ಸೋಲಿನಿಂದ ಕಂಗೆಟ್ಟು ಸುಳ್ಳಿನ ಕಂತೆ ಸೃಷ್ಟಿಸಿದ ಬಿಜೆಪಿ: ಪರಂ


Team Udayavani, May 12, 2017, 11:56 AM IST

param.jpg

ಬೆಂಗಳೂರು: ರಾಜ್ಯ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಬಿಡುಗಡೆ ಮಾಡಿರುವ ಚಾರ್ಜ್‌ ಶೀಟ್‌ ಸುಳ್ಳಿನ ಕಂತೆ ಎಂದು ಪರಮೇಶ್ವರ್‌ ವ್ಯಂಗ್ಯ ವಾಡಿದರು. ರಾಜ್ಯ ಕಳೆದ ನಾಲ್ಕು ವರ್ಷಗಳಲ್ಲಿ ಮಾಡಿರುವ ಸಾಧನೆಯಿಂದ ಬಿಜೆಪಿ ಮುಖಂಡರು ಹತಾಶೆಗೊಂಡಿದ್ದಾರೆ. ಹೀಗಾಗಿ ಸರ್ಕಾರದ ಸುಳ್ಳಿನ ಕಂತೆಯನ್ನೆ ಹೆಣೆದಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಪಿಸಿರುವ ಬಿಜೆಪಿಯವರು ಅವರು ಆಳ್ವಿಕೆ ಮಾಡುತ್ತಿರುವ ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ರಾಜ್ಯಗಳಲ್ಲಿ ಕ್ರೈಮ್‌ ರೇಟ್‌ ಎಷ್ಟಿದೆ ಎಂದು ತಿಳಿದುಕೊಳ್ಳಲಿ ಎಂದು ತಿರುಗೇಟು ನೀಡಿದರು. 

ಪ್ರಶಾಂತ ಪೂಜಾರಿ, ರುದ್ರೇಶ್‌, ಕಾರ್ತಿಕ ಕೊಲೆ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಡಿ.ಕೆ. ರವಿ ಪ್ರಕರಣದಲ್ಲಿ ಸಿಬಿಐ ಕ್ಲೀನ್‌ ಚಿಟ್‌ ನೀಡಿದೆ. ಇದರಲ್ಲಿ ರಾಜ್ಯ ಸರ್ಕಾರದ ವೈಫ‌ಲ್ಯ ಎಲ್ಲಿದೆ ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಅಪರಾಧಗಳಲ್ಲಿ ಭಾಗಿಯಾದವನ್ನು ನಮ್ಮ ಸರ್ಕಾರ ಬಂದ ಮೇಲೆ ಬಂಧಿಸಲಾಗಿದೆ.

ಬಿಜೆಪಿಯವರು ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆ ಸೋತ ನಂತ ಹತಾಶರಾಗಿ ರಾಜಕೀಯವಾಗಿ ಆರೋಪ ಮಾಡುತ್ತಿದ್ದಾರೆ. ಜನರನ್ನು ದಾರಿ ತಪ್ಪಿಸಲು ಅವರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಪರಮೇಶ್ವರ್‌ ಹೇಳಿದರು.

ಖರ್ಗೆ ಅಧ್ಯಕ್ಷರಾಗಿ ಬರುವುದಾದರೆ ಸ್ವಾಗತ: ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಖರ್ಗೆ ಅಧ್ಯಕ್ಷರಾದರೆ ಸ್ವಾಗತಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. 

ಮುನಿಯಪ್ಪಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ: ಎರಡು ಹುದ್ದೆಯ ಗೊಂದಲದ ಬಗ್ಗೆ ಕೆ.ಎಚ್‌. ಮುನಿಯಪ್ಪ  ಅವರಿಗೆ ನನ್ನ ಸಾಮರ್ಥ್ಯದ ಬಗ್ಗೆ ಗೊತ್ತಿಲ್ಲ ಹೀಗಾಗಿ ಅವರು ಈ ರೀತಿ ಮಾತನಾಡುತ್ತಿದ್ದಾರೆ. ಹೈ ಕಮಾಂಡ್‌ ಎರಡೂ ಹುದ್ದೆಯನ್ನು ನಾನು ನಿಭಾಯಿಸುತ್ತೇನೆ ಎಂಬ ನಂಬಿಕೆಯಿಂದಲೇ ಕೊಟ್ಟಿದೆ. ಒಬ್ಬರಿಗೆ ಒಂದು ಹುದ್ದೆ ಎಂಬ ಕಾಂಗ್ರೆಸ್‌ ನಿಯಮದಲ್ಲಿ ನನಗೆ ವಿನಾಯ್ತಿ ನೀಡಿದ್ದಾರೆ ಎಂದು ಪರಮೇಶ್ವರ್‌ ತಿಳಿಸಿದರು.

2 ವರ್ಷದಲ್ಲಿ ಪೊಲೀಸರ ನೇಮಕ ಪೂರ್ಣ
ಬೆಂಗಳೂರು:
ಮುಂದಿನ 2 ವರ್ಷಗಳಲ್ಲಿ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. “2013 ರಿಂದ 17 ರ ವರೆಗೆ 22,457 ಪೊಲಿಸ್‌ ಪೇದೆ ಹಾಗೂ 1304 ಸಬ್‌ ಇನ್ಸ್‌ ಪೆಕ್ಟರ್‌ ನೇಮಕ ಮಾಡಲಾಗಿದೆ. ಮುಂದಿನ 2 ವರ್ಷದಲ್ಲಿ 16 ಸಾವಿರ ಪೊಲಿಸರನ್ನು ನೇಮಕ ಮಾಡಿಕೊಳ್ಳಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಪಡೆಯಲಾಗಿದೆ,’ ಎಂದು ಹೇಳಿದರು. 

ಕಲಬರಗಿ ಹಂತಕರ ಮಾಹಿತಿ ಇಲ್ಲ: ಸಾಹಿತಿ ಕಲಬುರ್ಗಿ ಅವರ ಹಂತಕರ ಬಗ್ಗೆ ಇನ್ನೂ ಮಾಹಿತಿ ದೊರೆತಿಲ್ಲ ಎಂದು ಪರಮೇಶ್ವರ್‌ ಹೇಳಿದ್ದಾರೆ. ಕಲಬುರ್ಗಿ ಹಂತಕರ ಪತ್ತೆಗೆ ಇಲಾಖೆ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಿದ್ದು, ತನಿಖೆ ಚುರುಕುಗೊಂಡಿದೆ. ದಾಬೋಲ್ಕರ್‌, ಗೋವಿಂದ ಪನ್ಸಾರೆ ಅವರನ್ನು ಹತ್ಯೆ ಮಾಡಿದವರೇ ಕಲಬುರ್ಗಿ ಅವರನ್ನು ಹತ್ಯೆ ಮಾಡಿರಬಹುದೆಂಬ ಶಂಕೆ ಇದೆ ಎಂದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.