ರಾಜ್ಯೋತ್ಸವದಿಂದ ಪರಿವರ್ತನಾ ರಥಯಾತ್ರೆ

Team Udayavani, Sep 13, 2017, 6:25 AM IST

170912kpn88.jpg

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಬಿಜೆಪಿ ಹಮ್ಮಿಕೊಳ್ಳಲಿರುವ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ರಥಯಾತ್ರೆ ನ.1ರ ರಾಜ್ಯೋತ್ಸವ ದಿನದಂದು ಬೆಂಗಳೂರಿನಿಂದ ಆರಂಭವಾಗಲಿದೆ.

ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರತಿ ಬೂತ್‌ನಿಂದ ಮೂರು ಬೈಕ್‌ಗಳಲ್ಲಿ ರಾಜ್ಯದಲ್ಲಿರುವ ಸುಮಾರು 55 ಸಾವಿರ ಬೂತ್‌ಗಳಿಂದ 3.3 ಲಕ್ಷ ಮಂದಿ ಆಗಮಿಸಲಿದ್ದಾರೆ. ನಗರದ ಅರಮನೆ ಮೈದಾನದದಲ್ಲಿ ಮಂಗಳವಾರ ಬಿಜೆಪಿ ಚುನಾವಣಾ ಉಸ್ತುವಾರಿಗಳ ಕರ್ನಾಟಕ ದಕ್ಷಿಣ ಭಾಗದ ಕಾರ್ಯಾಗಾರ ಉದ್ಘಾಟಿಸಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ .ಯಡಿಯೂರಪ್ಪ ಈ ವಿಷಯ ತಿಳಿಸಿದರು.

ಬೈಕ್‌ಗಳಲ್ಲಿ ಬರುವ ಕಾರ್ಯಕರ್ತರು ಬಿಜೆಪಿ ಧ್ವಜದೊಂದಿಗೆ ಕನ್ನಡ ಧ್ವಜವನ್ನೂ ಹಾಕಿಕೊಂಡು ಬರುವ ಮೂಲಕ
ರಾಜ್ಯೋತ್ಸವವನ್ನೂ ಆಚರಿಸಲಿದ್ದಾರೆ ಎಂದು ಹೇಳಿದರು.

ನ.1ರಿಂದ ಆರಂಭವಾಗುವ ರಥಯಾತ್ರೆ 2018ರ ಜ.15ರವರೆಗೆ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳನ್ನು ತಲುಪಲಿದೆ.

ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್  ಶಾ ಇಬ್ಬರನ್ನೂ ಆಹ್ವಾನಿಸ
ಲಾಗುವುದು. ರಥಯಾತ್ರೆ ತೆರಳುವ ವೇಳೆ ಕೆಲವು ಜಿಲ್ಲೆಗಳಲ್ಲಿ ನವಶಕ್ತಿ ಸಮಾವೇಶ ನಡೆಸಲಾಗುತ್ತದೆ. ಈ ಸಮಾವೇಶಕ್ಕೆ ಪ್ರತಿ ಬೂತ್‌ನಿಂದ 9 ಮಂದಿ ಪಾಲ್ಗೊಳ್ಳಲಿದ್ದಾರೆ ಎಂದರು.

ಪಕ್ಷ ಸಂಘಟನೆ ದೃಷ್ಟಿಯಿಂದ ಬೂತ್‌ ಮಟ್ಟದಲ್ಲಿ ಕಾರ್ಯಾಗಾರ ನಡೆಸಬೇಕಿದೆ. ಪಕ್ಷ ಅಧಿಕಾರಕ್ಕೆ ಬರಬೇಕಾದರೆ ತಳಮಟ್ಟದಲ್ಲಿ
ಉತ್ತಮ ಕೆಲಸ ಆಗಬೇಕು. ಆ ನಿಟ್ಟಿನಲ್ಲಿ ಬೂತ್‌ ಮಟ್ಟದ ಕಾರ್ಯಕರ್ತರನ್ನು ಹುರಿದುಂಬಿಸುವಕೆಲಸವನ್ನು ಉಸ್ತುವಾರಿಗಳು
ನೋಡಿಕೊಳ್ಳಬೇಕು. ಕಾರ್ಯಕರ್ತರು ಚುನಾವಣೆಗೆ ಆರು ತಿಂಗಳು ಸಮಯವನ್ನು ಕಡ್ಡಾಯವಾಗಿ ನೀಡಬೇಕು ಎಂದು ಸಲಹೆ ಮಾಡಿದರು.

ಬಿಜೆಪಿಯೇ ಅಭ್ಯರ್ಥಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಯಾಗಲು ಬಡಿದಾಡುವುದು ಬೇಡ. ಅಲ್ಲಿ ಬಿಜೆಪಿಯೇ ಅಭ್ಯರ್ಥಿಯಾಗಲಿದ್ದು, ಕಣಕ್ಕಿಳಿ ಯುವವರು ನೆಪಮಾತ್ರ ಇರುತ್ತಾರೆ. ಸಮೀಕ್ಷೆಗಳ ಬಳಿಕ ಅವರನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿ ಯಾಗುವವರು ಸ್ಥಳೀಯ ಜ್ವಲಂತ ಸಮಸ್ಯೆಗಳನ್ನು ತಿಳಿದು ಅದಕ್ಕೆ ಪರಿಹಾರ ರೂಪಿಸುವ ಸಾಮರ್ಥ್ಯ ಹೊಂದಿರುವವರಾಗಬೇಕು ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್‌, ಸಂಸದರಾದ ಪ್ರಹ್ಲಾದ
ಜೋಶಿ, ಶೋಭಾ ಕರಂದ್ಲಾಜೆ, ನಳಿನ್‌ಕುಮಾರ್‌ ಕಟೀಲ್‌, ಶಾಸಕ ಸಿ.ಟಿ.ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಮತ್ತಿತರರು ಇದ್ದರು.

ಭದ್ರತೆಗೆ ಬೆದರಿಕೆ ಬೆಂಗಳೂರು: “ಮುಸ್ಲಿಂ ಸಮುದಾಯದಲ್ಲಿ ಅಲ್ಪಸಂಖ್ಯೆಯಲ್ಲಿರುವ ಮೂಲಭೂತವಾದಿಗಳನ್ನು ಬೆಂಬಲಿಸುವ ಮೂಲಕ ರಾಜ್ಯದ ಕಾಂಗ್ರೆಸ್‌ ಸರ್ಕಾರವು, ದೇಶ ಮತ್ತು ರಾಜ್ಯದ ಭದ್ರತೆಗೆ ಬೆದರಿಕೆಯೊಡ್ಡುತ್ತಿದೆ’ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರುಳಿಧರ ರಾವ್‌ ಆರೋಪಿಸಿದರು. ರಾಜ್ಯದಲ್ಲಿ ರಾಜಕೀಯ ಹತ್ಯೆಗಳು ದಿನನಿತ್ಯದ ಕೃತ್ಯಗಳಾಗಿವೆ. ಆದರೆ, ಈ ಸರ್ಕಾರ ಅದನ್ನು ತಡೆಗಟ್ಟಲು ಮತ್ತು ಆರೋಪಿಗಳನ್ನು ಬಂಧಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಬಿಜೆಪಿಯೂ ರಾಜಕೀಯ ಹತ್ಯೆಯ ಬಲಿಪಶುವಾಗಿದೆ.

ಕಾಂಗ್ರೆಸ್‌ ಸರ್ಕಾರದ ಮತೀಯವಾದಿಗಳು ಮತ್ತು ತೀವ್ರವಾದಿಗಳನ್ನು ಬೆಂಬಲಿಸುವ ನೀತಿ ದೇಶದ ಭದ್ರತೆಗೆ ಅಪಾಯ ತಂದೊಡ್ಡುವುದರ ಜತೆಗೆ ಶಾಂತಿ ಹದಗೆಡಲೂ ಕಾರಣವಾಗುತ್ತದೆ ಎಂದರು.

ಟಾಪ್ ನ್ಯೂಸ್

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

3

Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.