ಸಂತೋಷ್‌ ನಿವಾಸಕ್ಕೆ ಬಿಜೆಪಿ ನಾಯಕರ ಭೇಟಿ


Team Udayavani, Feb 4, 2018, 12:15 PM IST

santhosh-nivasa.jpg

ಬೆಂಗಳೂರು: ಇತ್ತೀಚೆಗೆ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ಸಂತೋಷ್‌ ನಿವಾಸಕ್ಕೆ ಶನಿವಾರ ಕೇಂದ್ರ ಸಚಿವ ಅನಂತಕುಮಾರ್‌ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್‌ ರಾವ್‌ ಭೇಟಿ ನೀಡಿ  ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಶಿವಾಜಿನಗರದ ಚಿನ್ನಪ್ಪಗಾರ್ಡನ್‌ನಲ್ಲಿರುವ ಸಂತೋಷ್‌ ನಿವಾಸಕ್ಕೆ  ಭೇಟಿ ನೀಡಿದ ಬಿಜೆಪಿ ನಾಯಕರು, ಪಕ್ಷ ನಿಮ್ಮ ಜತೆಯಿದೆ. ಸಂಸತ್‌ ಅಧಿವೇಶನದಲ್ಲಿ ವಿಚಾರ ಪ್ರಸ್ತಾಪಿಸಿ ಕೇಂದ್ರ ಗೃಹ ಸಚಿವ ಗಮನಕ್ಕೂ ತರಲಾಗುವುದು ಎಂದು ಭರವಸೆ ನೀಡಿದರು. ತಮ್ಮ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಸಂತೋಷ್‌ ತಾಯಿ  ಇದೇ ಸಂದರ್ಭದಲ್ಲಿ ಮನವಿ ಮಾಡಿದರು. 

ನಂತರ  ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅನಂತಕುಮಾರ್‌, ಈ ಭಾಗದಲ್ಲಿ ಗಾಂಜಾ ಮಾರಾಟದ ಪ್ರಕರಣ ದಿನೇದಿನೆ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಹೋದವರ ಮೇಲೆ ಹಲ್ಲೆ ನಡೆಸುತ್ತಾರೆ. ಸಂತೋಷ್‌ ತಾಯಿ ಸಹ ಇದನ್ನು ಹೇಳಿದ್ದಾರೆ. ಸಮಾಜ ಘಾತುಕ ಶಕ್ತಿಗಳ ವಿರುದ್ಧ ಸಂತೋಷ್‌ ಹೋರಾಟ ಮಾಡುತ್ತಿರುವುದನ್ನು ಸಹಿಸದ ದುಷ್ಕರ್ಮಿಗಳು ಅಮಾನುಷವಾಗಿ ಕೊಂದಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ 30ಕ್ಕೂ ಅಧಿಕ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಕೊಲೆ ಮಾಡಲಾಗಿದೆ. ರಾಜ್ಯ ಸರ್ಕಾರ ವೈಫ‌ಲ್ಯದ ವಿರುದ್ಧ ಉಗ್ರ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು.

ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್‌ ರಾವ್‌ ಮಾತನಾಡಿ, ಬಾಡಿಗೆ ಮನೆಯಲ್ಲಿರುವ ಸಂತೋಷ್‌ ಕುಟುಂಬ ತುಂಬಾ ಬಡತನದಿಂದ ದಿನದೂಡುತ್ತಿದೆ. ಸಂತೋಷ್‌ ಒಳ್ಳೆಯ ಎಂದು ಸ್ಥಳೀಯರು ಹೇಳಿದ್ದಾರೆ. ರಾಜಕೀಯ ಬದ್ಧತೆ ಹಾಗೂ ಸಿದ್ಧಾಂತ ಅಡಿಯಲ್ಲಿ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದ ಸಂತೋಷ್‌ನನ್ನು ಕೊಂದಿದ್ದಾರೆ.

ರಾಜ್ಯದಲ್ಲಿ ನಡೆದಿರುವ ಹಿಂದು ಕಾರ್ಯಕರ್ತರ ಹತ್ಯೆಯನ್ನು ರಾಷ್ಟ್ರೀಯ ತನಿಖಾ ದಳದ ಮೂಲಕ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವರ ಮೇಲೆ ಒತ್ತಡ ಹೇರಲಿದ್ದೇವೆ ಎಂದು ಹೇಳಿದರು. ಮಾಜಿ ಸಚಿವರಾದ ಕಟ್ಟಾಸುಬ್ರಹ್ಮಣ್ಯ ನಾಯ್ಡು, ಗೋವಿಂದ ಕಾರಜೋಳ, ವಿ.ಸೋಮಣ್ಣ  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.