17 ಜನರಿಂದ BJP ಸರ್ಕಾರ ಅಧಿಕಾರಕ್ಕೆ ಬರಲಿಲ್ಲ;ಕಾರ್ಯಕರ್ತರ ಶ್ರಮದಿಂದ ಬಂದಿದೆ: ರೇಣುಕಾಚಾರ್ಯ
Team Udayavani, Nov 25, 2020, 2:17 PM IST
ಬೆಂಗಳೂರು: ಹದಿನೇಳು ಜನರಿಂದ ಬಿಜೆಪಿ ಸರ್ಕಾರ ಬಂದಿದೆ ಎಂಬುದು ಸುಳ್ಳು. ಪಕ್ಷದ ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಸರ್ಕಾರ ಬಂದಿದೆ ಎಂದು ವಿಧಾನಸೌಧದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.
105 ಶಾಸಕರು ಇಲ್ಲದೇ ಇದ್ದಿದ್ರೆ ಸರ್ಕಾರ ಹೇಗೆ ಆಗುತ್ತಿತ್ತು? ಪಕ್ಷದ ಕಾರ್ಯಕರ್ತರ ತಪಸ್ಸಿನಿಂದಾಗಿ 105 ಶಾಸಕರು ಗೆದ್ದಿದ್ದರು. ಮೊದಲು 105 ಶಾಸಕರು, ಆಮೇಲೆ ಉಳಿದವರು. ಯಾರೋ ಒಬ್ಬರಿಂದ ಸರ್ಕಾರ ಬಂದಿದೆ ಎಂದು ಹೇಳಲಾಗದು. ಲಕ್ಷಾಂತರ ಕಾರ್ಯಕರ್ತರ ಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದರು.
ಮೊದಲು 105 ಶಾಸಕರು. ನಂತರ ಕಾಂಗ್ರೆಸ್, ಜೆಡಿಎಸ್ ನಿಂದ ಬೇಸತ್ತು 17 ಜನ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನನ್ನಿಂದಲೇ ಸರ್ಕಾರ ಬಂದಿದೆ ಅಂತಾ ಯಾರು ಹೇಳ್ತಾರೋ ಅವರು ಇದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಕ್ಷೌರ ಮಾಡಲು ಹೋದವನನ್ನು ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ
ಸಚಿವ ಸಂಪುಟದ ಬಗ್ಗೆ ಮಾಹಿತಿ ಇಲ್ಲ. ಸಿಎಂ ವರಿಷ್ಠರ ಜೊತೆ ಚರ್ಚೆ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಟ್ಟರೆ ತಪ್ಪೇನು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾತನಾಡಿ, ಅದು ಅವರ ವೈಯಕ್ತಿಕ ಅಭಿಪ್ರಾಯ. ಅಂತಿಮವಾಗಿ ಪಕ್ಷದ ತೀರ್ಮಾನ ಮುಖ್ಯ ಎಂದರು.
ನಾವೂ ಸಹ ನಾಯಕರಿಗೆ ಕೆಲವೊಂದು ಸಲಹೆಗಳನ್ನು ಕೊಟ್ಟಿದ್ದೇವೆ. ಜನರಿಂದ ನೇರವಾಗಿ ಆಯ್ಕೆಯಾದವರಿಗೆ ಸಚಿವ ಸ್ಥಾನ ಕೊಡೋದು ಶಿಷ್ಟಾಚಾರ. ಪಕ್ಷ, ಸರ್ಕಾರಕ್ಕಿಂತ ಯಾರೂ ದೊಡ್ಡವರಲ್ಲ.
ಇಂದು ಹತ್ತು ಜನ ಶಾಸಕರು ಒಟ್ಟಿಗೆ ಸೇರಿದ್ದೆವು. ಅದು ಕೂಡ ನಮ್ಮ ಮನೆಯಲ್ಲಿ ಉಪಹಾರಕ್ಕೆ ಸೇರಿದ್ದೆವು. ನಾವೇನು ರೆಸಾರ್ಟ್, ಹೋಟೆಲ್ ನಲ್ಲಿ ಸಭೆ ನಡೆಸಿಲ್ಲ. ನಮ್ಮ ಮನೆಯಲ್ಲಿ ಚರ್ಚೆ ನಡೆಸಿದ್ದೇವೆ. ಆದಷ್ಟು ಬೇಗ ಇಲ್ಲಿ ಚರ್ಚೆಯಾದ ವಿಚಾರಗಳನ್ನು ವರಿಷ್ಠರ ಗಮನಕ್ಕ ತರುತ್ತೇವೆ ಎಂದರು.
ಇದನ್ನೂ ಓದಿ: CBI ವಿಚಾರಣೆಗೆ ಹಾಜರಾಗುತ್ತೇನೆ; ಓಡಿಹೋಗುವವನಲ್ಲ ನಾನು: BJP ವಿರುದ್ಧ ಡಿಕೆಶಿ ವಾಗ್ದಾಳಿ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.