ನಗರದ ಸಮಸ್ಯೆಗಳ ವಿರುದ್ಧ ಬಿಜೆಪಿ ಸರಣಿ ಹೋರಾಟ
Team Udayavani, Sep 3, 2017, 11:23 AM IST
ಬೆಂಗಳೂರು: ಬಿಬಿಎಂಪಿ ಸೇರಿದಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ ರಸ್ತೆ ಮತ್ತು ಕಸದ ಸಮಸ್ಯೆ ಹಾಗೂ ರಾಜಕಾಲುವೆ ಒತ್ತುವರಿ ವಿರುದ್ಧ ಸರಣಿ ಹೋರಾಟ ಹಮ್ಮಿಕೊಳ್ಳಲು ಬೆಂಗಳೂರು ನಗರ ಜಿಲ್ಲಾ ಬಿಜೆಪಿ ನಿರ್ಣಯ ಕೈಗೊಂಡಿದೆ.
ಸಂಸದ ಪಿ.ಸಿ.ಮೋಹನ್ ಮತ್ತು ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಪಿ.ಎನ್. ಸದಾಶಿವ ಅವರ ನೇತೃತ್ವದಲ್ಲಿ ಶನಿವಾರ ನಡೆದ ನಗರ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಕಳಪೆ ಕಾಮಗಾರಿ ಹಾಗೂ ನಿರ್ವಹಣೆ ಕೊರತೆಯಿಂದ ಇತ್ತೀಚಿನ ಮಳೆಗೆ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಓಡಾಡಲು ಸಾಧ್ಯವಾಗುತ್ತಿಲ್ಲ. ಅದೇ ರೀತಿ ಕಸ ಸಮಸ್ಯೆ ಮತ್ತೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ರಾಜಕಾಲುವೆ ಒತ್ತುವರಿ ತೆರವು ನೆಪದಲ್ಲಿ ಬಡವರನ್ನು ಒಕ್ಕಲೆಬ್ಬಿಸಿದ ಪಾಲಿಕೆ ಅಧಿಕಾರಿಗಳು, ಶ್ರೀಮಂತರ ಕಟ್ಟಡಗಳನ್ನು ತೆರವುಗೊಳಿಸದೆ ಬಡ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ. ಇವೆಲ್ಲದರ ವಿರುದ್ಧ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.
ಬೆಂಗಳೂರಿಗೆ ಕಾವೇರಿ ನೀರು ಒದಗಿಸುವ ಕಾವೇರಿ 5ನೇ ಹಂತ, 2ನೇ ಘಟ್ಟದಡಿ ತ್ವರಿತವಾಗಿ 10 ಟಿಎಂಸಿ ನೀರು ತರಲು ಯೋಜನೆಯನ್ನು ಸರ್ಕಾರದ ವತಿಯಿಂದಲೇ ಕೈಗೊಂಡು ಸಮರೋಪಾದಿಯಲ್ಲಿ ಕಾಮಗಾರಿ ನಡೆಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುವ ನಿರ್ಣಯ ಕೈಗೊಳ್ಳಲಾಗಿದೆ. ಮೇಯರ್ ಚುನಾವಣೆಯಲ್ಲಿ ಪಾಲ್ಗೊಳ್ಳಲು ಸುಳ್ಳು ದಾಖಲೆ ನೀಡಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಿದ 8 ವಿಧಾನ ಪರಿಷತ್ ಸದಸ್ಯ ರನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸುವ ನಿರ್ಣಯವನ್ನೂ ತೆಗೆದುಕೊಳ್ಳಲಾಗಿದೆ. ಇದಕ್ಕೂ ಮುನ್ನ
ಕಾರ್ಯಕಾರಿಣಿ ಉದ್ಘಾಟಿಸಿದ ಸಂಸದ ಪಿ.ಸಿ.ಮೋಹನ್ ಮಾತನಾಡಿದರು. ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ವಿ. ಸೋಮಣ್ಣ, ಶಾಸಕ ಬಿ.ಎನ್.ವಿಜಯಕುಮಾರ್, ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ, ಮುಖಂಡರಾದ ಸುಬ್ಬಣ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.