ಬಿಜೆಪಿ ಜಿಲ್ಲಾ ಉಸ್ತುವಾರಿಗಳ ನೇಮಕ
Team Udayavani, Aug 12, 2018, 6:35 AM IST
ಬೆಂಗಳೂರು:ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಸಂಬಂಧ ಬಿಜೆಪಿ ಜಿಲ್ಲಾ ಉಸ್ತುವಾರಿಗಳನ್ನು ನೇಮಿಸಿದ್ದು, ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರಗೆ ಚಾಮರಾಜನಗರ ಜಿಲ್ಲೆ ಉಸ್ತುವಾರಿ ನೀಡಲಾಗಿದೆ.
ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಕಳೆದ ಹದಿನೈದು ದಿನಗಳಿಂದ ನಿರಂತರ ಪ್ರವಾಸದಲ್ಲಿರುವ ವಿಜಯೇಂದ್ರಕ್ಕೆ ಇದೀಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಚಾಮರಾಜನಗರ ಉಸ್ತುವಾರಿ ವಹಿಸಲಾಗಿದೆ. ಇವರ ಜತೆ ರಾಜೇಂದ್ರ ಎಂಬುವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ, ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪ ಅವರಿಗೆ ಉತ್ತರ ಕನ್ನಡ, ಆರ್.ಅಶೋಕ್ ಅವರಿಗೆ ಕೊಡಗು ಜಿಲ್ಲೆ ಉಸ್ತುವಾರಿ ನೀಡಲಾಗಿದೆ.
ಉಳಿದಂತೆ, ಹಾಸನ-ಸಿ.ಟಿ.ರವಿ, ಮಂಡ್ಯ-ಅಶ್ವಥ್‌ನಾರಾಯಣಗೌಡ, ಮೈಸೂರು-ಎನ್.ವಿ.ಫಣೀಶ್, ದಕ್ಷಿಣ ಕನ್ನಡ- ಸುನಿಲ್‌ಕುಮಾರ್, ಉದಯಕುಮಾರ್ ಶೆಟ್ಟಿ, ಉಡುಪಿ-ಪ್ರತಾಪ್ ಸಿಂಹ ನಾಯಕ್, ಗದಗ-ಮಹೇಶ್ ಟೆಂಗಿನಕಾಯಿ, ಕೊಪ್ಪಳ-ಶ್ರೀರಾಮುಲು, ರಾಯಚೂರು-ರಘುನಾಥ್ ರಾವ್ ಮಲ್ಕಾಪುರೆ, ಬೀದರ್ -ಶಶಿಲ್ ನಮೋಶಿ, ತುಮಕೂರು- ವಿ.ಸೋಮಣ್ಣ, ಚಿತ್ರದುರ್ಗ- ವೈ.ಎ.ನಾರಾಯಣಸ್ವಾಮಿ, ದಾವಣಗೆರೆ- ಆಯನೂರು ಮಂಜುನಾಥ್, ಹಾವೇರಿ-ಎಂ.ನಾಗರಾಜ್, ವಿಜಯಪುರ- ಲಕ್ಷ್ಮಣ ಸವದಿ, ಬಾಗಲಕೋಟೆ- ಅರವಿಂದ ಲಿಂಬಾವಳಿ, ಯಾದಗಿರಿ-ಅಮರ್‌ನಾಥ ಪಾಟೀಲ್, ಕಲಬುರಗಿ- ರವಿಕುಮಾರ್.ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.
ಸಂಗಣ್ಣ ಕರಡಿಗೆ ಟಿಕೆಟ್
ಕೊಪ್ಪಳ: ಲೋಕಸಭಾ ಚುನಾವಣೆಯಲ್ಲಿ ಸಂಸದ ಸಂಗಣ್ಣ ಕರಡಿ ಅವರನ್ನು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಆ ಮೂಲಕ ಹಾಲಿ ಸಂಸದ ಸಂಗಣ್ಣಗೆ ಟಿಕೆಟ್ ಪಕ್ಕಾ ಎಂದು ಬಹಿರಂಗ ಸಭೆಯಲ್ಲಿಯೇ ಘೋಷಿಸಿದರು. ಶನಿವಾರ
ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಸಂಸದ ಸಂಗಣ್ಣ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು 2 ಬಾರಿ ಹೇಳುವ ಮೂಲಕ ಅವರಿಗೆ ಟಿಕೆಟ್ ಪಕ್ಕಾ ಎನ್ನುವ ಮುನ್ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.