ಕೆ.ಜೆ.ಬೋಪಯ್ಯ ಹಂಗಾಮಿ ಸ್ಪೀಕರ್
Team Udayavani, May 19, 2018, 6:00 AM IST
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಶನಿವಾರವೇ ವಿಶ್ವಾಸಮತ ಸಾಬೀತುಪಡಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಕೆ.ಜೆ.ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ.
ಈ ಹಿಂದೆ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕೆ.ಜೆ.ಬೋಪಯ್ಯ ಸ್ಪೀಕರ್ ಆಗಿದ್ದರು.
ಆಗ ಬಹುಮತ ಸಾಬೀತು ಸಂದರ್ಭದಲ್ಲಿ ಸದನದಲ್ಲಿ ಗದ್ದಲ ಉಂಟಾದಾಗ 11 ಶಾಸಕರನ್ನು ಅನರ್ಹಗೊಳಿಸಿ ವಿವಾದಕ್ಕೀಡಾಗಿದ್ದರು. ಆ ಪ್ರಕರಣ ಸುಪ್ರೀಂಕೋರ್ಟ್‌ವರೆಗೂ ಹೋಗಿತ್ತು.
ಸಹಜವಾಗಿ ಸದನದ ಹಿರಿಯ ಹಾಗೂ ಹೆಚ್ಚು ಬಾರಿ ಆಯ್ಕೆಯಾದವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗುತ್ತದೆ. ಆದರೆ, ಹಿರಿಯ ಸದಸ್ಯರಾದ ಆರ್.ವಿ.ದೇಶಪಾಂಡೆ, ವಿಶ್ವೇಶ್ವರ ಹೆಗಡೆ ಕಾಗೇರಿ,
ಉಮೇಶ್ ಕತ್ತಿ, ರಮೇಶ್‌ಕುಮಾರ್, ರೋಷನ್ ಬೇಗ್ ಅವರನ್ನು ಬಿಟ್ಟು ಬೋಪಯ್ಯ ಅವರನ್ನೇ ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವುದು ಕಾರ್ಯತಂತ್ರದ ಭಾಗ ಎಂಬ ಮಾತುಗಳು ಕೇಳಿಬರುತ್ತಿವೆ.
ರಾಜ್ಯಪಾಲ ವಿ.ಆರ್.ವಾಲಾ ಅವರು ಶುಕ್ರವಾರ ರಾಜಭವನದಲ್ಲಿ ಕೆ.ಜೆ.ಬೋಪಯ್ಯ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ರಾಜುಗೌಡ,ಸಿ.ಸಿ.ಪಾಟೀಲ್, ರೇಣುಕಾಚಾರ್ಯ ಉಪಸ್ಥಿತರಿದ್ದರು.
ಈ ಮಧ್ಯೆ, ಕೆ.ಜೆ.ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವುದನ್ನು ಕಾಂಗ್ರೆಸ್ ವಿರೋಧಿಸಿದೆ. ಆದರೆ, ಬಿಜೆಪಿ ಸಮರ್ಥಿಸಿಕೊಂಡಿದೆ. 2008ರಲ್ಲೂ ಬೋಪಯ್ಯ ಹಂಗಾಮಿ ಸ್ಪೀಕರ್ ಆಗಿದ್ದರು. ಜತೆಗೆ ಸ್ಪೀಕರ್ ಆಗಿ ಕೆಲಸ ಮಾಡಿರುವ ಅನುಭವವೂ ಇದೆ. ನಾಲ್ಕು ಬಾರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನವರು ಹತಾಶರಾಗಿ
ವಿರೋಧಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.