಿದೆ. ಹೀಗಾಗಿ ರವಿವಾರದಿಂದಲೇ ಪಕ್ಷದ ಜಿಲ್ಲಾ ಮಟ್ಟದ ಪ್ರಮುಖರೊಂದಿಗೆ ಮಾತುಕತೆ ಆರಂಭಿಸಿದ್ದು, ಮೊದಲ ದಿನ ತಡರಾತ್ರಿಯವರೆಗೂ ಸಭೆಗಳು ಮುಂದುವರಿದಿದ್ದವು. ರವಿವಾರ ಚಿಕ್ಕಮಗಳೂರು, ಶಿವಮೊಗ್ಗ, ಉ. ಕನ್ನಡ, ದ. ಕನ್ನಡ, ಉಡುಪಿ ಮತ್ತು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧ್ಯಕ್ಷರು, ಪಕ್ಷದ ಶಾಸಕರು ಹಾಗೂ ಪ್ರಮುಖರ ಸಭೆ ನಡೆಯಿತು.

ಕೋರ್‌ ಕಮಿಟಿ ಸದಸ್ಯರು ಪ್ರತಿ ಜಿಲ್ಲೆಗಳ ಪ್ರಮುಖರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಬೇಕು ಎಂದು ಅಮಿತ್‌ ಶಾ ಅವರು ಈ ಹಿಂದೆ ಬೆಂಗಳೂರಿಗೆ ಬಂದಾಗ ಸೂಚಿಸಿದ್ದರು. ಅದರಂತೆ ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರ ರಾವ್‌ ಮತ್ತು ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರವಿವಾರ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಸೋಮವಾರ ಯಡಿಯೂರಪ್ಪ ಅವರು ದಲಿತ ಕುಟುಂಬಗಳಿಗೆ ಭೋಜನ ಕೂಟ ಏರ್ಪಡಿಸಿರುವುದರಿಂದ ಸಭೆ ಇರುವುದಿಲ್ಲ. ಮಂಗಳವಾರದಿಂದ ಸೆ. 3ರ ವರೆಗೆ ಜಿಲ್ಲಾವಾರು ಸಭೆ ಮುಂದುವರಿಯಲಿದೆ.

ಸಭೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆ, ಬೂತ್‌ ಮಟ್ಟದ ಕಮಿಟಿಗಳನ್ನು ಬಲಪಡಿಸು ವುದು ಮತ್ತು ಪ್ರತಿ ಬೂತ್‌ನಲ್ಲಿ ಒಂಬತ್ತು ಸದಸ್ಯರಿರುವ ಬೂತ್‌ ಕಮಿಟಿಗಳನ್ನು ರಚಿಸುವುದು, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ರಾಜ್ಯ ಸರಕಾರದ ವೈಫ‌ಲ್ಯಗಳ ವಿರುದ್ಧ ಸತತ ಹೋರಾಟಗಳನ್ನು ಸಂಘಟಿಸುವುದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ಹಂಚಿಕೆ ಮತ್ತಿತರ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ.

ಇದಲ್ಲದೆ, ಜಿಲ್ಲಾಮಟ್ಟದಲ್ಲಿ ಪಕ್ಷದಲ್ಲಿರುವ ಭಿನ್ನಾಭಿಪ್ರಾಯಗಳನ್ನು ದೂರ ಮಾಡುವ ಪ್ರಯತ್ನವೂ ಆರಂಭವಾಗಿದೆ. ಇತ್ತೀಚೆಗೆ ಅನ್ಯ ಪಕ್ಷಗಳಿಂದ ಬಿಜೆಪಿ ಸೇರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನೊಂದೆಡೆ ಯಡಿಯೂರಪ್ಪ ಅವರು ಕೆಜೆಪಿ ಕಟ್ಟಿದಾಗ ಅವರೊಂದಿಗೆ ಹೋಗಿ ಮತ್ತೆ ಬಿಜೆಪಿಗೆ ಬಂದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂಬ ಆರೋಪವೂ ಇದೆ. ಈ ಕಾರಣದಿಂದ ಇದುವರೆಗೂ ಪಕ್ಷಕ್ಕೆ ನಿಷ್ಠರಾಗಿದ್ದ ನಮ್ಮ ಪರಿಸ್ಥಿತಿ ಏನು ಎಂಬ ಆತಂಕ ಹಳೆಯ ಕಾರ್ಯಕರ್ತರು ಮತ್ತು ಮುಖಂಡರನ್ನು ಕಾಡುತ್ತಿದ್ದು, ಇದು ಸ್ಥಳೀಯ ಮಟ್ಟದಲ್ಲಿ ಅಸಮಾಧಾನಕ್ಕೂ ಕಾರಣವಾಗಿದೆ. ಇದಕ್ಕೆ ತೆರೆ ಎಳೆಯುವ ಸಲುವಾಗಿ ಕೋರ್‌ ಕಮಿಟಿ ಸದಸ್ಯರೇ ಖುದ್ದಾಗಿ ಜಿಲ್ಲಾ ಮಟ್ಟದ ಮುಖಂಡರ ಅಹವಾಲು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕೆಲಸದಲ್ಲಿ ತೊಡಗಿದ್ದಾರೆ.

ಜಿಲ್ಲಾ ಸಭೆಗಳಲ್ಲಿ ಕೋರ್‌ ಕಮಿಟಿ ಸದಸ್ಯರೊಬ್ಬರ ಹಾಜರಿ ಕಡ್ಡಾಯ: ಪ್ರತಿ ಮೂರು ಜಿಲ್ಲೆಗೊಬ್ಬ ಕೋರ್‌ ಕಮಿಟಿ ಸದಸ್ಯರನ್ನು ಉಸ್ತುವಾರಿಯಾಗಿ ನೇಮಕ ಮಾಡುವಂತೆ ಅಮಿತ್‌ ಶಾ ಶನಿವಾರ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಗಳಲ್ಲಿ ನಡೆಯುವ ಪದಾಧಿಕಾರಿಗಳ ಸಭೆ, ಪ್ರಮುಖರ ಸಭೆ ಸಹಿತ ಚುನಾವಣಾ ಸಿದ್ಧತೆ ಮತ್ತು ಪಕ್ಷ ಸಂಘಟನೆ ಕುರಿತ ಸಭೆಯಲ್ಲಿ ಕೋರ್‌ ಕಮಿಟಿ ಸದಸ್ಯರೊಬ್ಬರು ಇರುವುದು ಕಡ್ಡಾಯ ಎಂದು ಜಿಲ್ಲಾ ಘಟಕಗಳಿಗೆ ಸೂಚನೆ ನೀಡಲಾಗಿದೆ.

ಜಿಲ್ಲಾ ಮಟ್ಟದಲ್ಲಿ ನಡೆಯುವ ಸಭೆಗಳಲ್ಲಿ ಕೆಲವೊಮ್ಮೆ ಭಿನ್ನಮತ ಉಂಟಾಗಿ ಅದು ವಾಗ್ವಾದ, ಗೊಂದಲಕ್ಕೂ ಕಾರಣವಾಗುತ್ತದೆ. ಮುಂದೆ ಈ ರೀತಿ ನಡೆಯಬಾರದು. ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಸ್ಥಳೀಯ ವಾಗಿ ಭಿನ್ನಾಭಿಪ್ರಾಯ ಕಾಣಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಈ ತೀರ್ಮಾನಕ್ಕೆ ಬರಲಾಗಿದ್ದು, ಕೋರ್‌ ಕಮಿಟಿ ಸದಸ್ಯರೇ ಇದರ ಜವಾಬ್ದಾರಿ ನೋಡಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಪಾಲ್ಗೊಂಡ ಸಂತೋಷ್‌
ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರೊಂದಿಗಿನ ವಿರಸದ ಕಾರಣದಿಂದ ಬಿಜೆಪಿಯ ರಾಜ್ಯದ ಚಟುವಟಿಕೆಗಳಿಂದ ದೂರವೇ ಉಳಿದಿದ್ದ ಬಿಜೆಪಿ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್‌. ಸಂತೋಷ್‌ ಅವರು ಇದೀಗ ಮತ್ತೆ ರಾಜ್ಯದಲ್ಲಿ ಚುರುಕಾಗಿದ್ದಾರೆ. ರವಿವಾರ ಆರಂಭವಾದ ಜಿಲ್ಲಾ ಪ್ರಮುಖರೊಂದಿಗಿನ ಕೋರ್‌ ಕಮಿಟಿ ಸದಸ್ಯರ ಸಭೆಯಲ್ಲಿ ಅವರು ಪಾಲ್ಗೊಂಡಿದ್ದಾರೆ.

ಸಂತೋಷ್‌ ಅವರಿಗೆ ದಕ್ಷಿಣ ಭಾರತದಲ್ಲಿ ಪಕ್ಷ ಸಂಘಟನೆ ಉಸ್ತುವಾರಿ ವಹಿಸಲಾಗಿತ್ತಾದರೂ ಅವರು ರಾಜ್ಯದ ಬಗ್ಗೆ ಗಮನಹರಿಸಿರಲಿಲ್ಲ. ಯಾವತ್ತೂ ಪಕ್ಷದ ರಾಜ್ಯ ಕಾರ್ಯಕಾರಿಣಿಗೆ ತಪ್ಪಿಸಿಕೊಂಡವರಲ್ಲ. ಆದರೆ, ಕಳೆದ ಎಪ್ರಿಲ್‌ನಲ್ಲಿ ಮೈಸೂರಿನಲ್ಲಿ ನಡೆದ ಕಾರ್ಯಕಾರಿಣಿ ವೇಳೆ ಯಡಿಯೂರಪ್ಪ ಅವರು ಪಕ್ಷದ ಅಸಮಾಧಾನಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ನೇರ ಆರೋಪ ಮಾಡಿದ್ದು ಮತ್ತು ಕಾರ್ಯಕಾರಿಣಿಯಲ್ಲೂ ಅದು ಪ್ರತಿಧ್ವನಿಸಿತ್ತು. ಇದರಿಂದಾಗಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕಾರಿಣಿಯಿಂದ ಅವರು ದೂರವೇ ಉಳಿದಿದ್ದರು. ಆದರೆ, ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆ ತೀವ್ರಗೊಳಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು, ಕರ್ನಾಟಕದ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ಸಂತೋಷ್‌ ಅವರಿಗೆ ಸೂಚಿಸಿದ್ದರು. ಜತೆಗೆ ಅವರೊಂದಿಗೆ ಹೊಂದಾಣಿಕೆಯಿಂದ ಕೆಲಸ ಮಾಡುವಂತೆ ತಾಕೀತು ಮಾಡಿದ್ದರು. ಇದರ ಬೆನ್ನಲ್ಲೇ ಸಂತೋಷ್‌ ಅವರಿಗೆ ರಾಜ್ಯ ಬಿಜೆಪಿಯಲ್ಲಿ ಜವಾಬ್ದಾರಿ ನೀಡಿ, ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಯಾತ್ರೆಯ ಉಸ್ತುವಾರಿ ವಹಿಸಲಾಗಿತ್ತು. ಇದೀಗ ಜಿಲ್ಲಾ ಪ್ರಮುಖರ ಸಭೆಯಲ್ಲೂ ಪಾಲ್ಗೊಳ್ಳುವ ಮೂಲಕ ರಾಜ್ಯದಲ್ಲೂ ತಮ್ಮ ಕೆಲಸ ಚುರುಕುಗೊಳಿಸಿದ್ದಾರೆ.

ಟಾಪ್ ನ್ಯೂಸ್

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.