ಬಿಜೆಪಿ ವಿರೋಧದ ಮಧ್ಯೆ ವಿವಿ ವಿಧೇಯಕಕ್ಕೆಅಂಗೀಕಾರ
Team Udayavani, Jun 21, 2017, 11:48 AM IST
ವಿಧಾನಸಭೆ: ಬಿಜೆಪಿಯ ತೀವ್ರ ವಿರೋಧದ ನಡುವೆಯೇ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ವಿಧೇಯಕ-2017 ನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.
ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ವಿಧೇಯಕದ ಮಹತ್ವದ ಕುರಿತು ವಿವರಿಸಿ, ವಿಶ್ವವಿದ್ಯಾಲಯಗಳನ್ನು ಸರ್ಕಾರದ ಹತೋಟಿಗೆ ತೆಗೆದುಕೊಳ್ಳುವ ಉದ್ದೇಶ ಸರ್ಕಾರಕ್ಕಿಲ್ಲ. ವಿಶ್ವವಿದ್ಯಾಲಯಗಳ
ಕುಲಪತಿಗಳ ನೇಮಕ ಮಾಡುವಲ್ಲಿ ನಾಲ್ಕು ಜನರ ಶೋಧನಾ ಸಮಿತಿ ಇರುವುದರಿಂದ ಶೋಧನಾ ಸಮಿತಿ ಸದಸ್ಯರ ಸಂಖ್ಯೆಯನ್ನು ಐದಕ್ಕೆ ಹೆಚ್ಚಳ ಮಾಡಲು ಯುಜಿಸಿ ನಿಯಮದಲ್ಲಿಯೇ ಅವಕಾಶವಿರುವುದರಿಂದ ಐವರು ಸದಸ್ಯರನ್ನು ನೇಮಿಸಲು ಅವಕಾಶ ಕಲ್ಪಿಸಲಾಗಿದೆ.
ವಿ.ಸಿ.ಗಳ ನೇಮಕ ವಿಳಂಬವಾಗುವು ದರಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ. ಅದನ್ನು ತಪ್ಪಿಸಲು ಮೂರು ತಿಂಗಳು ಮೊದಲೇ ಕುಲಪತಿಗಳ ಶೋಧನಾ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ.
ದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಶೇ.24ರಷ್ಟಿದ್ದರೆ, ರಾಜ್ಯದ ಲ್ಲಿ ಶೇ.28.5 ಇದೆ. ಇದನ್ನು
ಶೇ.40ಕ್ಕೆ ಹೆಚ್ಚಳ ಮಾಡುವ ಉದ್ದೇಶ ಹೊಂದಲಾಗಿದೆ. ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ವಿ.ಸಿ. ಹಾಗೂ ಕುಲಸಚಿವರಿಗೆ ಹೆಚ್ಚಿನ ಆದ್ಯತೆ ನೀಡಲು ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದರು.
ಸರ್ಕಾರದ ಸಮಗ್ರ ತಿದ್ದುಪಡಿ ವಿಧೇಯಕಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ವಿವಿಗಳ ಸ್ವಾಯತ್ತತೆಗೆ ಧಕ್ಕೆ ತರಲು ಹಾಗೂ ತನ್ನ ಹಿಡಿತಕ್ಕೆ ವಿವಿಗಳನ್ನು ತರಲು ಈ ಪ್ರಯತ್ನ ನಡೆಸುತ್ತಿದೆ.
ಇದರಿಂದ ವಿಶ್ವವಿದ್ಯಾಲಯಗಳ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ ಎಂದು ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್, ಅರವಿಂದ ಲಿಂಬಾವಳಿ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ಷೇಪ ವ್ಯಕ್ತಪಡಿಸಿದರು.
ಇದು ಮಹತ್ವದ ವಿಧೇಯಕ ಆಗಿರುವುದರಿಂದ ಈ ಬಗ್ಗೆ ಸಾರ್ವಜನಿಕ ಚರ್ಚೆಯ ಅಗತ್ಯವಿದೆ. ವಿವಿಗಳಿಗೆ ಸ್ವಾಯತ್ತತೆ ನೀಡಿ, ವಿವಿಗಳ ಮೇಲೆ ನಿಯಂತ್ರಣ ಹೇರಿದರೆ ಕ್ರಿಯಾಶೀಲತೆ ಕಡಿಮೆಯಾಗುತ್ತದೆ. ವಿವಿಗಳ ಮೌಲ್ಯ ಕುಸಿತವಾಗುತ್ತದೆ. ಆಗ ವಿದ್ಯಾರ್ಥಿಗಳು ಹೊರ ರಾಜ್ಯದ ವಿವಿಗಳಿಗೆ ಹೋಗುವ ಸಂದರ್ಭ ಬರುತ್ತದೆ. ಇದನ್ನು ಜಂಟಿ ಸದನ ಸಮಿತಿಗೆ ಒಪ್ಪಿಸಿ ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು. ಆದರೆ, ಬಸವರಾಜ ರಾಯರಡ್ಡಿ ಪ್ರತಿಕ್ರಿಯಿಸಿ, ಪ್ರತಿಪಕ್ಷಗಳ ನಾಯಕರು ವಿಧೇಯಕದ ಬಗ್ಗೆ ಸಂಶಯ ಪಡುವ ಅಗತ್ಯವಿಲ್ಲ. ಸರ್ಕಾರ ಯಾವುದನ್ನೂ ಹಿಡಿತಕ್ಕೆ ತೆಗೆದುಕೊಳ್ಳಲು ಬಯಸುತ್ತಿಲ್ಲ. ವಿಧೇಯಕಕ್ಕೆ ಸದನದ ಒಪ್ಪಿಗೆ ನೀಡುವಂತೆ ಕೋರಿದರು.
ಸರ್ಕಾರದ ನಿಲುವನ್ನು ವಿರೋಧಿಸಿ ಬಿಜೆಪಿ ಸಭಾತ್ಯಾಗ ಮಾಡಿತು. ಬಿಜೆಪಿ ಸಭಾತ್ಯಾಗದ ನಡುವೆಯೇ ವಿಧೇಯಕಕ್ಕೆ ಅಂಗೀಕಾರ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.