ಬಿಜೆಪಿ ಪರಿವರ್ತನಾ ಯಾತ್ರೆಗೆ ಇಂದು ತೆರೆ
Team Udayavani, Jan 25, 2018, 6:00 AM IST
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಉದ್ದೇಶದೊಂದಿಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಆರಂಭವಾದ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ಗುರುವಾರ ಮೈಸೂರಿನಲ್ಲಿ ಕೊನೆಗೊಳ್ಳಲಿದೆ.
ಕಳೆದ ನ. 2ರಂದು ಬೆಂಗಳೂರಿನಲ್ಲಿ ಆರಂಭವಾದ ಪರಿವರ್ತನಾ ಯಾತ್ರೆ ಬುಧವಾರದ ವೇಳೆಗೆ 220 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿದ್ದು, ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸಮಾವೇಶದೊಂದಿಗೆ ಮುಕ್ತಾಯಗೊಳ್ಳುತ್ತದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಬೇಕು ಎಂಬ ಉದ್ದೇಶದಿಂದ ಯಾತ್ರೆಯ ಅಧಿಕೃತ ಸಮಾರೋಪವನ್ನು ಫೆ. 4ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗುತ್ತದೆ.
ಯಡಿಯೂರಪ್ಪ ಅವರು ನ. 2ರಿಂದ ಒಟ್ಟು 85 ದಿನ ಸತತ ಯಾತ್ರೆ ನಡೆಸಿದ್ದು, ಬುಧವಾರದವರೆಗೆ 220 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 10500 ಕಿ.ಮೀ.ಗೂ ಹೆಚ್ಚು ದೂರವನ್ನು ಕ್ರಮಿಸಿದ್ದಾರೆ. 130ಕ್ಕೂ ಹೆಚ್ಚು ಸಾರ್ವಜನಿಕ ಸಭೆಗಳನ್ನು ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಒಂದರಂತೆ, ಕೆಲವು ಜಿಲ್ಲೆಗಳಲ್ಲಿ ಎರಡು ಅಥವಾ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಒಂದರಂತೆ ಸಮಾವೇಶಗಳನ್ನು ನಡೆಸಲಾಗಿದೆ.
ಆರಂಭ ವಿಘ್ನ, ನಂತರ ನಿರ್ವಿಘ್ನ:
ನ. 2ರಂದು ಬೆಂಗಳೂರಿನಲ್ಲಿ ನಡೆದ ಪರಿವರ್ತನಾ ಯಾತ್ರೆಯ ಉದ್ಘಾಟನಾ ಸಮಾರಂಭ ಜನರನ್ನು ಸೇರಿಸುವಲ್ಲಿ ವಿಫಲವಾಗಿತ್ತು. ಉದ್ಘಾಟನೆ ಅಂಗವಾಗಿ ದಕ್ಷಿಣ ಕರ್ನಾಟಕ ಭಾಗದ ಕಾರ್ಯಕರ್ತರ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಬೈಕ್‌ಗಳನ್ನು ನಿಲ್ಲಿಸಲು ಸಮಾವೇಶದ ಹೊರಭಾಗ ನಾಲ್ಕು ಕಡೆ ವ್ಯವಸ್ಥೆ ಮಾಡಿದ್ದರಿಂದ ಬೈಕ್‌ಗಳಲ್ಲಿ ಬಂದವರೂ ಸಮಾವೇಶ ಸ್ಥಳಕ್ಕೆ ಬರಲಿಲ್ಲ. ಇನ್ನೊಂದೆಡೆ ಕಾರ್ಯಕ್ರಮವನ್ನು ಡ್ರೋಣ್ ಮೂಲಕ ಚಿತ್ರೀಕರಿಸಬೇಕೆಂಬ ಕಾರಣಕ್ಕೆ ಶಾಮಿಯಾನ ಹಾಕದ ಕಾರಣ ಕುರ್ಚಿಗಳು ಖಾಲಿಯಾಗಿದ್ದವು.
ಹೀಗಾಗಿ ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿ ಯಾತ್ರೆ ವಿಫಲವಾಗಬಹುದು ಎಂಬ ಆತಂಕ ಕಾಣಿಸಿಕೊಂಡಿತ್ತು. ಆದರೆ, ಒಂದೆರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆ ಯಾತ್ರೆಗೆ ಹೆಚ್ಚಿನ ಜನ ಸೇರಿದ್ದು, ಆರಂಭದ ವಿಘ್ನ ದೂರವಾಗಿ ನಿರ್ವಿಘ್ನವಾಗಿ ನಡೆಯುವಂತಾಯಿತು. ಬೆಂಗಳೂರಿನಲ್ಲಿ ನಡೆದ ಬೈಕ್ ರ್ಯಾಲಿ ವಿಫಲವಾಗಿದ್ದರಿಂದ ಹುಬ್ಬಳ್ಳಿಯ ಸಮಾವೇಶಕ್ಕೆ ಉದ್ದೇಶಿಸಿದ್ದ ಬೈಕ್ ರ್ಯಾಲಿಯನ್ನು ಕೈಬಿಡಲಾಗಿತ್ತು.
ಯಾತ್ರೆಯಲ್ಲಿ ಪಾಲ್ಗೊಂಡ ಪ್ರಮುಖರು:
ಪರಿವರ್ತನಾ ಯಾತ್ರೆಯಲ್ಲಿ ಉದ್ಘಾಟನೆ ಸೇರಿದಂತೆ ಎರಡು ಸಮಾವೇಶಗಳಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಂಡಿದ್ದು, ಗುರುವಾರ ನಡೆಯುವ ಕೊನೆಯ ಸಮಾವೇಶದಲ್ಲೂ ಭಾಗವಹಿಸಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹುಬ್ಬಳ್ಳಿ ಮತ್ತು ಬೆಂಗಳೂರಿನ ಸಮಾವೇಶಗಳಲ್ಲಿ ಪಾಲ್ಗೊಂಡಿದ್ದಾರೆ. ಉಳಿದಂತೆ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ದೇಶ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್, ಚತ್ತೀಸ್‌ಗಡ ಮುಖ್ಯಮಂತ್ರಿ ರಮಣ್ ಸಿಂಗ್, ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್, ಚುನಾವಣಾ ಉಸ್ತುವಾರಿಗಳೂ ಆಗಿರುವ ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಪಿಯೂಷ್ ಗೋಯೆಲ್, ರಾಜ್ಯದ ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಅನಂತಕುಮಾರ್ ಹೆಗಡೆ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ, ರಾಜ್ಯದ ಪ್ರತಿ ನಾಯಕರು ಯಾತ್ರೆಯಲ್ಲಿ 10ರಿಂದ 15 ದಿನ ಭಾಗವಹಿಸಿದ್ದರು.
ಚುನಾವಣಾ ರಣಕಹಳೆ
ರಾಜ್ಯದ ಇತಿಹಾಸದಲ್ಲೇ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ತಲುಪುವಂತಹ ಮೊದಲ ಯಾತ್ರೆ ಇದಾಗಿದ್ದು,
ಕಾರ್ಯಕರ್ತರಲ್ಲಿ ಹೊಸ ಚೈತನ್ಯ, ಹುಮ್ಮಸ್ಸು ಮೂಡಿದೆ. ಪಕ್ಷ ಸಂಘಟನೆ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯವನ್ನು ಜನರಿಗೆ ತಲುಪಿಸಲಾಗಿದೆ. ಫೆ.4ರ ಯಾತ್ರೆಯ ಸಮಾರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ಮೂಲಕ ವಿಧಾನಸಭೆ ಚುನಾವಣೆಯ ರಣಕಹಳೆ ಮೊಳಗಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.