ಅಶಾಂತಿ ಸೃಷ್ಟಿಸಲು ಬಿಜೆಪಿ ಪಣ
Team Udayavani, Feb 4, 2018, 12:16 PM IST
ಬೆಂಗಳೂರು: ಬಿಜೆಪಿಯವರು ಕರ್ನಾಟಕದಲ್ಲಿ ಅಶಾಂತಿ ಸೃಷ್ಟಿಸಲು ಪಣ ತೊಟ್ಟಿದ್ದಾರೆ. ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿ, ಜಾತಿ-ಜಾತಿಗಳ ನಡುವೆ ಸಂಘರ್ಷ ಮೂಡಿಸುತ್ತಿರುವ ಬಿಜೆಪಿ ನಾಯಕರೇ ನಿಜವಾದ ತಾಲಿಬಾನಿಗಳು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ಕಾಡುಗೊಂಡನಹಳ್ಳಿ ನೂತನ ಪೊಲೀಸ್ ಠಾಣೆ ಕಟ್ಟಡ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಕಂಕಣ ತೊಟ್ಟಿದ್ದಾರೆ. ಸಂಸದ ಪ್ರತಾಪ್ ಸಿಂಹ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹೊಸ ಕೆಲಸ ಕೊಟ್ಟಂತಿದೆ.
ಸಂಸದ ಪ್ರತಾಪ್ ಸಿಂಹ, ಕರ್ನಾಟಕವನ್ನು ತಾಲಿಬಾನ್‌ಗೆ ಹೊಲಿಸಿದ್ದಾರೆ. ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ಅಮಿತ್ ಶಾ ಹೇಳಿದ್ದಾರೆಂದು ಸ್ವತಃ ಸಂಸದರೇ ಸಾಮಾಜಿಕ ಜಾಲತಾಲಣಗಳಲ್ಲಿ ಹೇಳಿಕೊಂಡಿದ್ದಾರೆ. ಹುಣಸೂರಿನಲ್ಲಿ ಹನುಮ ಜಯಂತಿಯ ನಾಟಕವಾಡಿ ಶಾಂತಿ ಕದಡುವ ವಿಫಲ ಯತ್ನ ನಡೆಸಿದ್ದ ಪ್ರತಾಪ್ ಸಿಂಹ, ಪ್ರಮಾಣಿಕ ಮತ್ತು ದಕ್ಷ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆಗೆ ಮುಂದಾಗಿದ್ದರು. ಇದು ಅವರ ತಾಲಿಬಾನ್ ಸಂಸ್ಕೃತಿಗೆ ಹಿಡಿದ ಕನ್ನಡಿ ಎಂದರು.
ಕಾಡೇ ಪ್ರಶಸ್ತ ತಾಣ: “ಮಂಗಳೂರು ಚಲೋ, ಬೈಕ್ ರ್ಯಾಲಿ ನಡೆಸಿ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಗಲಭೆ ನಡೆಸುವ ಬಿಜೆಪಿ ಹುನ್ನಾರವನ್ನು ಸರ್ಕಾರ ವಿಫಲಗೊಳಿಸಿದೆ. ಈ ಎಲ್ಲ ವಿಫಲ ಯತ್ನಗಳಿಂದ ಪ್ರತಾಪ್ ಸಿಂಹ ಹತಾಶರಾಗಿದ್ದಾರೆ.
“ಐ ಸಪೋರ್ಟ್ ಪ್ರತಾಪ್ ಸಿಂಹ’ ಯುವ ಮೋರ್ಚಾ ಫೇಸ್‌ಬುಕ್ ಪೇಜ್‌ನಲ್ಲಿ ಪ್ರತಾಪ್ ಸಿಂಹ ಬೆಂಬಲಿಗರು ರಾಜ್ಯದ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ಒನಕೆ ಓಬ್ಬವ್ವ ಅವರ ಕುರಿತು ಅವಾಚ್ಯ ಶಬ್ಧಗಳಿಂದ ನಿಂದಿಸಿ ಇವರ ಸಂಸ್ಕೃತಿಯನ್ನು ಪ್ರದರ್ಶಿಸಿದ್ದಾರೆ,’ ಎಂದು ದೂರಿದ ಸಚಿವರು, “ಬೆಂಕಿ ಹಚ್ಚುವುದು, ದಂಗೆ ಎಬ್ಬಿಸುವುದು ನಿಮ್ಮ ಉದ್ಯೋಗ. ಸದಾ ಬೆಂಕಿ ಉಗುಳುವ “ಸಿಂಹ’ಗೆ ಕಾಡೇ ಪ್ರಶಸ್ತವಾದ ತಾಣ’ ಎಂದು ಲೇವಡಿ ಮಾಡಿದರು.
ಮರಣೋತ್ತರ ಸದಸ್ಯತ್ವ: “ಬಿಜೆಪಿ ನಾಯಕರು ಸಂತೋಷ್ ಕೊಲೆಯಲ್ಲಿ ರಾಜಕೀಯ ಮಾಡುತ್ತಾರೆ. ಅಸಲಿಗೆ ಸಂತೋಷ್ ಯಾವುದೇ ಪಕ್ಷದ ಕಾರ್ಯಕರ್ತನಲ್ಲ. ಪರೇಶ್ ಮೆಸ್ತಾ ಸಾವಲ್ಲೂ ಬಿಜೆಪಿಯವರು ಇದೇ ರೀತಿ ರಾಜಕೀಯ ಮಾಡಿದ್ದರು. “ಆತ ನಮ್ಮ ಪಕ್ಷದ ಕಾರ್ಯಕರ್ತ’ ಎನ್ನುವ ಮೂಲಕ ಶೋಭಾ ಕರಂದ್ಲಾಜೆ, ಕೊಲೆಯಾದವರಿಗೆಲ್ಲ ಮರಣೋತ್ತರ ಸದಸ್ಯತ್ವ ಕೊಡುತ್ತಿದ್ದಾರೆ,’ ಎಂದು ಸಚಿವ ರಾಮಲಿಂಗಾ ರೆಡ್ಡಿ ಟೀಕಿಸಿದರು.
ದಾನಮ್ಮ ಸಾವು ಸಾವಲ್ಲವೇ?: ಚಿಕ್ಕಬಳ್ಳಾಪುರದ ಪರಿವರ್ತನಾ ರ್ಯಾಲಿಯಲ್ಲಿ ಬೆಲ್ಲಿ ಡ್ಯಾನ್ಸ್ ಮಾಡುತ್ತಾರೆ. ಇಂತಹ ನಾಯಕರು ವಿರೋಧ ಪಕ್ಷದಲ್ಲಿ ಕೂರಲೂ ನಾಲಾಯಕ್. ಗೌರಿ ಲಂಕೇಶ್ ಮೃತಪಟ್ಟಾಗ ಯಡಿಯೂರಪ್ಪ ಸಮೇತ ಯಾರೂ ಹೋಗಲಿಲ್ಲ. ದಾನಮ್ಮ ಮತ್ತು ಧನ್ಯಶ್ರೀ ಸಾವಿಗೆ ಬೆಲೆ ಇಲ್ವಾ? ಅವರ ಸಾವಿನ ಕುರಿತು ಯಾಕೆ ಪ್ರತಿಭಟನೆ ಮಾಡಲಿಲ್ಲ. ಹರೀಶ್ ಪೂಜಾರಿ, ವಿನಾಯಕ್ ಬಾಳಿಗ ಕೊಲೆಗೆಲ್ಲ ಪ್ರತಿಭಟನೆ ಮಾಡಲ್ಲ. ಅವರನ್ನು ಕೊಲೆಗೈದವರು ಬಿಜೆಪಿ ಬೆಂಬಲಿಗರೇ. ಅದಕ್ಕೆ ಅವರ ಹತ್ಯೆ ಬಗ್ಗೆ ಮಾತನಾಡುವುದಿಲ್ಲ,’ ಎಂದು ಆರೋಪಿಸಿದರು.
ಅಪರಾಧ ಸಂಖ್ಯೆ ಕಡಿಮೆಯಾಗಿದೆ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಪೊಲೀಸ್ ಇಲಾಖೆಯಲ್ಲಿ 20ಸಾವಿರಕ್ಕೂ ಅಧಿಕ ಸಿಬ್ಬಂದಿ ನೇಮಕ ಮಾಡಿಕೊಂಡಿದ್ದೇವೆ. ಅಲ್ಲದೇ 11 ಸಾವಿರ ಪೊಲೀಸ್ ಕುಟುಂಬಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಿದ್ದೇವೆ. ಪೊಲೀಸ್ ಕಲ್ಯಾಣಕ್ಕಾಗಿ ಸರ್ಕಾರ 2 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇವೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.
ಠಾಣೆಯಲ್ಲಿ ಹೋಮ: ನೂತನವಾಗಿ ಉದ್ಘಾಟನೆಗೊಂಡ ಕಾಡುಗೊಂಡನಹಳ್ಳಿ ಠಾಣೆಯಲ್ಲಿ ಉದ್ಘಾಟನೆಗೂ ಮೊದಲು ಹೋಮ ನಡೆಸಲಾಯಿತು. ಸಚಿವ ಕೆ.ಜೆ.ಜಾರ್ಜ್, ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ನಗರ ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್, ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಐಜಿಪಿ ಎಂ.ನಂಜುಂಡಸ್ವಾಮಿ ಸೇರಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್‌ರಾವ್ ಯಾರು? ರಾಜ್ಯದ ಬಗ್ಗೆ ಅವರಿಗೇನು ಗೊತ್ತು. ಕಾಂಗ್ರೆಸ್ ಪಿಎಫ್ಐ, ಎಸ್‌ಡಿಪಿಐ ಸಂಘಟನೆ ಜತೆ ಒಳಒಪ್ಪಂದ ಮಾಡಿಕೊಂಡಿರುವ ಬಗ್ಗೆ ಬೆಜೆಪಿ ಸ್ಪಷ್ಟನೆ ನೀಡಲಿ. ಕಾಂಗ್ರೆಸ್ ಯಾವ ಪಕ್ಷದೊಂದಿಗೂ ಒಪ್ಪಂದ ಮಾಡಿಕೊಂಡಿಲ್ಲ. ಬಿಜೆಪಿ ಪರೋಕ್ಷವಾಗಿ ಒವೈಸಿ ಜತೆ ನಿರಂತರ ಸಂಪರ್ಕದಲ್ಲಿದೆ.
-ರಾಮಲಿಂಗಾರೆಡ್ಡಿ, ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.