ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದಾರೆ: ಖಂಡ್ರೆ
Team Udayavani, Jan 12, 2019, 7:09 AM IST
ಬೆಂಗಳೂರು: “ಸಂಕ್ರಾಂತಿ ನಂತರ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಆದರೆ, ಬಿಜೆಪಿಯ ಶಾಸಕರು ನಿರಂತರ ನಮ್ಮ ಸಂಪರ್ಕದಲ್ಲಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, “ಬಿಜೆಪಿಯವರು ಆಪರೇಷನ್ ಕಮಲ ಮಾಡಲು ಸಾಕಷ್ಟು ಪ್ರಯತ್ನ ಮಾಡಿದ್ದರು.
ಆದರೆ, ಅವರು ಯಶಸ್ವಿಯಾಗಿರಲಿಲ್ಲ. ಈಗ ತಲೆ ಕೆಳಗೆ ಹಾಕಿ ಕಾಲು ಮೇಲೆ ಮಾಡಿದರೂ ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು. “ದೇಶದಲ್ಲಿ ಬಿಜೆಪಿ ದುರ್ಬಲವಾಗಿದೆ. ಬಿಜೆಪಿಯ ಅನೇಕ ಶಾಸಕರೇ ವೈಯಕ್ತಿಕವಾಗಿ ನನ್ನ ಸಂಪರ್ಕದಲ್ಲಿದ್ದಾರೆ. ಎಷ್ಟು ಜನ ನನ್ನ ಜತೆ ಸಂಪರ್ಕದಲ್ಲಿದ್ದಾರೆಂದು ಹೇಳಲು ಸಾಧ್ಯವಿಲ್ಲ. ಬಿಜೆಪಿಯವರು 24 ಗಂಟೆಯಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದ್ದರು.
ರಮೇಶ್ ಜಾರಕಿಹೊಳಿ ಬಿಜೆಪಿಯವರ ಸಂಪರ್ಕದಲ್ಲಿದ್ದಾರೆ ಎನ್ನುವುದು ಊಹಾಪೋಹ. ಅವರ ಅಸಮಾಧಾನ ಕಾಲ ಕ್ರಮೇಣ ಸರಿಹೋಗಲಿದೆ. ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ’ ಎಂದು ಹೇಳಿದರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ರಾಜೀನಾಮೆ ನೀಡುವ ಅಗತ್ಯವಿಲ್ಲ. ಈಗಾಗಲೇ ಪ್ರಕರಣವನ್ನು ಎಸಿಬಿಗೆ ವಹಿಸಲಾಗಿದೆ. ಈ ಹಿಂದೆ ಡಿ.ಕೆ.ರವಿ ಪ್ರಕರಣದಲ್ಲಿ ಏನಾಗಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ. ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಯಾಗಲಿ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.